AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಮನೆಯಿಂದ ಪ್ರಮುಖ ವ್ಯಕ್ತಿ ಔಟ್; ಫಿನಾಲೆ ವಾರ ತಲುಪಿದ ಆರು ಮಂದಿ

ಸದ್ಯ ದೊಡ್ಮನೆಯಲ್ಲಿ ತುಕಾಲಿ ಸಂತೋಷ್, ವರ್ತೂರು ಸಂತೋಷ್, ಕಾರ್ತಿಕ್ ಮಹೇಶ್, ವಿನಯ್ ಗೌಡ, ನಮ್ರತಾ ಗೌಡ, ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್ ಇದ್ದಾರೆ. ಈ ಪೈಕಿ ತುಕಾಲಿ ಹಾಗೂ ಸಂಗೀತಾ ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ. ಶನಿವಾರದ (ಜ.20) ಎಪಿಸೋಡ್​ನಲ್ಲಿ ವರ್ತೂರು ಸೇವ್ ಆಗಿದ್ದಾರೆ. ಈಗ ನಮ್ರತಾ ಗೌಡ ಅವರು ಎಲಿಮಿನೇಟ್ ಆಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಈ ವಾರ ಮನೆಯಿಂದ ಪ್ರಮುಖ ವ್ಯಕ್ತಿ ಔಟ್; ಫಿನಾಲೆ ವಾರ ತಲುಪಿದ ಆರು ಮಂದಿ
ನಮ್ರತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 21, 2024 | 1:58 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada) ಈಗಾಗಲೇ ಕೊನೆಯ ಹಂತ ತಲುಪಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಬಿಗ್ ಬಾಸ್ (BBK 10) ಮನೆಯಲ್ಲಿ ಈ ವಾರ ಉಳಿದುಕೊಂಡಿದ್ದ ಆರು ಮಂದಿ. ಈ ಪೈಕಿ ಐವರು ನಾಮಿನೇಟ್ ಆಗಿದ್ದಾರೆ. ಈಗ ಮನೆಯಿಂದ ಒಬ್ಬರು ಎಲಿಮಿನೇಟ್ (Bigg Boss Elimination) ಆಗಲಿದ್ದಾರೆ. ಅದು ಯಾರು ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ ಪ್ರಮುಖ ವ್ಯಕ್ತಿಯೇ ಎಲಿಮಿನೇಟ್ ಆಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಿದೆ.

ಸದ್ಯ ದೊಡ್ಮನೆಯಲ್ಲಿ ತುಕಾಲಿ ಸಂತೋಷ್, ವರ್ತೂರು ಸಂತೋಷ್, ಕಾರ್ತಿಕ್ ಮಹೇಶ್, ವಿನಯ್ ಗೌಡ, ನಮ್ರತಾ ಗೌಡ, ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್ ಇದ್ದಾರೆ. ಈ ಪೈಕಿ ತುಕಾಲಿ ಸಂತೋಷ್ ಹಾಗೂ ಸಂಗೀತಾ ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ. ಶನಿವಾರದ (ಜನವರಿ 20) ಎಪಿಸೋಡ್​ನಲ್ಲಿ ವರ್ತೂರು ಸಂತೋಷ್ ಸೇವ್ ಆಗಿದ್ದಾರೆ. ಈಗ ನಮ್ರತಾ ಗೌಡ ಅವರು ಎಲಿಮಿನೇಟ್ ಆಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಗೌಡ ಮೊದಲು ವಿನಯ್ ಗೌಡ ಅವರ ಚಮಚ ರೀತಿ ಕಾಣಿಸುತ್ತಿದ್ದರು. ಯಾವಾಗ ಅವರು ವಿನಯ್ ಅವರಿಂದ ಅಂತರ ಕಾಯ್ದುಕೊಂಡರೋ ಆಗ ಅವರಲ್ಲಿ ಸಾಕಷ್ಟು ಬದಲಾವಣೆ ಆಯಿತು. ಅವರು ಉತ್ತಮ ಪ್ರದರ್ಶನ ನೀಡಿದರು. ಈ ಕಾರಣಕ್ಕೆ ಅವರಿಗೆ ‘ಉತ್ತಮ’, ‘ಕಿಚ್ಚನ ಚಪ್ಪಾಳೆ’ ಸಿಕ್ಕಿತು. ಅವರು ಕ್ಯಾಪ್ಟನ್ ಕೂಡ ಆದರು. ಇತ್ತೀಚೆಗೆ ಅವರು ಡಲ್​ ಹೊಡೆದಿದ್ದರು.

ಕಾರ್ತಿಕ್​ ಮೇಲೆ ಸಂಗೀತಾ, ನಮ್ರತಾ ಮಾತಿನ ದಾಳಿ; ಜೊತೆ ಇದ್ರೂ ಕಷ್ಟ, ಒಬ್ಬರೇ ಇದ್ರೂ ಕಷ್ಟ

ಕಾರ್ತಿಕ್ ಹಾಗೂ ನಮ್ರತಾ ಆಪ್ತವಾಗಿ ನಡೆದುಕೊಂಡಿದ್ದರು. ಅತಿಥಿಯಾಗಿ ಬಂದ ಸ್ನೇಹಿತ್ ಅವರು ನಮ್ರತಾನ ಡಿಮೋಟಿವೇಟ್ ಮಾಡಿದ್ದರು. ಇದರಿಂದ ಅವರ ಆಟ ಸಾಕಷ್ಟು ಡಲ್​ ಆಗಿತ್ತು. ಇದು ಅವರ ಜರ್ನಿ ಮೇಲೆ ಸಾಕಷ್ಟು ಎಫೆಕ್ಟ್ ಆಗಿದೆ. ಅವರು ಕಡಿಮೆ ವೋಟ್ ಪಡೆದು ಔಟ್ ಆಗಿದ್ದಾರೆ ಎನ್ನಲಾಗಿದೆ. ಫಿನಾಲೆ ತಲುಪಬೇಕು ಎಂಬ ಕನಸು ನುಚ್ಚುನೂರಾಗಿದೆ.

ನಮ್ರತಾ ಅವರನ್ನು ಬಿಟ್ಟರೆ ‘ಬಿಗ್ ಬಾಸ್’ ಮನೆಯಲ್ಲಿ ಉಳಿದಿರೋದು ಆರು ಮಂದಿ ಮಾತ್ರ. ತುಕಾಲಿ ಸಂತೋಷ್, ವರ್ತೂರು ಸಂತೋಷ್, ಕಾರ್ತಿಕ್ ಮಹೇಶ್, ವಿನಯ್ ಗೌಡ, ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್ ಮಧ್ಯೆ ಆಟ ಮುಂದುವರಿದಿದೆ. ಸಂಗೀತಾಗೆ ಈಗಾಗಲೇ ಫಿನಾಲೆ ಟಿಕೆಟ್ ಸಿಕ್ಕಿದೆ. ತುಕಾಲಿ ಅವರು ಈ ವಾರ ನಾಮಿನೇಟ್ ಆಗದೆ ಫಿನಾಲೆ ವೀಕ್ ತಲುಪಿದ್ದಾರೆ. ವರ್ತೂರು ಸಂತೋಷ್ ಈ ವಾರ ಮೊದಲು ಸೇವ್ ಆಗಿ ಅವರು ಫಿನಾಲೆ ವಾರಕ್ಕೆ ಕಾಲಿಟ್ಟಿದ್ದಾರೆ. ಉಳಿದ ನಾಲ್ಕು ಸ್ಥಾನಕ್ಕೆ ಐದು ಜನರ ಮಧ್ಯದಲ್ಲಿ ಪೈಪೋಟಿ ನಡೆಯುತ್ತಿದೆ. ಶೀಘ್ರದಲ್ಲೇ ಮತ್ತೊಂದು ಎಲಿಮಿನೇಷನ್ ನಡೆಯಲಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ