AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದ ಈ ಧಾರಾವಾಹಿ ಶೀಘ್ರವೇ ಪೂರ್ಣ?

ಜೀ ಕನ್ನಡದ ಯಶಸ್ವಿ ಧಾರಾವಾಹಿ 'ಪುಟ್ಟಕ್ಕನ ಮಕ್ಕಳು' 1100ಕ್ಕೂ ಹೆಚ್ಚು ಸಂಚಿಕೆಗಳ ನಂತರ ಮುಕ್ತಾಯಗೊಳ್ಳಲು ಸಿದ್ಧವಾಗಿದೆ. ಅತ್ಯಧಿಕ ಟಿಆರ್‌ಪಿ ಗಳಿಸಿದ್ದ ಈ ಧಾರಾವಾಹಿಯ ಅಂತ್ಯ ವೀಕ್ಷಕರಿಗೆ ನಿರಾಶೆ ಮೂಡಿಸಿದೆ. ಇದರ ಬದಲು 'ಕೃಷ್ಣ ರುಕ್ಕು' ಎಂಬ ಹೊಸ ಧಾರಾವಾಹಿ ಪ್ರಸಾರವಾಗಲಿದ್ದು, ಪ್ರೇಕ್ಷಕರಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿದೆ.

ಜೀ ಕನ್ನಡದ ಈ ಧಾರಾವಾಹಿ ಶೀಘ್ರವೇ ಪೂರ್ಣ?
ಜೀ ಕನ್ನಡ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 17, 2026 | 7:52 AM

Share

ಜೀ ಕನ್ನಡ ವಾಹಿನಿಯಲ್ಲಿ ಹಲವು ಸೂಪರ್ ಹಿಟ್ ಧಾರಾವಾಹಿಗಳು ಬರುತ್ತಾ ಇವೆ. ಈ ಧಾರಾವಾಹಿಗಳು ಟಿಆರ್ಪಿಯಲ್ಲಿ ಉತ್ತಮ ವಿಮರ್ಶೆ ಪಡೆದು ಮುಂದೆ ಸಾಗುತ್ತಿವೆ. ಈ ರೀತಿ ಉತ್ತಮ ಟಿಆರ್ಪಿ ಪಡೆದ ಧಾರಾವಾಹಿಗಳ ಪೈಕಿ ಒಂದು ಧಾರಾವಾಹಿಯು ಕೊನೆಗೊಳ್ಳುವ ಸಮಯ ಬಂದಿದೆ ಎಂದರೆ ನೀವು ನಂಬಲೇ ಬೇಕು. ಅಷ್ಟಕ್ಕೂ ಯಾವುದು ಆ ಧಾರಾವಾಹಿ? ಪುಟ್ಟಕನ್ನ ಮಕ್ಕಳು.

ಈ ಧಾರಾವಾಹಿ ವೀಕ್ಷಕರ ವಲಯದಲ್ಲಿ ಸಾಕಷ್ಟು ಹಲ್ ಚಲ್ ಸೃಷ್ಟಿಸಿತ್ತು. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯಿತು. ಧಾರಾವಾಹಿಯನ್ನು ಜನರು ಸಾಕಷ್ಟು ಇಷ್ಟಪಟ್ಟರು. ಟಿಆರ್ಪಿಯಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆಯಿತು. ಹಲವು ತಿಂಗಳಕಾಲ ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಇತ್ತು. ಈ ಧಾರಾವಾಹಿಯನ್ನು ಯಾರು ಕೂಡ ಬೀಟ್ ಮಾಡಲು ಸಾಧ್ಯ ಆಗಿರಲೇ ಇಲ್ಲ.

ಮೊದಲು ಪ್ರೈಮ್ ಟೈಮ್ನಲ್ಲಿ ಪುಟ್ಟಕ್ಕನ ಮಕ್ಕಳು ಪ್ರಸಾರ ಕಾಣುತ್ತಾ ಇತ್ತು. ನಂತರ ಒಂದು ಹಂತದ ಬಳಿಕ ಈ ಧಾರಾವಾಹಿಯ ಟೈಮ್ನಲ್ಲಿ ಬದಲಾವಣೆ ಮಾಡಲಾಯಿತು. ಸಂಜೆ 6 ಗಂಟೆಗೆ ಧಾರಾವಾಹಿ ಪ್ರಸಾರ ಕಾಣಲು ಆರಂಭ ಆಯಿತು. ಈ ಧಾರಾವಾಹಿಯ ಪ್ರಮುಖ ಪಾತ್ರಗಳನ್ನೇ ಕೊನೆ ಮಾಡಿ ವೀಕ್ಷಕರಿಗೆ ಬೇಸರ ಮೂಡುವಂತೆ ಮಾಡಿದರು. ಈಗ ಧಾರಾವಾಹಿ ಕಿನೆ ಆಗೋ ಸಮಯ ಬಂದಿದೆ ಎಂದು ವರದಿ ಆಗಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈಗಾಗಲೇ 1100+ ಎಪಿಸೋಡ್ಗಳು ಪ್ರಸಾರ ಕಂಡಿವೆ. ಇದು ಧಾರಾವಾಹಿ ಹೆಚ್ಚುಗಾರಿಕೆ. ಹಲವು ವರ್ಷಗಳ ಕಾಲ ಧಾರಾವಾಹಿ ಪ್ರಸಾರ ಕಂಡು ಕೊನೆ ಆಗುತ್ತಿದೆ. ಇದು ವೀಕ್ಷಕರಿಗೆ ಬೇಸರ ಮೂಡಿಸುತ್ತಿದೆ.

ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಬಿಡಲು ನಿಜವಾದ ಕಾರಣ ಹೇಳಿದ ಸಂಜನಾ ಬುರ್ಲಿ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಬಳಿಕ ‘ಕೃಷ್ಣ ರುಕ್ಕು’ ಹೆಸರಿನ ಧಾರಾವಾಹಿಯು ಪ್ರಸಾರ ಕಾಣುವ ಸಾಧ್ಯತೆ ಇದೆ. ಈ ಧಾರಾವಾಹಿಯ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಕಲರ್ಸ್ ಕನ್ನಡದ ಮೌನ ಗುಡ್ಡೆ ಮನೆ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್