ಪುನೀತ್​ ನೆನಪಲ್ಲಿ ಇನ್ನೊಂದು ದೊಡ್ಡ ಕಾರ್ಯಕ್ರಮ ‘ಅಪ್ಪು ಅಮರ’; ಇದು ಕಿರುತೆರೆ ಮಂದಿಯ ನಮನ

Puneeth Rajkumar: ನ.28ರ ಭಾನುವಾರದಂದು ಸಂಜೆ 4 ಗಂಟೆಗೆ ‘ಅಪ್ಪು ಅಮರ’ ಕಾರ್ಯಕ್ರಮ ನಡೆಯಲಿದೆ. ಜಯನಗರ ನ್ಯಾಷನಲ್​ ಕಾಲೇಜಿನ ಎಚ್​.ಎನ್​. ಕಲಾಕ್ಷೇತ್ರದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ.

ಪುನೀತ್​ ನೆನಪಲ್ಲಿ ಇನ್ನೊಂದು ದೊಡ್ಡ ಕಾರ್ಯಕ್ರಮ ‘ಅಪ್ಪು ಅಮರ’; ಇದು ಕಿರುತೆರೆ ಮಂದಿಯ ನಮನ
ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 22, 2021 | 8:01 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಇಡೀ ದಕ್ಷಿಣ ಭಾರತ ಚಿತ್ರರಂಗವೇ ಮಿಸ್​ ಮಾಡಿಕೊಳ್ಳುತ್ತಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳೆಲ್ಲರೂ ಸೇರಿ ಇತ್ತೀಚೆಗೆ ‘ಪುನೀತ ನಮನ’ ಕಾರ್ಯಕ್ರಮ ನಡೆಸಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಆ ಕಾರ್ಯಕ್ರಮ ಮಾಡಲಾಗಿತ್ತು. ಈಗ ಕನ್ನಡ ಕಿರುತೆರೆ ಧಾರಾವಾಹಿ (Kannada Serials) ಕಲಾವಿದರು ಮತ್ತು ತಂತ್ರಜ್ಞರು ಕೂಡ ಅಂಥದ್ದೇ ಮತ್ತೊಂದು ಕಾರ್ಯಕ್ರಮ ಏರ್ಪಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರು ಕೇವಲ ಸಿನಿಮಾಗಳಿಗೆ ಮಾತ್ರ ಸೀಮಿತವಾಗಿರಲಿಲ್ಲ. ಕಿರುತೆರೆಯಲ್ಲೂ ಅವರು ಛಾಪು ಮೂಡಿಸಿದ್ದರು. ‘ಕನ್ನಡದ ಕೋಟ್ಯಧಿಪತಿ’, ‘ಫ್ಯಾಮಿಲಿ ಪವರ್​’ ಶೋಗಳನ್ನು ಅವರು ನಡೆಸಿಕೊಟ್ಟಿದ್ದರು. ‘ನೇತ್ರಾವತಿ’ ಮುಂತಾದ ಸೀರಿಯಲ್​ಗಳನ್ನು ನಿರ್ಮಾಣ ಮಾಡಿದ್ದರು. ಹಾಗಾಗಿ ಅವರಿಗೆ ಮನರಂಜನಾ ವಾಹಿನಿಗಳ ಜತೆ ಇದ್ದ ಒಡನಾಟ ಕೂಡ ಸದಾ ನೆನಪಿನಲ್ಲಿ ಉಳಿಯುವಂಥದ್ದು. ಆದ್ದರಿಂದ ‘ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​’ (Karnataka Television Association) ವತಿಯಿಂದ ‘ಅಪ್ಪು ಅಮರ’ (Appu Amara) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ನ.28ರ ಭಾನುವಾರದಂದು ಸಂಜೆ 4 ಗಂಟೆಗೆ ‘ಅಪ್ಪು ಅಮರ’ ಕಾರ್ಯಕ್ರಮ ನಡೆಯಲಿದೆ. ಜಯನಗರ ನ್ಯಾಷನಲ್​ ಕಾಲೇಜಿನ ಎಚ್​.ಎನ್​. ಕಲಾಕ್ಷೇತ್ರದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ಕಿರುತೆರೆಯ ಬಹುತೇಕ ಎಲ್ಲ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗವಹಿಸಲಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರಿಗೆ ನಮನ ಸಲ್ಲಿಸುವುದರ ಜೊತೆಗೆ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ವಿಶೇಷ ಕಾರ್ಯಕ್ರಮವಾಗಿ ‘ಅಪ್ಪು ಅಮರ’ ಇವೆಂಟ್​ ನಡೆಯಲಿದೆ.

‘ಅಪ್ಪು ಅಮರ’ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎಲ್ಲ ಧಾರಾವಾಹಿ ನಿರ್ಮಾಣ ಸಂಸ್ಥೆಗಳ ಮುಖ್ಯಸ್ಥರ ಜೊತೆಯಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​ ಅಧ್ಯಕ್ಷ ಎಸ್​.ವಿ. ಶಿವಕುಮಾರ್​ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನ.28ರಂದು ಎಲ್ಲ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್​ ಹಾಕಲು ಸೂಚಿಸಲಾಗಿದೆ. ಆ ಮೂಲಕ ಎಲ್ಲ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲ ಆಗುವಂತೆ ಮಾಡಿಕೊಡಲಾಗುತ್ತಿದೆ. ಯಾವೆಲ್ಲ ಕಲಾವಿದರು ಈ ಕಾರ್ಯಕ್ರಮಕ್ಕೆ ಬರುತ್ತಾರೆ? ಬೇರೆ ಯಾರಿಗೆಲ್ಲ ಪ್ರವೇಶ ಇದೆ? ಒಟ್ಟಾರೆ ಕಾರ್ಯಕ್ರಮದ ರೂಪುರೇಷೆ ಹೇಗಿರಲಿದೆ ಎಂಬ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ಹಂಚಿಕೊಳ್ಳುವುದಾಗಿ ಕರ್ನಾಟಕ ಟಿಲಿವಿಷನ್​ ಅಸೋಸಿಯೇಷನ್​ ತಿಳಿಸಿದೆ.

ಇದನ್ನೂ ಓದಿ:

ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ರಾಜ್​-ಪುನೀತ್​ ಜೀವನ ಚರಿತ್ರೆ; ಇಲ್ಲಿದೆ ಅಭಿಮಾನಿಗಳಿಗೆ ಸಿಹಿ ಸುದ್ದಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು