ಟಿಆರ್​ಪಿ ರೇಸ್​ನಲ್ಲಿ 3ನೇ ಸ್ಥಾನಕ್ಕೇರಿದ ‘ಅಮೃತಧಾರೆ’; ಟಾಪ್ 5ರಿಂದ ಹೊರನಡೆದ ‘ಭಾಗ್ಯಲಕ್ಷ್ಮೀ’, ‘ಲಕ್ಷ್ಮೀ ಬಾರಮ್ಮ’

‘ಅಮೃತಧಾರೆ’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮುನ್ನುಗ್ಗುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ದಾಖಲೆಯ ಟಿಆರ್​ಪಿ ಪಡೆದಿದೆ.

ಟಿಆರ್​ಪಿ ರೇಸ್​ನಲ್ಲಿ 3ನೇ ಸ್ಥಾನಕ್ಕೇರಿದ ‘ಅಮೃತಧಾರೆ’; ಟಾಪ್ 5ರಿಂದ ಹೊರನಡೆದ ‘ಭಾಗ್ಯಲಕ್ಷ್ಮೀ’, ‘ಲಕ್ಷ್ಮೀ ಬಾರಮ್ಮ’
ಕನ್ನಡ ಸೀರಿಯಲ್ಸ್​ ಟಿಆರ್​ಪಿ
Follow us
ರಾಜೇಶ್ ದುಗ್ಗುಮನೆ
|

Updated on: Jun 29, 2023 | 1:58 PM

ಟಿಆರ್​ಪಿ ರೇಸ್​ನಲ್ಲಿ ಒಬ್ಬರು ಮೇಲೆ ಹೋದರೆ, ಮತ್ತೊಬ್ಬರು ಕೆಳಗೆ ಬರುತ್ತಾರೆ. ಇತ್ತೀಚೆಗೆ ಆರಂಭ ಆದ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಟಿಆರ್​ಪಿ ರೇಸ್​ನಲ್ಲಿ ಮುನ್ನುಗ್ಗುತ್ತಿದೆ. ಈ ಮೊದಲು ಏಳನೇ ಸ್ಥಾನದಲ್ಲಿ ಇದ್ದ ಈ ಧಾರಾವಾಹಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಈ ಧಾರಾವಾಹಿಯನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ (Puttukkana Makkalu) ಧಾರಾವಾಹಿ ದಾಖಲೆಯ ಟಿಆರ್​ಪಿ ಪಡೆದಿದೆ. ಜೂನ್ 16ರಿಂದ ಜೂನ್ 23ರವರೆಗೆ ಯಾವ ಧಾರಾವಾಹಿ ಟಾಪ್ ಏಳರಲ್ಲಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಉಳಿದಂತೆ ‘ಲಕ್ಷ್ಮೀ ಬಾರಮ್ಮ’, ‘ಭಾಗ್ಯ ಲಕ್ಷ್ಮೀ’ ಧಾರಾವಾಹಿಗಳು ಟಾಪ್​ ಐದರಲ್ಲಿ ಸ್ಥಾನ ಪಡೆದಿಲ್ಲ.

‘ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಪುಟ್ಟಕ್ಕನ ಮಕ್ಕಳ ಮದುವೆಯ ಎಪಿಸೋಡ್​ಗಳು ಪ್ರಸಾರ ಕಾಣುತ್ತಿವೆ. ಈ ಕಾರಣಕ್ಕೆ ವೀಕ್ಷಕರ ಸಂಖ್ಯೆ ಹೆಚ್ಚಿದೆ. ಈ ಧಾರಾವಾಹಿ ಡಬಲ್ ಡಿಜಿಟ್ ಟಿಆರ್​ಪಿ ಪಡೆದಿದೆ. ಈ ಮೂಲಕ ದಾಖಲೆ ಬರೆದಿದೆ. ಇತ್ತೀಚಿನ ದಿನಗಳಲ್ಲಿ ಯಾವ ಧಾರಾವಾಹಿಯೂ ಈ ಮಟ್ಟದ ಟಿಆರ್​ಪಿ ಪಡೆದಿರಲಿಲ್ಲ.

‘ಗಟ್ಟಿಮೇಳ’

ಇತ್ತೀಚಿನ ತಿಂಗಳಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಒಂದೇ ರೀತಿಯ ಟಿಆರ್​ಪಿ ಕಾಯ್ದುಕೊಂಡು ಹೋಗುತ್ತಿದೆ. ಈ ಧಾರಾವಾಹಿ ಎರಡನೇ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. 1000+ ಎಪಿಸೋಡ್ ಆದರೂ ವೀಕ್ಷಕರ ವರ್ಗ ಕಡಿಮೆ ಆಗಿಲ್ಲ.

‘ಅಮೃತಧಾರೆ’

ರಾಜೇಶ್ ನಟರಂಗ, ಛಾಯಾ ಸಿಂಗ್, ಸಿಹಿ ಕಹಿ ಚಂದ್ರು ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಅಮೃತಧಾರೆ’ ಧಾರಾವಾಹಿ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಧಾರಾವಾಹಿಯ ಟಿಆರ್​ಪಿ ದಿನ ಕಳೆದಂತೆ ಹೆಚ್ಚುತ್ತಿದೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ.

ಶ್ರೀರಸ್ತು ಶುಭಮಸ್ತು

ಸುಧಾರಾಣಿ ಮೊದಲಾದವರು ನಟಿಸುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ನಾಲ್ಕನೇ ಸ್ಥಾನ ಕಾಯ್ದುಕೊಂಡಿದೆ. ಈ ಧಾರಾವಾಹಿ ಬೇಡಿಕೆ ಕಾಯ್ದುಕೊಂಡಿದೆ.

‘ನಮ್ಮ ಲಚ್ಚಿ’

‘ನಮ್ಮ ಲಚ್ಚಿ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ತಗ್ಗಿತು ‘ಲಕ್ಷ್ಮೀ ಬಾರಮ್ಮ’ ಟಿಆರ್​ಪಿ; ಹೆಚ್ಚಿತು ‘ಅಮೃತಧಾರೆ’ ವೀಕ್ಷಣೆ, ಪುಟ್ಟಕ್ಕನಿಗೆ ಮೊದಲ ಸ್ಥಾನ

‘ಭಾಗ್ಯಲಕ್ಷ್ಮೀ’-ಲಕ್ಷ್ಮೀ ಬಾರಮ್ಮ

‘ಭಾಗ್ಯಲಕ್ಷ್ಮೀ’ ಮೂರು ಅಥವಾ ನಾಲ್ಕನೇ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಈಗ ಈ ಧಾರಾವಾಹಿ ಏಳನೇ ಸ್ಥಾನಕ್ಕೆ ಇಳಿದಿದೆ. ಟಾಪ್ ಐದರಲ್ಲಿ ಇರುತ್ತಿದ್ದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಆರನೇ ಸ್ಥಾನಕ್ಕೆ ಇಳಿದಿದೆ. ಈ ಎರಡೂ ಧಾರಾವಾಹಿಗಳ ಟಿಆರ್​ಪಿ ಕೊಂಚ ತಗ್ಗಿದೆ. ಈ ಧಾರಾವಾಹಿಗಳು ಮತ್ತೆ ಕಂಬ್ಯಾಕ್ ಮಾಡಲಿದೆ ಅನ್ನೋದು ವೀಕ್ಷಕರ ಅಭಿಪ್ರಾಯ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ