AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ಪುಟ್ಟಕ್ಕನೇ ಫಸ್ಟ್​; ವಾರದ ಟಾಪ್ 5 ಸೀರಿಯಲ್​ಗಳಿವು

17ನೇ ವಾರದ ಟಿಆರ್​ಪಿ ಪಟ್ಟಿ ಬಿಡುಗಡೆ ಆಗಿದೆ. ಜೀ ಕನ್ನಡ ವಾಹಿನಿಯ ನಾಲ್ಕು ಹಾಗೂ ಕಲರ್ಸ್ ಕನ್ನಡದ ಒಂದು ಧಾರಾವಾಹಿ ಟಾಪ್​ ಐದರಲ್ಲಿ ಸ್ಥಾನ ಪಡೆದಿವೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಧಾರಾವಾಹಿ ಟಿಆರ್​ಪಿ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಕನ್ನಡ ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ಪುಟ್ಟಕ್ಕನೇ ಫಸ್ಟ್​; ವಾರದ ಟಾಪ್ 5 ಸೀರಿಯಲ್​ಗಳಿವು
ಕನ್ನಡ ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ಪುಟ್ಟಕ್ಕನೇ ಫಸ್ಟ್​; ವಾರದ ಟಾಪ್ 5 ಸೀರಿಯಲ್​ಗಳಿವು
ರಾಜೇಶ್ ದುಗ್ಗುಮನೆ
|

Updated on: May 03, 2024 | 3:00 PM

Share

ಧಾರಾವಾಹಿಗಳ ಟಿಆರ್​ಪಿಯಲ್ಲಿ ಪ್ರತಿ ವಾರ ಬದಲಾವಣೆ ಆಗುತ್ತಲೇ ಇರುತ್ತವೆ. ಈ ವಾರ ಮೊದಲಿದ್ದ ಧಾರಾವಾಹಿಗಳು ಮುಂದಿನ ವಾರ ಎರಡನೇ ಸ್ಥಾನಕ್ಕೆ ಜಿಗಿಯಬಹುದು. ಈಗ 17ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಪೈಕಿ ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ (Puttakana Makkalu Serial) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ಈ ಮೂಲಕ ಸತತ ಎರಡನೇ ವಾರವೂ ಧಾರಾವಾಹಿಗೆ ಮೊದಲ ಪ್ಲೇಸ್ ಸಿಕ್ಕಿದೆ ಅನ್ನೋದು ವಿಶೇಷ.

‘ಪುಟ್ಟಕನ ಮಕ್ಕಳು’ ಧಾರಾವಾಹಿ ಪಕ್ಕಾ ಹಳ್ಳಿ ಕಥೆ. ಈ ಧಾರಾವಾಹಿಯಲ್ಲಿ ಉಮಾಶ್ರೀ ಜೊತೆ ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಎರಡನೇ ವಾರ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿ ಪ್ರಸಾರ ಕಾಣುವುದಕ್ಕೂ ಮೊದಲು ಒಂದು ವರ್ಷಕ್ಕೂ ಅಧಿಕ ಕಾಲ ಈ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿತ್ತು.

ಎರಡನೇ ಸ್ಥಾನದಲ್ಲಿ ‘ಲಕ್ಷ್ಮಿ ನಿವಾಸ’ ಧಾರಾವಾಹಿ ಇದೆ. ಇತ್ತೀಚೆಗೆ ಪ್ರಸಾರ ಕಂಡ ಈ ಧಾರಾವಾಹಿ ಕೆಲವೇ ಪಾಯಿಂಟ್​ಗಳಲ್ಲಿ ಹಿಂದಿದೆ. ಹೀಗಾಗಿ ಟಿಆರ್​ಪಿ ರೇಸ್​ನಲ್ಲಿ ‘ಲಕ್ಷ್ಮಿ ನಿವಾಸ’ ಮತ್ತು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮಧ್ಯೆ ಭರ್ಜರಿ ಫೈಟ್ ಏರ್ಪಡುತ್ತಿದೆ.

ಮೂರನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ನಟಿಸಿರೋ ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಮೂರನೇ ಸ್ಥಾನ ಕಾಪಾಡಿಕೊಳ್ಳುತ್ತಾ ಬರುತ್ತಿದೆ. ಈ ಧಾರಾವಾಹಿ ವೀಕ್ಷಕರಿಂದ ಮೆಚ್ಚುಗೆ ಪಡೆಯುತ್ತಿದೆ.

ನಾಲ್ಕನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಜೀ ಕನ್ನಡದಲ್ಲಿ ಇತ್ತೀಚೆಗೆ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಯನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಧಾರಾವಾಹಿಗೆ ಉತ್ತಮ ಟಿಆರ್​ಪಿ ಸಿಕ್ಕಿದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಈ ಧಾರಾವಾಹಿಗಳ ಮಧ್ಯೆ ಇದೆ ಭರ್ಜರಿ ಸ್ಪರ್ಧೆ; ಇಲ್ಲಿದೆ ಟಾಪ್​ ಐದು ಸೀರಿಯಲ್

ಐದನೇ ಸ್ಥಾನದಲ್ಲಿ ‘ರಾಮಾಚಾರಿ’ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಇರೋ ಕಲರ್ಸ್ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ರಾಮಾಚಾರಿ’. ಈ ಧಾರಾವಾಹಿಯನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ