AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್ ಬಾಸ್ ಮನೆಗೆ ಬರಲ್ಲ ಓಂ ಪ್ರಕಾಶ್ ರಾವ್; ಕಠಿಣ ನಿರ್ಧಾರ ಮಾಡಿದ ನಿರ್ದೇಶಕ

ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಅನಾರೋಗ್ಯದ ಕಾರಣದಿಂದಾಗಿ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಫ್ಲೈಟ್ ಜರ್ನಿ ಟಾಸ್ಕ್‌ನ ಒತ್ತಡ ತಾಳಲಾರದೆ ಅಸ್ವಸ್ಥಗೊಂಡಿರುವ ಅವರು, ತಮ್ಮ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ದೊಡ್ಮನೆಗೆ ಮತ್ತೆ ಮರಳದಿರುವ ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಮತ್ತೆ ಬಿಗ್ ಬಾಸ್ ಮನೆಗೆ ಬರಲ್ಲ ಓಂ ಪ್ರಕಾಶ್ ರಾವ್; ಕಠಿಣ ನಿರ್ಧಾರ ಮಾಡಿದ ನಿರ್ದೇಶಕ
ಓಂ ಪ್ರಕಾಶ್ ರಾವ್ Image Credit source: Colors Kannada
ರಾಜೇಶ್ ದುಗ್ಗುಮನೆ
|

Updated on:Sep 14, 2026 | 10:43 PM

Share

ಮುಖ್ಯಾಂಶಗಳು

  • ಒತ್ತಡದ ಟಾಸ್ಕ್‌ನಿಂದಾಗಿ ಅಸ್ವಸ್ಥಗೊಂಡ ಹಿರಿಯ ನಿರ್ದೇಶಕ
  • ಬಿಗ್ ಬಾಸ್‌ಗೆ ಮತ್ತೆ ಮರಳದಿರಲು ಓಂ ಪ್ರಕಾಶ್ ರಾವ್ ನಿರ್ಧಾರ
  • ದೊಡ್ಮನೆಯಲ್ಲಿ ಹಿರಿಯ ಮಾರ್ಗದರ್ಶಕನ ನಿರ್ಗಮನಕ್ಕೆ ವೀಕ್ಷಕರು ಬೇಸರ

ಓಂ ಪ್ರಕಾಶ್ ರಾವ್ ಅವರಿಗೆ ಎರಡನೇ ಬಾರಿಗೆ ಬಿಗ್ ಬಾಸ್​ ಮನೆಗೆ ಹೋಗುವ ಅವಕಾಶ ಸಿಕ್ಕಿತ್ತು. ಆದರೆ, ಅವರು ಅನಾರೋಗ್ಯದ ಕಾರಣದಿಂದ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಇಂದಿನ (ಸೆಪ್ಟೆಂಬರ್ 14) ಎಪಿಸೋಡ್​​ನಲ್ಲಿ ಅವರು ಮುಂಜಾನೆ ಮಾತ್ರ ಕಾಣಿಸಿಕೊಂಡಿದ್ದರು. ಆ ಬಳಿಕ ಅವರು ದೊಡ್ಮನೆಯಲ್ಲಿ ಎಲ್ಲಿಯೂ ಕಾಣಿಸಿಲ್ಲ. ಅವರು ಬಿಗ್ ಬಾಸ್ ಮನೆಗೆ ಮರಳದಿರುವ ಕಠಿಣ ನಿರ್ಧಾರ ಮಾಡಿದ್ದಾರೆ.

ಓಂ ಪ್ರಕಾಶ್ ರಾವ್​ ಅವರಿಗೆ ಸಾಕಷ್ಟು ವಯಸ್ಸಾಗಿದೆ. ಅವರಿಗೆ ಸಾಕಷ್ಟು ಅನಾರೋಗ್ಯ ಕಾಡುತ್ತಿದೆ. ಇದರ ನಡುವೆಯೂ ಅವರು ಕಳೆದ ಒಂದು ವಾರದಿಂದ ಬಿಗ್ ಬಾಸ್ ಮನೆಯಲ್ಲಿ ಇದ್ದರು. ಆದರೆ, ಒಂದು ತೊಂದರೆ ಅವರನ್ನು ಬಲವಾಗಿ ಕಾಡಿತ್ತು.ಅದುವೇ ಫ್ಲೈಟ್ ಜರ್ನಿ.

ಅರ್ಧ ಜನ ಬಿಗ್ ಬಾಸ್ ಮನೆ ಒಳಗೆ, ಇನ್ನರ್ಧ ಜನ ಬಿಗ್ ಬಾಸ್ ಮನೆಯ ಗಾರ್ಡನ್ ಏರಿಯಾದಲ್ಲಿ ಹಾಕಿದ ಫ್ಲೈಟ್​​ನಲ್ಲಿ ಇದ್ದರು. ಅಲ್ಲಿದ್ದವರಿಗೆ ಸಾಕಷ್ಟು ಒತ್ತಡದ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈ ಪರಿಸ್ಥಿತಿಯನ್ನು ಎದುರಿಸಲು ಓಂ ಪ್ರಕಾಶ್ ರಾವ್ ಅವರಿಗೆ ಸಾಧ್ಯವಾಗಲೇ ಇಲ್ಲ. ಇದರಿಂದ ಅವರು ಹೊರ ಬರಬೇಕಾದ ಪರಿಸ್ಥಿತಿ ಇದೆ.

ಈ ಮೊದಲು ಕೂಡ ಅನಾರೋಗ್ಯದಿಂದ ಅನೇಕರು ಬಿಗ್ ಬಾಸ್ ಮನೆಯಿಂದ ಹೊರ ಹೋದ ಉದಾಹರಣೆ ಇದೆ. ಆದರೆ, ಅವರು ಬಿಗ್ ಬಾಸ್​​ ಮೇಲ್ವಿಚಾರಣೆಯಲ್ಲೇ ಅವರು ಟ್ರೀಟ್​ಮೆಂಟ್ ತೆಗೆದುಕೊಂಡು ದೊಡ್ಮನೆಗೆ ಮರಳುತ್ತಿದ್ದರು. ಆದರೆ, ಓಂ ಪ್ರಕಾಶ್ ರಾವ್ ಅವರು ಬಿಗ್ ಬಾಸ್ ಮನೆಗೆ ಮರಳುವ ಆಲೋಚನೆಯಲ್ಲಿ ಇಲ್ಲ. ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಅವರು ಮರಳುತ್ತಿಲ್ಲ.

ಇದನ್ನೂ ಓದಿ: ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರಬಂದ ಓಂ ಪ್ರಕಾಶ್ ರಾವ್; ಆರೋಗ್ಯದಲ್ಲಿ ಏರುಪೇರು

ಓಂ ಪ್ರಕಾಶ್ ರಾವ್ ಈ ಬಾರಿ ಹೆಚ್ಚು ಕಾಣಿಸಿಕೊಂಡಿಲ್ಲ. ಅವರು ಕಿರಿಯ ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಿದ್ದರು. ಈಗ ದೊಡ್ಮನೆಯಲ್ಲಿ ಅವರಿಲ್ಲದಿರುವುದು ಮನೆಯವರಿಗೆ ಹಾಗೂ ವೀಕ್ಷಕರಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:42 pm, Mon, 14 September 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!