AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರಬಂದ ಓಂ ಪ್ರಕಾಶ್ ರಾವ್; ಆರೋಗ್ಯದಲ್ಲಿ ಏರುಪೇರು

ಬಿಗ್ ಬಾಸ್ ಮನೆಯಿಂದ ಹೊರಬಂದ ಬೆನ್ನಲ್ಲೇ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ತೀವ್ರ ಒತ್ತಡದಿಂದಾಗಿ ಅನಾರೋಗ್ಯಕ್ಕೀಡಾಗಿರುವ ಅವರನ್ನು ಆರಾಧ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ವೈದ್ಯರ ಪರಿಶೀಲನೆ ನಂತರ ಹೆಚ್ಚಿನ ಚಿಕಿತ್ಸೆಗೆ ರೆಗ್ಯೂಲರ್ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆಯಿದೆ.

ಬಿಗ್ ಬಾಸ್​ನಿಂದ ಅರ್ಧಕ್ಕೆ ಹೊರಬಂದ ಓಂ ಪ್ರಕಾಶ್ ರಾವ್; ಆರೋಗ್ಯದಲ್ಲಿ ಏರುಪೇರು
ಓಂ ಪ್ರಕಾಶ್ ರಾವ್
ಮಾಲತೇಶ ಜಗ್ಗೀನ್
| Edited By: |

Updated on:Sep 14, 2026 | 8:22 PM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಮನೆಯಿಂದ ಬಂದ ಬೆನ್ನಲ್ಲೇ ಅಸ್ವಸ್ಥರಾದ ನಿರ್ದೇಶಕ
  • ತೀವ್ರ ಒತ್ತಡವೇ ಆರೋಗ್ಯ ಏರುಪೇರಿಗೆ ಕಾರಣವೇ?
  • ಆರಾಧ್ಯ ಆಸ್ಪತ್ರೆಗೆ ದಾಖಲು: ರೆಗ್ಯೂಲರ್ ಆಸ್ಪತ್ರೆಗೆ ಸ್ಥಳಾಂತರ ಸಾಧ್ಯತೆ

ಖ್ಯಾತ ನಿರ್ದೇಶಕ ಹಾಗೂ ಬಿಗ್ ಬಾಸ್ ಸ್ಪರ್ಧಿ ಓಂ ಪ್ರಕಾಶ್ ರಾವ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಬಿಗ್ ಬಾಸ್ ಮನೆಯಲ್ಲಿರುವಾಗಲೇ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ತೀವ್ರ ಮಾನಸಿಕ ಒತ್ತಡದ ಕಾರಣದಿಂದಾಗಿ ಅವರು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ಬಂದಿರುವ ಅವರು ಈಗ ಅವರು ದೊಡ್ಮನೆಗೆ ಮರಳುತ್ತಾರಾ ಎಂಬುದು ಸದ್ಯದ ಪ್ರಶ್ನೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಓಂ ಪ್ರಕಾಶ್ ರಾವ್ ಸ್ಪರ್ಧಿ ಆಗಿದ್ದರು. ದೊಡ್ಮನೆಯಿಂದ ಮರಳಿದ ಓಂ ಪ್ರಕಾಶ್ ರಾವ್ ಸದ್ಯ ಕಾಡುಮನೆ ಎಸ್ಟೇಟ್ ಬಳಿ ಇರುವ ಆರಾಧ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಬಿಗ್ ಬಾಸ್ ಮನೆಯಲ್ಲಿ ಕುಟುಂತ್ತಾ ಓಡಾಡುತ್ತಿದ್ದರು. ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟೂ ದಿನ ವಿಮಾನದಲ್ಲೇ ಸಮಯ ಕಳೆಯುವ ಪರಿಸ್ಥಿತಿ ಬಂದಿತ್ತು.

ಆರೋಗ್ಯ ವ್ಯತ್ಯಾಸವಾಗುತ್ತಿದ್ದಂತೆ ಕುಟುಂಬಸ್ಥರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಸ್ತುತ ಒಂದು ಗಂಟೆಯ ಹಿಂದೆಯಷ್ಟೇ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಅವರ ಕುಟುಂಬದ ವೈದ್ಯರು ಶೀಘ್ರದಲ್ಲೇ ಭೇಟಿ ನೀಡಿ ಪರಿಶೀಲಿಸುವ ಸಾಧ್ಯತೆ ಇದೆ. ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ತಪಾಸಣೆಗಾಗಿ ಓಂ ಪ್ರಕಾಶ್ ರಾವ್ ಅವರನ್ನು ಅವರ ರೆಗ್ಯೂಲರ್ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಏರಡನೇ ಬಾರಿ ಬಿಗ್​​ಬಾಸ್​​ಗೆ ಎಂಟ್ರಿ ಕೊಟ್ಟ ನಿರ್ದೇಶಕ ಓಂ ಪ್ರಕಾಶ್ ರಾವ್

ಬಿಗ್ ಬಾಸ್ ಮನೆಯ ಒಳಗಿನ ಕಠಿಣ ವಾತಾವರಣ ಹಾಗೂ ಅಲ್ಲಿನ ಆಟದ ಒತ್ತಡವೇ ಅವರ ಈ ಸ್ಥಿತಿಗೆ ಕಾರಣವಿರಬಹುದು ಎಂದು ಊಹಿಸಲಾಗಿದೆ. ಓಂ ಪ್ರಕಾಶ್ ರಾವ್ ಅವರು ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಪ್ರಾರ್ಥಿಸುತ್ತಿದ್ದಾರೆ. ವೈದ್ಯರ ಅಧಿಕೃತ ಹೇಳಿಕೆಗಾಗಿ ಕಾಯಲಾಗುತ್ತಿದೆ. ಈ ಮೊದಲು ಬಿಗ್ ಬಾಸ್​ ಮನೆಗೆ ಹೋದಾಗ ಅವರು ಅನಾರೋಗ್ಯದ ಕಾರಣದಿಂದಲೇ ಹೊರ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:15 pm, Mon, 14 September 26

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!