ಸಿದ್ಧಾರ್ಥ್​ ಶುಕ್ಲಾದು ಸಹಜ ಸಾವೇ? ಮುಂಬೈ ಪೊಲೀಸರಿಗೆ ಕುಟುಂಬದವರು ಹೇಳಿದ್ದೇನು?

ಸಿದ್ಧಾರ್ಥ್​ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ, ಸಿದ್ಧಾರ್ಥ್​ ಫಿಟ್​ನೆಸ್​ಗೆ ಹೆಚ್ಚು ಒತ್ತು ನೀಡುತ್ತಿದ್ದರು. ನಿತ್ಯ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದರು. ಹೀಗಿದ್ದರೂ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ಅಭಿಮಾನಿಗಳ ಪಾಲಿಗೆ ಶಾಕಿಂಗ್​ ಸಂಗತಿ.

ಸಿದ್ಧಾರ್ಥ್​ ಶುಕ್ಲಾದು ಸಹಜ ಸಾವೇ? ಮುಂಬೈ ಪೊಲೀಸರಿಗೆ ಕುಟುಂಬದವರು ಹೇಳಿದ್ದೇನು?
ಸಿದ್ಧಾರ್ಥ್​ ಶುಕ್ಲಾ

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಮುಂಬೈನ ಕೂಪರ್​ ಆಸ್ಪತ್ರೆ ವೈದ್ಯರು ಖಚಿತಪಡಿಸಿದ್ದಾರೆ. ಈ ಮಧ್ಯೆ ಅವರು ಸಾವಿಗೂ ಮೊದಲು ಯಾವುದೋ ಔಷಧಿ ಪಡೆದುಕೊಂಡಿದ್ದರು ಎನ್ನುವ ಸುದ್ದಿ ಹರಿದಾಡಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಈಗ ಈ ಬಗ್ಗೆ ಕುಟುಂಬದ ಕಡೆಯಿಂದ ಮುಂಬೈ ಪೊಲೀಸರು ಹೇಳಿಕೆ ಪಡೆದಿದ್ದಾರೆ.

ಸಿದ್ಧಾರ್ಥ್​ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ, ಸಿದ್ಧಾರ್ಥ್​ ಫಿಟ್​ನೆಸ್​ಗೆ ಹೆಚ್ಚು ಒತ್ತು ನೀಡುತ್ತಿದ್ದರು. ನಿತ್ಯ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದರು. ಹೀಗಿದ್ದರೂ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ಅಭಿಮಾನಿಗಳ ಪಾಲಿಗೆ ಶಾಕಿಂಗ್​ ಸಂಗತಿ. ಸಿದ್ಧಾರ್ಥ್​ ರಾತ್ರಿ ಮಲಗುವುದಕ್ಕೂ ಮೊದಲು ಔಷಧ ಒಂದನ್ನು ತೆಗೆದುಕೊಂಡಿದ್ದರು ಎನ್ನಲಾಗಿತ್ತು. ಅವರು ನಿಜಕ್ಕೂ ಔಷಧ ತೆಗೆದುಕೊಂಡಿದ್ದರಾ? ಹೌದು ಎಂದಾದರೆ ಆ ಔಷಧ ಯಾವುದು? ಅದಕ್ಕೂ ಹೃದಯಾಘಾತಕ್ಕೂ ಏನಾದರೂ ಸಂಬಂಧವಿದೆಯಾ ಎಂಬಿತ್ಯಾದಿ ಪ್ರಶ್ನೆಗಳು ಹರಿದಾಡಿದ್ದವು. ಇದಕ್ಕೆ ಈಗ ಕುಟುಂಬ ಪೊಲೀಸರಿಗೆ ಸ್ಪಷ್ಟನೆ ನೀಡಿದೆ.

‘ಇದೊಂದು ಸಹಜ ಸಾವು. ಅವರು ಯಾವುದೇ ಮಾನಸಿಕ ಒತ್ತಡಕ್ಕೆ ಒಳಗಾಗಿರಲಿಲ್ಲ. ಈ ಬಗ್ಗೆ ವದಂತಿಗಳು ಹರಿದಾಡುವುದು ನನಗೆ ಇಷ್ಟವಿಲ್ಲ’ ಎಂದು ಸಿದ್ಧಾರ್ಥ್​ ಕುಟುಂಬ ಪೊಲೀಸರಿಗೆ ಮಾಹಿತಿ ನೀಡಿದೆ. ಈ ಮೂಲಕ ಎಲ್ಲಾ ವದಂತಿಗೆ ತೆರೆ ಬಿದ್ದಂತಾಗಿದೆ.

ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಸಿದ್ಧಾರ್ಥ್ ಶುಕ್ಲಾ ಅಗಲಿದ್ದಾರೆ. ಮಾಡೆಲ್ ಆಗಿ ವೃತ್ತಿಜೀವನ ಆರಂಭಿಸಿದ್ದ ಅವರು ನಂತರ ಕಿರುತೆರೆಯಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಹಲವು ಧಾರಾವಾಹಿಗಳಲ್ಲಿ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಬಿಗ್ ಬಾಸ್ ಸೀಸನ್ 13ರಲ್ಲಿ ಅವರು ವಿನ್ನರ್ ಆಗಿ ಹೊರಹೊಮ್ಮಿದ ಬಳಿಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದರು. ಬಿಗ್ ಬಾಸ್ ಮಾತ್ರವಲ್ಲದೆ, ‘ಕತ್ರೋಂಕೆ ಕಿಲಾಡಿ ಸೀಸನ್ 7’ರಲ್ಲೂ ಅವರು ವಿನ್ನರ್ ಆಗಿದ್ದರು. ಬಿಗ್ ಬಾಸ್ 14ರಲ್ಲಿ ಅವರು ಗೆಸ್ಟ್ ಆಗಿ ದೊಡ್ಮನೆ ಪ್ರವೇಶಿಸಿದ್ದರು.

ಸೀರಿಯಲ್​​ನಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದು ಮಾತ್ರವಲ್ಲದೆ, ಹಲವು ಧಾರಾವಾಹಿಗಳಲ್ಲಿ ಸಿದ್ಧಾರ್ಥ್ ಶುಕ್ಲಾ ಅತಿಥಿ ಪಾತ್ರ ಮಾಡಿದ್ದರು. ಬಾಲಿವುಡ್​​ನ ಕೆಲವು ಸಿನಿಮಾಗಳಲ್ಲೂ ಕೂಡ ಅವರು ನಟಿಸಿದ್ದರು. ವರುಣ್ ಧವನ್ ನಾಯಕತ್ವದ ‘ಹಂಪ್ಟಿ ಶರ್ಮಾ ಕಿ ದುಲ್ಹನಿಯಾ’ ಚಿತ್ರದಲ್ಲಿ ಅವರೊಂದು ಪಾತ್ರ ಮಾಡಿದ್ದರು. ಏಕ್ತಾ ಕಪೂರ್ ನಿರ್ಮಾಣದ ‘ಬ್ರೋಕನ್ ಬಟ್ ಬ್ಯೂಟಿಫುಲ್ 3’ ವೆಬ್ ಸಿರೀಸ್ನಲ್ಲಿ ಸಿದ್ಧಾರ್ಥ್ ನಟಿಸಿದ್ದರು. ಈ ವರ್ಷ ಓಟಿಟಿ ಮೂಲಕ ಅದು ರಿಲೀಸ್ ಆಗಿತ್ತು.

ಇದನ್ನೂ ಓದಿ: ನಿದ್ರಿಸುವುದಕ್ಕೂ ಮೊದಲು ಒಂದು ಔಷಧ ತೆಗೆದುಕೊಂಡಿದ್ದ ಸಿದ್ಧಾರ್ಥ್ ಶುಕ್ಲಾ​; ಅನುಮಾನ ಹುಟ್ಟಿಸಿದ ನಟನ ಸಾವು

ಸಿದ್ಧಾರ್ಥ್​ ಶುಕ್ಲಾ ಜೊತೆ ಕೆಲಸ ಮಾಡಿದ್ದ ಸಂಜನಾ ಗಲ್ರಾನಿ; ಜೀವನ ಇಷ್ಟೇನಾ ಎಂದ ನಟಿ

Click on your DTH Provider to Add TV9 Kannada