ಟಿಆರ್​​ಪಿಯಲ್ಲಿ ‘ಪುಟ್ಟಕ್ಕ’ನೇ ನಂಬರ್ 1; ಆದರೂ ಧಾರಾವಾಹಿ ಪ್ರಸಾರ ಸಮಯದಲ್ಲಿ ಬದಲಾವಣೆ

ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ವಾರದ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದ್ದಾರೆ. ಹಳ್ಳಿ ಭಾಗದಲ್ಲಿ ಮಾತ್ರವಲ್ಲದೆ, ನಗರ ಭಾಗದಲ್ಲೂ ಈ ಧಾರಾವಾಹಿಗೆ ದೊಡ್ಡ ವೀಕ್ಷಕ ಬಳಗ ಸೃಷ್ಟಿ ಆಗಿದೆ

ಟಿಆರ್​​ಪಿಯಲ್ಲಿ ‘ಪುಟ್ಟಕ್ಕ’ನೇ ನಂಬರ್ 1; ಆದರೂ ಧಾರಾವಾಹಿ ಪ್ರಸಾರ ಸಮಯದಲ್ಲಿ ಬದಲಾವಣೆ
ಪುಟ್ಟಕ್ಕನ ಮಕ್ಕಳು
Follow us
ರಾಜೇಶ್ ದುಗ್ಗುಮನೆ
|

Updated on: Aug 01, 2024 | 2:20 PM

2024ನೇ ಸಾಲಿನ 30ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದೆ. ಈ ಧಾರಾವಾಹಿ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಆದರೆ, ಶೀಘ್ರವೇ ಈ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಆಗೋ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ‘ಪುಟ್ಟಕನ ಮಕ್ಕಳು’ ಧಾರಾವಾಹಿಯ ವೀಕ್ಷಕರು ಬೇಸರ ಹೊರಹಾಕುತ್ತಿದ್ದಾರೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈ ವಾರದ ಟಿಆರ್​ಪಿಯಲ್ಲಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಅಭಿಮಾನಿ ವರ್ಗ ದಿನ ಕಳೆದಂತೆ ಹೆಚ್ಚುತ್ತಿದ್ದಾರೆ. ಹಳ್ಳಿ ಭಾಗದಲ್ಲಿ ಮಾತ್ರವಲ್ಲದೆ, ನಗರ ಭಾಗದಲ್ಲೂ ಈ ಧಾರಾವಾಹಿಗೆ ದೊಡ್ಡ ವೀಕ್ಷಕ ಬಳಗ ಸೃಷ್ಟಿ ಆಗಿದೆ. ‘ಅಣ್ಣಯ್ಯ’ ಹೆಸರಿನ ಹೊಸ ಧಾರಾವಾಹಿ ಇದೇ ಆಗಸ್ಟ್ 12ರಿಂದ ಆರಂಭ ಆಗಲಿದೆ. ಈ ಧಾರಾವಾಹಿ ಸಂಜೆ 7:30ಕ್ಕೆ ಪ್ರಸಾರ ಕಾಣಲಿದೆ. ಇದೇ ಸಮಯದಲ್ಲಿ ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಹೀಗಾಗಿ, ಈ ಧಾರಾವಾಹಿಯ ಸಮಯ ಬದಲಾಗಲಿದೆ.

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಜನ ಮೆಚ್ಚುಗೆ ಪಡೆದಿದೆ. ವಿಶೇಷ ಎಂದರೆ ನಗರ ಭಾಗದ ಟಿಆರ್​ಪಿಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿಯನ್ನು ಹಿಂದಿಕ್ಕಿದೆ. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆಯುತ್ತಿದೆ.

ಇದನ್ನೂ ಓದಿ: ‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈಗಾಗಲೇ ಸೀತಾ ಹಾಗೂ ರಾಮ್ ಮದುವೆ ನೆರವೇರಿದೆ. ಈ ಕಾರಣಕ್ಕೆ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ಮುನ್ನುಗ್ಗುತ್ತಿದೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ. ಕಲರ್ಸ್ ಕನ್ನಡದ ಧಾರಾವಾಹಿಗಳ ಪೈಕಿ ಸ್ಥಾನ ಪಡೆದ ಏಕೈಕ ಧಾರಾವಾಹಿ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ