
ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ನಟಿ ನಿಶಾ ರವಿಕೃಷ್ಣನ್ (Nisha Ravikrishnan) ಅವರು ಈಗ ಅದ್ದೂರಿಯಾಗಿ ಗೃಹ ಪ್ರವೇಶ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನಟಿ ನಿಶಾ ಅವರು ಹಲವು ವರ್ಷಗಳಿಂದ ಕಿರುತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಈಗ ನಿಶಾ ತಾವು ಕಷ್ಟಪಟ್ಟು ಕೂಡಿಟ್ಟ ಹಣದಿಂದ ಕನಸಿನ ಮನೆಯನ್ನು ಕಟ್ಟಿಸಿಕೊಂಡು ಅದರ ಗೃಹಪ್ರವೇಶ ಮಾಡಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.
ನಿಶಾ ಅವರು 2018ರಲ್ಲಿ ಕಿರುತೆರೆಗೆ ಕಾಲಿಟ್ಟರು. ‘ಸರ್ವ ಮಂಗಲ ಮಾಂಗಲ್ಯೆ’ ಅವರ ನಟನೆಯ ಮೊದಲ ಧಾರಾವಾಹಿ. ಈ ಧಾರಾವಾಹಿ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಂಡಿತು. 2019ರವರೆಗೆ ಈ ಧಾರಾವಾಹಿ ಪ್ರಸಾರ ಆಯಿತು. 2019ರಲ್ಲಿ ಅವರು ಜೀ ಕನ್ನಡದಲ್ಲಿ ‘ಗಟ್ಟಿಮೇಳ’ ಸೀರಿಯಲ್ ಮಾಡಿದರು. ಈ ಧಾರಾವಾಹಿಯಲ್ಲಿ ಅವರು ಅಮೂಲ್ಯ ಹೆಸರಿನ ಪಾತ್ರ ಮಾಡಿದರು. ಐದು ವರ್ಷಗಳ ಕಾಲ ಪ್ರಸಾರ ಕಂಡ ಈ ಧಾರಾವಾಹಿ ಮೂಲಕ ರೌಡಿ ಬೇಬಿ ಎಂದೇ ಅವರು ಫೇಮಸ್ ಆದರು.
ನಿಶಾ ಅವರು ಸದ್ಯ ‘ಅಣ್ಣಯ್ಯ’ ಧಾರಾವಾಹಿಯಲ್ಲಿ ಡಾಕ್ಟರ್ ಪಾರ್ವತಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿ ಹಳ್ಳಿ ಹಿನ್ನೆಲೆಯಲ್ಲಿ ಸಾಗುತ್ತಿದ್ದು, ಪ್ರೇಕ್ಷಕರಿಗೆ ಇಷ್ಟ ಆಗಿದೆ. ಇನ್ನು ನಿಶಾ ಅವರು ತೆಲುಗು ಕಿರುತೆರೆಯಲ್ಲೂ ಫೇಮಸ್ ಆಗಿದ್ದಾರೆ. ‘ಅಮ್ಮಾಯಿಗಾರು’ ಹೆಸರಿನ ಜೀ ತೆಲುಗು ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದಾರೆ.
ಇದನ್ನೂ ನೋಡಿ: ಹೇಗಿದೆ ನೋಡಿ ನಿಶಾ ರವಿಕೃಷ್ಣನ್ ಭರ್ಜರಿ ಡ್ಯಾನ್ಸ್
ನಿಶಾ ಅವರು ತೆಲುಗು ಹಾಗೂ ಕನ್ನಡ ಧಾರಾವಾಹಿ ಶೂಟ್ನ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ. ಅವರಿಗೆ ಇದು ದೊಡ್ಡ ಚಾಲೆಂಜ್. ಆದಾಗ್ಯೂ ಕಷ್ಟಪಟ್ಟು ಇದನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಈ ಮೂಲಕ ಅವರು ಹಣ ಸಂಪಾದಿಸಿ ಮನೆ ಕಟ್ಟಿಕೊಂಡಿದ್ದಾರೆ. ಆಪ್ತರು ನಿಶಾ ಅವರ ಮನೆಗೆ ಬಂದು ಶುಭಾಶಯ ಕೋರಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.