ಈ ವಾರದ ಧಾರಾವಾಹಿ ಟಿಆರ್ಪಿಯಲ್ಲಿ ಯಾರು ಕಿಂಗ್? ಇಲ್ಲಿದೆ ವಿವರ
ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಈ ಧಾರಾವಾಹಿಯನ್ನು ನೋಡುತ್ತಿದ್ದಾರೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ನಂಬರ್ 1 ಸ್ಥಾನದಲ್ಲಿ ಮುಂದುವರಿಯುತ್ತಿದೆ.
ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ತಿಂಗಳುಗಳಿಂದ ನಂಬರ್ 1 ಸ್ಥಾನ ಪಡೆಯುತ್ತಾ ಬಂದಿದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿ ಆರಂಭ ಆದಾಗ ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಪಡೆದಿತ್ತು. ಈಗ ಮತ್ತೆ ಈ ಸ್ಥಾನ ಪುಟ್ಟಕ್ಕನಿಗೆ ಸಿಕ್ಕಿದೆ. 31ನೇ ವಾರದ ಟಿಆರ್ಪಿ ರಿವೀಲ್ ಆಗಿದೆ. ಇದರಲ್ಲಿ ಪುಟ್ಟಕ್ಕನ ಮಕ್ಕಳು ಧಾರಾವಾಹಿಗೆ ಒಂದನೇ ಸ್ಥಾನ ಸಿಕ್ಕಿದೆ. ನಗರ ಹಾಗೂ ಗ್ರಾಮೀಣ ವಿಭಾಗದಲ್ಲಿ ಈ ಧಾರಾವಾಹಿ ಒಂದನೇ ಸ್ಥಾನದಲ್ಲಿ ಇದೆ.
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ, ಸಂಜನಾ ಬುರ್ಲಿ ಸೇರಿ ಅನೇಕರು ನಟಿಸುತ್ತಿದ್ದಾರೆ. ಈ ಧಾರಾವಾಹಿ ಪ್ರೇಕ್ಷಕರ ಗಮನ ಸೆಳೆದಿದೆ. ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಹಾಗೂ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮಧ್ಯೆ ಈ ಬಾರಿ ಸ್ವಲ್ಪ ದೊಡ್ಡ ಅಂತರವೇ ಇದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.
ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಸೀತಾ ಹಾಗೂ ರಾಮ್ ಮಧ್ಯೆ ಮದುವೆ ನಡೆದಿದೆ. ಸೀತಾಳಿಂದ ಮಗಳು ಸಿಹಿಯನ್ನು ದೂರ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಈ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ. ಮದುವೆ ಸಂದರ್ಭದಲ್ಲಿ ಟಿಆರ್ಪಿ ಹೆಚ್ಚಾಗಿತ್ತು.
ಇದನ್ನೂ ಓದಿ: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಭರ್ಜರಿ ಬೇಡಿಕೆ; ಟಿಆರ್ಪಿಯಲ್ಲಿ ಸಖತ್ ಏರಿಕೆ
ಐದನೇ ಸ್ಥಾನ ಈ ಬಾರಿ ‘ರಾಮಾಚಾರಿ’ ಧಾರಾವಾಹಿಗೆ ಸಿಕ್ಕಿದೆ. ಈ ಧಾರಾವಾಹಿ ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ‘ಅಮೃತಧಾರೆ’ ಧಾರಾವಾಹಿಯ ಟಿಆರ್ಪಿ ದಿನ ಕಳೆದಂತೆ ಕುಸಿಯುತ್ತಿದೆ. ಈ ಧಾರಾವಾಹಿಯ ಕಥೆಯಲ್ಲಿ ಕೊಂಚ ಬದಲಾವಣೆ ಮಾಡುವ ಅಗತ್ಯವಿದೆ. ಅಂದಾಗ ಮಾತ್ರ ಟಿಆರ್ಪಿ ಹೆಚ್ಚಲು ಸಾಧ್ಯ. ಇನ್ನು, ಹೊಸ ಧಾರಾವಾಹಿಗಳಾದ ‘ನಿನಗಾಗಿ’, ‘ಕರಿಮಣಿ’ ಹಾಗೂ ಶ್ರೀಗೌರಿ ಒಂದೇ ರೀತಿಯ ಟಿಆರ್ಪಿ ಪಡೆದು ಸಾಗುತ್ತಿವೆ. ಈ ಧಾರಾವಾಹಿಗಳಿಗೆ ಪಾಸಿಟಿವ್ ಪ್ರತಿಕ್ರಿಯೆ ವೀಕ್ಷಕರಿಂದ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.