AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ ಬನೇಗಾ ಕರೋಡ್ಪತಿಯಲ್ಲಿ ‘ಆಪರೇಷನ್ ಸಿಂಧೂರ’ ಬಗ್ಗೆ ಹೇಳಿದ ಮಹಿಳಾ ಅಧಿಕಾರಿಗಳು

Operation Sindhura: ಕೌನ್ ಬನೇಗಾ ಕರೋಡ್ಪತಿಯ 17ನೇ ಆವೃತ್ತಿಯಲ್ಲಿ, ಭಾರತೀಯ ಸೇನೆಯ ಮೂವರು ಮಹಿಳಾ ಅಧಿಕಾರಿಗಳು ಭಾಗವಹಿಸಿದ್ದರು. ಅಧಿಕಾರಿಗಳು ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ನಡೆದ ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನವು ಭಾರಿ ನಷ್ಟ ಅನುಭವಿಸಿತು ಎಂದು ಅವರು ಹೇಳಿದ್ದಾರೆ. ಈ ಮಹಿಳಾ ಅಧಿಕಾರಿಗಳು ಕಾರ್ಯಾಚರಣೆಯ ವಿವರಗಳನ್ನು ಹಂಚಿಕೊಂಡಿದ್ದಾರೆ.

ಕೌನ್ ಬನೇಗಾ ಕರೋಡ್ಪತಿಯಲ್ಲಿ ‘ಆಪರೇಷನ್ ಸಿಂಧೂರ’ ಬಗ್ಗೆ ಹೇಳಿದ ಮಹಿಳಾ ಅಧಿಕಾರಿಗಳು
Amitabh Bachchan
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on:Aug 13, 2025 | 1:22 PM

Share

‘ಕೌನ್ ಬನೇಗಾ ಕರೋಡ್ ಪತಿ 17′ (kaun banega crorepati) ಕಾರ್ಯಕ್ರಮ ಮತ್ತೆ ವೀಕ್ಷಕರ ಮುಂದೆ ಬಂದಿದೆ. ಸ್ವಾತಂತ್ರ್ಯ ದಿನದಂದು ವಿಶೇಷ ಸಂಚಿಕೆ ಪ್ರಸಾರವಾಗಲಿದೆ. ಇದರಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಮೂವರು ಮಹಿಳಾ ಅಧಿಕಾರಿಗಳು ಬರಲಿದ್ದಾರೆ. ಅವರಲ್ಲಿ ಇಬ್ಬರು ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್​ನ ನೇತೃತ್ವ ವಹಿಸಿದ ಅಧಿಕಾರಿಗಳಾಗಿದ್ದಾರೆ. ಆಗಸ್ಟ್ 15 ರಂದು ಪ್ರಸಾರವಾಗಲಿರುವ ಸಂಚಿಕೆಯಲ್ಲಿ, ಕರ್ನಲ್ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಮತ್ತು ಕಮಾಂಡರ್ ಪ್ರೇರಣಾ ದೇವಸ್ಥಾಲಿ ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಲಿದ್ದಾರೆ.

ಆಗಸ್ಟ್ 15 ರಂದು ಪ್ರಸಾರವಾಗಲಿರುವ ಈ ಸಂಚಿಕೆಯ ಪ್ರೋಮೋ ಬಿಡುಗಡೆಯಾಗಿದೆ. ಇದರಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು ಅಮಿತಾಬ್ ಬಚ್ಚನ್ ಅವರಿಗೆ ಆಪರೇಷನ್ ಸಿಂಧೂರ್ ಮಹತ್ವದ ಬಗ್ಗೆ ಹೇಳಿದ್ದಾರೆ. ‘ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಬಹಳ ಅಗತ್ಯವಾಗಿತ್ತು’ ಎಂದು ಮಹಿಳಾ ಅಧಿಕಾರಿಗಳು ಹೇಳಿದ್ದಾರೆ. ಅಷ್ಟೇ ಅಲ್ಲ, ಆಪರೇಷನ್ ಸಿಂಧೂರ್ ಪಾಕಿಸ್ತಾನದ ಮೇಲೆ ಬೀರಿದ ಪರಿಣಾಮದ ಬಗ್ಗೆ ಮೂವರು ಮಹಿಳಾ ಅಧಿಕಾರಿಗಳು ಮಾತನಾಡಿದ್ದಾರೆ.

ಇದನ್ನೂ ಓದಿ:ಶಾರುಖ್ ಖಾನ್ ಪುತ್ರಿ, ಅಮಿತಾಬ್ ಬಚ್ಚನ್ ಮೊಮ್ಮಗನ ಲವ್ವಿ-ಡವ್ವಿ

ಈ ಬಗ್ಗೆ ಮಾತನಾಡಿದ ಕರ್ನಲ್ ಸೋಫಿಯಾ ಖುರೇಷಿ , ‘ಪಾಕಿಸ್ತಾನ ನಿರಂತರವಾಗಿ ಕಿಡಿಗೇಡಿತನ ಮಾಡುತ್ತಿತ್ತು. ಆದ್ದರಿಂದ, ಪ್ರತ್ಯುತ್ತರ ನೀಡುವುದು ಬಹಳ ಅಗತ್ಯವಾಗಿತ್ತು. ಆದ್ದರಿಂದ, ಆಪರೇಷನ್ ಸಿಂಧೂರ್ ಅನ್ನು ಯೋಜಿಸಲಾಗಿತ್ತು. ಇದು ಹೊಸ ವಿಚಾರಗಳೊಂದಿಗೆ ಹೊಸ ಭಾರತ’ ಎಂದರು. ನಂತರ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮಾತನಾಡಿ, ‘ರಾತ್ರಿ 1.05 ರಿಂದ 1.30 ರವರೆಗೆ… ನಾವು ಎಲ್ಲಾ ಆಟಗಳನ್ನು 25 ನಿಮಿಷಗಳಲ್ಲಿ ಮುಗಿಸಿದ್ದೇವೆ’ ಎಂದರು. ಕಮಾಂಡರ್ ಪ್ರೇರಣಾ ದಿವಸ್ಥಳಿ ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡಿದ್ದಾರೆ. ‘ನಾವು ವೈರಿಗಳನ್ನು ಗುರಿಯಾಗಿಸಿಕೊಂಡು ಅವರನ್ನು ನಾಶಪಡಿಸಿದ್ದೇವೆ. ಯಾವುದೇ ನಾಗರಿಕರಿಗೆ ಯಾವುದೇ ರೀತಿಯಲ್ಲಿ ಹಾನಿಯಾಗಿಲ್ಲ’ ಎಂದರು. ಅಮಿತಾಭ್ ಬಚ್ಚನ್ ಮತ್ತು ಪ್ರೇಕ್ಷಕರು ಈ ಮೂವರು ಮಹಿಳಾ ಅಧಿಕಾರಿಗಳು ಹೇಳಿದ್ದನ್ನು ಕೇಳಿದ ನಂತರ ಉತ್ಸಾಹಗೊಂಡರು.

View this post on Instagram

A post shared by Sony LIV (@sonylivindia)

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವೂ ಒಂದು ಪ್ರಮುಖ ಕ್ರಮ ಕೈಗೊಂಡಿತು. ‘ನೀವು ಮುಸ್ಲಿಮರಾಗಿದ್ದರೆ, ಕಲ್ಮಾ ಪಠಿಸಿ ಮತ್ತು ನನಗೆ ತೋರಿಸಿ’ ಎಂದು ಹೇಳುತ್ತಾ ಭಯೋತ್ಪಾದಕರು ಅನೇಕ ಪ್ರವಾಸಿಗರ ಮೇಲೆ ಗುಂಡು ಹಾರಿಸಿದರು. ಇದರ ನಂತರ, ಭಾರತವು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನು ನೀಡಿತು. ಇದರಲ್ಲಿ ಪಾಕಿಸ್ತಾನವು ಭಾರಿ ನಷ್ಟವನ್ನು ಅನುಭವಿಸಿತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Wed, 13 August 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!