AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಮಾನುಷ ತಿರುವಿನ ಪ್ರೇಮಕತೆ ‘ನೂರು ಜನ್ಮಕೂ’: ಡಿ.23ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ

‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಹೊಸ ಧಾರಾವಾಹಿ ಆರಂಭ ಆಗುತ್ತಿದೆ. ‘ನೂರು ಜನ್ಮಕೂ’ ಶೀರ್ಷಿಕೆಯ ಈ ಸೀರಿಯಲ್​ಗೆ ಶ್ರವಂತ್ ರಾಧಿಕಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಾ ಶೆಣೈ ಅವರು ನಿರ್ಮಾಣ ಮಾಡುತ್ತಿದ್ದು, ಡಿ.23ರಿಂದ ಸೀರಿಯಲ್ ಶುರು ಆಗಲಿದೆ. ಧನುಷ್ ಗೌಡ, ಗಿರಿಜಾ ಲೋಕೇಶ್, ಬಿ.ಎಂ. ವೆಂಕಟೇಶ್, ಭಾಗ್ಯಶ್ರೀ, ಅರ್ಚನಾ ಉಡುಪ ಮುಂತಾದವರು ನಟಿಸುತ್ತಿದ್ದಾರೆ.

ಅತಿಮಾನುಷ ತಿರುವಿನ ಪ್ರೇಮಕತೆ ‘ನೂರು ಜನ್ಮಕೂ’: ಡಿ.23ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ
Nooru Janmaku
ಮದನ್​ ಕುಮಾರ್​
|

Updated on: Dec 17, 2024 | 6:02 PM

Share

ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8.30ಕ್ಕೆ ಪ್ರಸಾರ ಆಗಲಿರುವ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ.

ಮೊದಲ ನೋಟಕ್ಕೆ ‘ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕತೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರ ಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ.

ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವ ಹೆಣ್ಣಾಗಿ ಮೈತ್ರಿ ನೋಡುಗರ ಮನಸನ್ನು ಆವರಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ. ಧಾರಾವಾಹಿಯ ಕತೆಯನ್ನು ಚಿಕ್ಕಮಗಳೂರಿನ ಚೆಂದದ ಹಿನ್ನೆಲೆಯಲ್ಲಿ ಚಿತ್ರೀಕರಿಸಲಾಗಿದ್ದು, ‘ನೂರು ಜನ್ಮಕೂ’ ಮಾನವೀಯ ಅಂತಃಕರಣ ಹಾಗೂ ಅತಿಮಾನುಷ ಶಕ್ತಿಗಳ ಅಟ್ಟಹಾಸವನ್ನು ಮುಖಾಮುಖಿ ಆಗಿಸುತ್ತದೆ.

ಹಾಗಾಗಿ ರೋಚಕ ತಿರುವುಗಳನ್ನು ಪಡೆಯುತ್ತಾ ವೀಕ್ಷಕರನ್ನು ರಂಜಿಸುತ್ತದೆ. ಸಂಬಂಧಗಳು, ಕುಟುಂಬ ನಾಟಕಗಳು ಅದನ್ನು ಮತ್ತಷ್ಟು ರಸವತ್ತಾಗಿಸುತ್ತವೆ. ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟ-ನಟಿಯರ ದಂಡೇ ಇದೆ. ‘ಗೀತಾ’ ಧಾರಾವಾಹಿಯಿಂದ ಹೆಸರಾದ ಧನುಷ್ ಗೌಡ, ಹಿರಿಯ ನಟಿ ಗಿರಿಜಾ ಲೋಕೇಶ್, ಭಾಗ್ಯಶ್ರೀ, ಬಿ.ಎಂ. ವೆಂಕಟೇಶ್ ಹಾಗೂ ಗಾಯಕಿ ಅರ್ಚನಾ ಉಡುಪ ಅವರು ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ಗಿಂತ ಹೆಚ್ಚು ಟಿಆರ್​ಪಿ ಪಡೆದ ‘ಲಕ್ಷ್ಮೀ ಬಾರಮ್ಮ’ ನಂಬರ್ 1 ಧಾರಾವಾಹಿ

ಜೊತೆಗೆ ‘ಮಜಾ ಟಾಕೀಸ್’ ಖ್ಯಾತಿಯ ರೆಮೋ ಕೂಡ ಈ ಧಾರಾವಾಹಿಯಲ್ಲಿ ಇದ್ದಾರೆ. ಚಿತ್ರಾ ಶೆಣೈ ತಮ್ಮ ಗುಡ್ ಕಂಪನಿ ಸಂಸ್ಥೆಯಿಂದ ‘ನೂರು ಜನ್ಮಕೂ’ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ. ಟಿವಿ ಧಾರಾವಾಹಿಗಳ ಪ್ರೇಮಕತೆಗಳ ಸ್ವರೂಪವನ್ನೇ ಬದಲಾಯಿಸಲು ಸಜ್ಜಾಗಿರುವ ‘ನೂರು ಜನ್ಮಕೂ’ ಸೀರಿಯಲ್​ನ ಮೊದಲ ಸಂಚಿಕೆಯನ್ನು ತಪ್ಪಿಸಿಕೊಳ್ಳಬೇಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ