ಕನ್ನಡದ ಹಿರಿಯ ನಟಿ ಪದ್ಮಜಾ ರಾವ್​ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ  

|

Updated on: Aug 27, 2024 | 11:16 AM

ಮಂಗಳೂರಿನ ವೀರೇಂದ್ರ ಶೆಟ್ಟಿ ಅವರ ಬಳಿ ಪದ್ಮಜಾ ರಾವ್ ಅವರು 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಪದ್ಮಜಾ ರಾವ್ ಭದ್ರತೆ ದೃಷ್ಟಿಯಿಂದ ಚೆಕ್ ನೀಡಿದ್ದರು. ಈ ಚೆಕ್ ಬೌನ್ಸ್ ಆಗಿತ್ತು. ಇದು ನಡೆದಿದ್ದು 2020ರ ಜೂನ್‌ 17ರಂದು. ಆದರೆ, ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ.

ಕನ್ನಡದ ಹಿರಿಯ ನಟಿ ಪದ್ಮಜಾ ರಾವ್​ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ  
ಪದ್ಮಜಾ ರಾವ್
Follow us on

ಕನ್ನಡದ ಹಿರಿಯ ನಟಿ ಪದ್ಮಜಾ ರಾವ್​ಗೆ ಸಂಕಷ್ಟ ಎದುರಾಗಿದೆ. ಚೆಕ್​ ಬೌನ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ಮಗಳೂರಿನ ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ 40.20 ಲಕ್ಷ ರೂಪಾಯಿ ದಂಡ ಕೂಡ ವಿಧಿಸಿದೆ. ಇದರಿಂದ ಅವರು ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ.

‘ವೀರೂ ಟಾಕೀಸ್’ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಅವರ ಬಳಿ ಪದ್ಮಜಾ ರಾವ್ ಅವರು 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದರು. ಇದು ನಡೆದಿದ್ದು 2020ರ ಜೂನ್‌ 17ರಂದು. ಆದರೆ, ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ. ಹೀಗಾಗಿ, ವಿರೇಂದ್ರ ಶೆಟ್ಟಿ ಅವರು ನ್ಯಾಯಾಲಯದ ಮೊರೆ ಹೊಗಿದ್ದರು.

ಈ ಮೊದಲು ವಿಚಾರಣೆಗೆ ಹಾಜರಾದ ಪದ್ಮಜಾ ರಾವ್ ಅವರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದರು. ನಾನು ಸಾಲವನ್ನೇ ಪಡೆದಿಲ್ಲ ಎಂದಿದ್ದ ಅವರು, ಚೆಕ್ ನೀಡಿದ ವಿಚಾರವನ್ನೂ ಅಲ್ಲಗಳೆದಿದ್ದರು. ಜೊತೆಗೆ ಪದ್ಮಜಾ ರಾವ್ ಅವರ ಚೆಕ್​ನ ಕದ್ದು ಸಹಿ ನಕಲು ಮಾಡಿದ ಆರೋಪವನ್ನು ಪದ್ಮಜಾ ರಾವ್ ಮಾಡಿದ್ದರು. ಆದರೆ, ಇದಕ್ಕೆ ಸಂಬಂಧಿಸಿ ಅವರು ಕೊರ್ಟ್​ನಲ್ಲಿ ಸಾಕ್ಷಿಗಳನ್ನು ಒದಗಿಸಲು ವಿಫಲರಾಗಿದ್ದಾರೆ.

ತೀರ್ಪಲ್ಲಿ ಏನಿದೆ?

ಈ ತೀರ್ಪಿನ ಪ್ರಕಾರ ಪದ್ಮಜಾ ರಾವ್ ಅವರು 40.20ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಿದೆ. ಇದರಲ್ಲಿ 40.17 ಲಕ್ಷ ರೂಪಾಯಿ ಹಣವನ್ನು ದೂರುದಾರನಿಗೆ ಕೊಡಬೇಕಿದೆ. ಉಳಿದ 3 ಸಾವಿರ ರೂಪಾಯಿ ಹಣವನ್ನು ಅವರು ಸರ್ಕಾರಕ್ಕೆ ತುಂಬಬೇಕು.  ಉಳಿದಂತೆ ಸಾದಾ ಕಾರಗೃಹ ಶಿಕ್ಷೆ ಅನುಭವಿಸಬೇಕಿದೆ.

ಇದನ್ನೂ ಓದಿ: ‘ಭಾಗ್ಯಲಕ್ಷ್ಮೀ ಧಾರಾವಾಹಿಯ ಅತ್ತೆ ಪಾತ್ರ ನೋಡಿ ಜನರು ಬದಲಾದರೆ ನನಗೆ ಅಷ್ಟೇ ಸಾಕು’; ಪದ್ಮಜಾ ರಾವ್

ಪದ್ಮಜಾ ರಾವ್ ಅವರು ಕನ್ನಡದ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಪೋಷಕ ಪಾತ್ರ ಮಾಡಿದ್ದಾರೆ. ಸದ್ಯ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಭಾಗ್ಯನ ಅತ್ತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:11 am, Tue, 27 August 24