ಕಿಚ್ಚನ ಚಪ್ಪಾಳೆ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ ನಮ್ರತಾ ಗೌಡ; ಫ್ಯಾನ್ಸ್ ಅಸಮಧಾನ

ಒಂದು ವಾರದ ಪರ್ಫಾರ್ಮೆನ್ಸ್​ನ ಗಮನದಲ್ಲಿ ಇಟ್ಟುಕೊಂಡು ಈ ಚಪ್ಪಾಳೆ ಕೊಡಲಾಗುತ್ತದೆ. ಹೀಗಿರುವಾಗ ಅದರ ಬಗ್ಗೆಯೇ ಅನುಮಾನ ವ್ಯಕ್ತಪಡಿಸೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಕಿಚ್ಚನ ಚಪ್ಪಾಳೆ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದ ನಮ್ರತಾ ಗೌಡ; ಫ್ಯಾನ್ಸ್ ಅಸಮಧಾನ
ಸುದೀಪ್​-ನಮ್ರತಾ
Follow us
ರಾಜೇಶ್ ದುಗ್ಗುಮನೆ
|

Updated on:Dec 11, 2023 | 9:25 AM

ಕಿಚ್ಚ ಸುದೀಪ್ (Kichcha Sudeep) ಅವರು ಪ್ರತಿ ವಾರ ಕಿಚ್ಚನ ಚಪ್ಪಾಳೆ ನೀಡುತ್ತಾರೆ. ಆ ವಾರ ಪೂರ್ತಿ ಯಾರು ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದರೋ ಅವರಿಗೆ ಈ ಚಪ್ಪಾಳೆ ಸಿಗುತ್ತದೆ. ಎಂಟನೇ ವಾರ ಈ ಚಪ್ಪಾಳೆ ನಮ್ರತಾಗೆ ಸಿಕ್ಕಿತ್ತು. ಒಂಭತ್ತನೇ ವಾರ ಕಾರ್ತಿಕ್ ಮಹೇಶ್ ಅವರು ಸುದೀಪ್ ನೀಡುವ ಈ ಗೌರವವನ್ನು ಪಡೆದರು. ಈಗ ನಮ್ರತಾ ಗೌಡ ಅವರು ಕಿಚ್ಚನ ಚಪ್ಪಾಳೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ವಿನಯ್ ಹಾಗೂ ನಮ್ರತಾ ಈ ಬಗ್ಗೆ ಚರ್ಚೆ ಮಾಡಿದ್ದಾರೆ.

ಕಳೆದವಾರ ಕಾರ್ತಿಕ್ ಅವರಿಂದ ಕೆಲವು ತಪ್ಪುಗಳು ಆಗಿದ್ದವು. ಉಳಿದ ಎಲ್ಲರಿಗೆ ಹೋಲಿಸಿದರೆ ಅವರ ಪರ್ಫಾರ್ಮೆನ್ಸ್ ಉತ್ತಮವಾಗಿತ್ತು. ಈ ವಾರ ಯಾರಿಗೂ ಕಿಚ್ಚನ ಚಪ್ಪಾಳೆ ಸಿಗುವುದಿಲ್ಲ ಎಂದು ಕೆಲವರು ಭಾವಿಸಿದ್ದರು. ಆದರೆ, ಸುದೀಪ್ ಅವರು ಕಾರ್ತಿಕ್ ಅವರಿಗೆ ಕಿಚ್ಚನ ಚಪ್ಪಾಳೆ ನೀಡಿದರು. ಇದನ್ನು ನೋಡಿ ವಿನಯ್ ಅವರು ಸಾಕಷ್ಟು ಉರಿದುಕೊಂಡರು. ನಮ್ರತಾ ಅವರಿಗಂತೂ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಶನಿವಾರದ ಎಪಿಸೋಡ್ ಮುಗಿದ ಬಳಿಕ ಈ ಬಗ್ಗೆ ಚರ್ಚೆ ಮಾಡಿದ್ದಾರೆ.

ನಮ್ರತಾ, ವಿನಯ್ ಹಾಗೂ ಮೈಕಲ್ ಕುಳಿತಿದ್ದರು. ಈ ವೇಳೆ ಕಿಚ್ಚನ ಚಪ್ಪಾಳೆ ಬಗ್ಗೆ ಚರ್ಚೆ ಆಗಿದೆ. ‘ಕಿಚ್ಚನ ಚಪ್ಪಾಳೆಯನ್ನು ಯಾರೂ ಇಲ್ಲ ಎಂದು ಅವರಿಗೆ ನೀಡಿದ್ರಾ ಅಥವಾ ನಿಜವಾಗಲೂ ಅವರ ಸಾಮರ್ಥ್ಯ ನೋಡಿ ಕೊಟ್ರಾ’ ಎಂದು ನಮ್ರತಾ ಪ್ರಶ್ನೆ ಮಾಡಿದ್ದಾರೆ. ಆಗ ವಿನಯ್, ‘ನಾನು ಕೆಟ್ಟದಾಗಿ ಆಡಿದೆ, ಅದಕ್ಕೆ ಕಾರ್ತಿಕ್​ಗೆ ಸಿಕ್ತು’ ಎಂದಿದ್ದಾರೆ. ಸದ್ಯ ನಮ್ರತಾ ಹೇಳಿಕೆಗೆ ಸಾಕಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಕೊಟ್ಟ ಮಾತನ್ನು ಉಳಿಸಿಕೊಂಡ್ರಿ’; ನಮ್ರತಾಗೆ ಕಿಚ್ಚನ ಚಪ್ಪಾಳೆ ಕೊಟ್ಟು ಪ್ರತಾಪ್​ನ​ ಕಾಲೆಳೆದ ಸುದೀಪ್

ಕಿಚ್ಚನ ಚಪ್ಪಾಳೆ ಸುಖಾಸುಮ್ಮನೆ ಯಾರಿಗೂ ಸಿಗುವುದಿಲ್ಲ. ಒಂದು ವಾರದ ಪರ್ಫಾರ್ಮೆನ್ಸ್​ನ ಗಮನದಲ್ಲಿ ಇಟ್ಟುಕೊಂಡು ಈ ಚಪ್ಪಾಳೆ ಕೊಡಲಾಗುತ್ತದೆ. ಹೀಗಿರುವಾಗ ಅದರ ಬಗ್ಗೆಯೇ ಅನುಮಾನ ವ್ಯಕ್ತಪಡಿಸೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ನಮ್ರತಾಗೆ ಚಪ್ಪಾಳೆ ನೀಡಿದ್ದಕ್ಕೆ ಸುದೀಪ್ ಅವರಿಗೆ ವಿಷಾದ ಉಂಟಾಗಿರಬಹುದು’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Mon, 11 December 23

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು