Sign In

By signing in or creating an account, you agree with Associated Broadcasting Company's Terms & Conditions and Privacy Policy.

Namratha Gowda: ಶಾಕಿಂಗ್ ನಿರ್ಧಾರ; ಕ್ಯಾಪ್ಟನ್ಸಿ ಟಾಸ್ಕ್​ನಿಂದ ವಿನಯ್​ನೇ ಹೊರಗಿಟ್ಟ ನಮ್ರತಾ

ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಗೌಡ ಅವರು ಶಾಕಿಂಗ್ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ದೂರ ಇಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈ ಪ್ರೋಮೋ ವೈರಲ್ ಆಗಿದೆ.

Namratha Gowda: ಶಾಕಿಂಗ್ ನಿರ್ಧಾರ; ಕ್ಯಾಪ್ಟನ್ಸಿ ಟಾಸ್ಕ್​ನಿಂದ ವಿನಯ್​ನೇ ಹೊರಗಿಟ್ಟ ನಮ್ರತಾ
ವಿನಯ್-ನಮ್ರತಾ
Follow us
ರಾಜೇಶ್ ದುಗ್ಗುಮನೆ
|

Updated on: Nov 30, 2023 | 2:31 PM

ಬಿಗ್ ಬಾಸ್​ನಲ್ಲಿರುವ ನಮ್ರತಾ ಗೌಡ (Namratha Gowda), ಸ್ನೇಹಿತ್ ಗೌಡ ಹಾಗೂ ವಿನಯ್ ಗೌಡ ಅವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರೂ ಒಂದೇ ಗ್ಯಾಂಗ್​ನಲ್ಲಿ ಕಾಣಿಸಿಕೊಂಡಿದ್ದರು. ನಮ್ರತಾಗೆ ಪದೇ ಪದೇ ಈ ಬಗ್ಗೆ ಕಿವಿಮಾತು ಬರುತ್ತಲೇ ಇತ್ತು. ಆದರೆ, ಅವರು ಇದನ್ನು ನಿರ್ಲಕ್ಷ್ಯ ಮಾಡಿದ್ದರು. ಈಗ ಅವರು ಬದಲಾದಂತೆ ಇದೆ! ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗೆ ಇಡುವ ಮೂಲಕ ನಮ್ರತಾ ಅಚ್ಚರಿ ಮೂಡಿಸಿದ್ದಾರೆ. ಈಗ ರಿಲೀಸ್ ಆಗಿರುವ ಪ್ರೋಮೋ ಎಲ್ಲರ ಗಮನ ಸೆಳೆದಿದೆ.

ಇತ್ತೀಚೆಗೆ ಪವಿ ಪೂವಪ್ಪ ಹಾಗೂ ಅವಿನಾಶ್ ಶೆಟ್ಟಿ ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅವರು ಹೊರಗೆ ನಡೆದ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿದ್ದಾರೆ. ‘ನೀವು ಇನ್ನೂ ವಿನಯ್ ಅವರ ನೆರಳಲ್ಲೇ ಇದ್ದೀರಿ’ ಎಂದು ಪವಿ ಅವರು ನಮ್ರತಾಗೆ ಹೇಳಿದರು. ಇದನ್ನು ನಮ್ರತಾ ಗಂಭೀರವಾಗಿ ಸ್ವೀಕರಿಸಿದಂತೆ ಇದೆ.

ಈ ವಾರ ನಮ್ರತಾ ಅವರು ವಿನಯ್ ಗುಂಪನ್ನು ಬಿಟ್ಟು ಪ್ರತಾಪ್ ಗ್ಯಾಂಗ್ ಸೇರಿಕೊಂಡರು. ಈ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದರು. ಈಗ ಅವರು ಮತ್ತೊಂದು ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ‘ನಮ್ರತಾ ಈ ವಾರದ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಒಬ್ಬರನ್ನು ಹೊರಗೆ ಇಡಿ’ ಎಂದು ಬಿಗ್ ಬಾಸ್ ಕಡೆಯಿಂದ ಆದೇಶ ಬಂತು. ‘ನಾನು ವಿನಯ್ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗೆ ಇಡುತ್ತಿದ್ದೇನೆ. ಅವರಿಗೆ ಕೋಪ ಜಾಸ್ತಿ ಇದೆ. ಹೀಗಾಗಿ, ಈ ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದರು ನಮ್ರತಾ.

ಇದನ್ನೂ ಓದಿ:  ಕಿಸ್ ಕೊಟ್ಟು ನಾಚಿಕೆ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ನಮ್ರತಾ ಗೌಡ

ಈ ವಾರ ಕ್ಯಾಪ್ಟನ್ ಆದರೆ ಹೆಚ್ಚಿನ ಅಧಿಕಾರ ಸಿಗಲಿದೆ ಎಂದು ಬಿಗ್ ಬಾಸ್ ಹೇಳಿದ್ದರು. ಈ ಕಾರಣಕ್ಕೆ ವಿನಯ್ ಅವರು ಈ ವಾರ ಕ್ಯಾಪ್ಟನ್ ಆಗಲೇ ಬೇಕು ಎಂದು ಗಟ್ಟಿ ನಿರ್ಧಾರ ಮಾಡಿದ್ದರು. ಆದರೆ, ನಮ್ರತಾ ಕೊಟ್ಟ ಶಾಕ್​ನಿಂದ ಅವರಿಗೆ ಚೇತರಿಸಿಕೊಳ್ಳೋಕೆ ಆಗುತ್ತಿಲ್ಲ. ‘ಈ ಜರ್ನಿಯಲ್ಲಿ ಯಾರೂ ಬರಲ್ಲ ಅನ್ನೋ ಸತ್ಯ ಇವತ್ತು ಗೊತ್ತಾಯ್ತು’ ಎಂದಿದ್ದಾರೆ ವಿನಯ್​. ಎಪಿಸೋಡ್​ನಲ್ಲಿ ನಿಜಕ್ಕೂ ಆಗಿದ್ದೇನು ಎಂಬುದನ್ನು ತಿಳಿದುಕೊಳ್ಳಲು ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗುವ ಎಪಿಸೋಡ್ ನೊಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ