AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ಮತ್ತೆ ಬರ್ತಿದೆ ‘ಡಿಕೆಡಿ’-ಕಾಮಿಡಿ ಕಿಲಾಡಿಗಳು; ಆಡಿಷನ್​ನಲ್ಲಿ ನೀವು ಭಾಗಿ ಆಗಿ

DKD dance reality show: ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ಡಿಕೆಡಿ ಡ್ಯಾನ್ಸ್ ಡಿಯಾಲಿಟಿ ಶೋ ಮತ್ತೆ ಪ್ರಾರಂಭವಾಗುತ್ತಿದೆ. ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸುವ ಅವಕಾಶ ಎಲ್ಲರಿಗೂ ಮುಕ್ತವಾಗಿದೆ. ಶೋನ ಆಡಿಷನ್​​​ನಲ್ಲಿ ಭಾಗಿ ಆಗುವ ಬಗ್ಗೆ ಜೀ ಕನ್ನಡ ವಾಹಿನಿ ಮಾಹಿತಿ ಹಂಚಿಕೊಂಡಿದೆ.

ಜೀ ಕನ್ನಡದಲ್ಲಿ ಮತ್ತೆ ಬರ್ತಿದೆ ‘ಡಿಕೆಡಿ’-ಕಾಮಿಡಿ ಕಿಲಾಡಿಗಳು; ಆಡಿಷನ್​ನಲ್ಲಿ ನೀವು ಭಾಗಿ ಆಗಿ
Dance Karnataka Dance
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Sep 02, 2025 | 6:59 PM

Share

ಜೀ ಕನ್ನಡದ ಫೇವರಿಟ್ ಶೋಗಳಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಹಾಗೂ ‘ಕಾಮಿಡಿ ಕಿಲಾಡಿಗಳು’ ಸ್ಥಾನ ಪಡೆದುಕೊಂಡಿವೆ. ಈ ಶೋಗಳು ಈಗ ಮತ್ತೆ ಪ್ರೇಕ್ಷಕರ ಎದುರು ಬರಲು ರೆಡಿ ಆಗುತ್ತಿವೆ. ಈ ಸಂಬಂಧ ಜೀ ಕನ್ನಡ ವಾಹಿನಿ ಪೋಸ್ಟ್ ಒಂದನ್ನು ಮಾಡಿದೆ. ಅಲ್ಲದೆ, ಶೋಗೆ ಆಡಿಷನ್ ಕೂಡ ಕರೆಯುತ್ತಿರುವುದಾಗಿ ಮಾಹಿತಿ ನೀಡಿದೆ. ಹೀಗಾಗಿ, ನೀವು ಕೂಡ ಈ ಶೋನ ಆಡಿಷನ್​ನಲ್ಲಿ ಭಾಗಿ ಆಗಬಹುದು ಮತ್ತು ಅದರ ಭಾಗವಾಗಲು ಪ್ರಯತ್ನಿಸಬಹುದು.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ಮೂಲಕ ಅನೇಕ ಪ್ರತಿಭೆಗಳು ಪರಿಚಯ ಆಗಿವೆ. ಡ್ಯಾನ್ಸ್ ಕಲೆ ಹೊಂದಿರುವ ಅನೇಕರು ಶೋಗೆ ಬಂದು ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಅಲ್ಲದೆ ಹಿರಿಯರ ಮಾರ್ಗದರ್ಶನ ಸಿಗೋದರಿಂದ ಅವರಿಗೂ ಕಲಿಕೆಗೆ ಒಂದೊಳ್ಳೆಯ ವೇದಿಕೆ. ಈ ಕಾರ್ಯಕ್ರಮಕ್ಕೆ ಶಿವರಾಜ್​ಕುಮಾರ್ ಕೂಡ ಜಡ್ಜ್ ಸ್ಥಾನದಲ್ಲಿ ಇದ್ದಾರೆ. ಹೀಗಾಗಿ, ಅವರ ಅನುಭವದ ಮಾತುಗಳು ಸ್ಪರ್ಧಿಗಳಿಗೆ ಸ್ಫೂರ್ತಿದಾಯಕವಾಗಲಿವೆ.

View this post on Instagram

A post shared by Zee Kannada (@zeekannada)

ಇನ್ನು, ಕಾಮಿಡಿ ಕಿಲಾಡಿಗಳು ಶೋ ಮೂಲಕ ಅದೆಷ್ಟೋ ಹಾಸ್ಯ ಕಲಾವಿದರು ಬದುಕು ಕಟ್ಟಿಕೊಂಡಿದ್ದಾರೆ. ಹಾಸ್ಯದ ಮೂಲಕ ತಮ್ಮನ್ನು ತಾವು ಸಾಬೀತು ಮಾಡಿಕೊಳ್ಳಲು ಅನೇಕರಿಗೆ ಅವಕಾಶ ಇದೆ. ಈ ಶೋ ಸಾಕಷ್ಟು ಜನಪ್ರಿಯತೆ ಪಡೆದಿದೆ. ಇದಕ್ಕೂ ಹೊಸ ಸೀಸನ್ ಬರುತ್ತಿದೆ.

ಇದನ್ನೂ ಓದಿ:‘ಹಳ್ಳಿ ಪವರ್’ ರಿಯಾಲಿಟಿ ಶೋ ಜೀ ಕನ್ನಡದಲ್ಲಿ ಪ್ರಸಾರ ಆಗಲ್ಲ; ಹಾಗಿದ್ರೆ ಇನ್ನೆಲ್ಲಿ?

ಈ ಬಗ್ಗೆ ಜೀ ಕನ್ನಡ ವಾಹಿನಿ ಪೋಸ್ಟ್ ಹಂಚಿಕೊಂಡಿದೆ. ‘ಕುಣಿತದ ಹಬ್ಬ ಮಾಡೋ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹಾಗೂ ನಗುವಿನ ಜಾತ್ರೆ ಮಾಡೋ ಕಾಮಿಡಿ ಕಿಲಾಡಿಗಳು ಸೀಸನ್ 5ರ ಆಡಿಷನ್ಸ್ ರಾಜ್ಯಾದ್ಯಂತ ನಡೆಯುತ್ತಿದೆ. ನಿಮ್ಮ ಜಿಲ್ಲೆಯಲ್ಲಿ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಆಡಿಷನ್‌ ನಡೆಯಲಿದೆ. ಒಂದು ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಅಡ್ರೆಸ್ ಪ್ರೂಫ್ ಜೊತೆಗೆ ತಪ್ಪದೇ ಭಾಗವಹಿಸಿ’ ಎಂದು ಕೋರಲಾಗಿದೆ. ಇದೇ ಪ್ರೋಮೋದಲ್ಲಿ ಆಡಿಷನ್ ಬಗ್ಗೆ ಮಾಹಿತಿ ಇದೆ.

ಸದ್ಯ ಜೀ ಕನ್ನಡದಲ್ಲಿ ‘ಮಹಾನಟಿ ಸೀಸನ್ 2’ ನಡೆಯುತ್ತಿದೆ. ಜೀ ಪವರ್​ನಲ್ಲಿ ‘ಹಳ್ಳಿ ಪವರ್’ ಪ್ರಸಾರ ಆಗುತ್ತಿದೆ. ‘ಮಹಾನಟಿ 2’ ಮುಗಿದ ಬಳಿಕ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಹಾಗೂ ‘ಕಾಮಿಡಿ ಕಿಲಾಡಿಗಳು’ ಶೋ ಆರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Tue, 2 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ