‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಮಸ್ತ್​ ಟಿಆರ್​ಪಿ; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?

|

Updated on: Jun 15, 2023 | 1:02 PM

ಜೂನ್ 3ರಿಂದ ಜೂನ್ 9ರವರೆಗಿನ ಅವಧಿಯ ಟಿಆರ್​ಪಿ ಮಾಹಿತಿ ರಿವೀಲ್ ಆಗಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದರಲ್ಲಿ ಮೊದಲ ಸ್ಥಾನದಲ್ಲಿದೆ. ಉಮಾಶ್ರೀ ಅವರ ಧಾರಾವಾಹಿಗೆ ಮೆಚ್ಚುಗೆ ಸಿಕ್ಕಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಗೆ ಮಸ್ತ್​ ಟಿಆರ್​ಪಿ; ‘ಅಮೃತಧಾರೆ’ಗೆ ಎಷ್ಟನೇ ಸ್ಥಾನ?
ಜೊತೆ ಜೊತೆಯಲಿ ಧಾರಾವಾಹಿ-ಅಮೃತಧಾರೆ
Follow us on

ಟಿಆರ್​ಪಿ ರೇಸ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ 400ಕ್ಕೂ ಅಧಿಕ ಎಪಿಸೋಡ್ ಪೂರೈಸಿದೆ. ಆದಾಗ್ಯೂ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇತ್ತೀಚೆಗೆ ಪ್ರಸಾರ ಆರಂಭಿಸಿದ ‘ಅಮೃತಧಾರೆ’ ಧಾರಾವಾಹಿ (Amruthadhare Serial) ಕೂಡ ಟಿಆರ್​ಪಿ ಹೆಚ್ಚಿಸಿಕೊಳ್ಳುತ್ತಿದೆ. ಈ ವಾರ ಯಾವ ಧಾರಾವಾಹಿ ಎಷ್ಟನೇ ಸ್ಥಾನದಲ್ಲಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಜೂನ್ 3ರಿಂದ ಜೂನ್ 9ರವರೆಗಿನ ಅವಧಿಯ ಟಿಆರ್​ಪಿ ಮಾಹಿತಿ ರಿವೀಲ್ ಆಗಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದರಲ್ಲಿ ಮೊದಲ ಸ್ಥಾನದಲ್ಲಿದೆ. ಉಮಾಶ್ರೀ ಅವರ ಧಾರಾವಾಹಿಗೆ ಮೆಚ್ಚುಗೆ ಸಿಕ್ಕಿದೆ. ಈ ಧಾರಾವಾಹಿ ಬಳಿ ಯಾವುದೇ ಧಾರಾವಾಹಿ ಸುಳಿದಿಲ್ಲ. ‘ಗಟ್ಟಿಮೇಳ’ ಧಾರಾವಾಹಿ ಎರಡನೇ ಸ್ಥಾನದಲ್ಲಿದೆ. ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್ ಅವರು ಧಾರಾವಾಹಿಯಲ್ಲಿ ನಟಿಸಿದ್ದಾರೆ. ಈ ಎರಡೂ ಧಾರಾವಾಹಿಗಳು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಮೂರನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಇದೆ. ಸುಧಾರಾಣಿ, ಅಜಿತ್ ಹಂಡೆ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಮೊದಲ ಟಾಪ್​ ನಾಲ್ಕು ಧಾರಾವಾಹಿಗಳು ಜೀ ಕನ್ನಡದವೇ ಅನ್ನೋದು ವಿಶೇಷ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಕೂಡ ‘ಸತ್ಯ’ ಧಾರಾವಾಹಿಯಷ್ಟೇ ಟಿಆರ್​ಪಿ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ.

ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿಗೆ ‘ಅಮೃತಧಾರೆ’ ಹೋಲಿಕೆ; ಪ್ರತಿಕ್ರಿಯೆ ನೀಡಿದ ರಾಜೇಶ್ ನಟರಂಗ

‘ನಮ್ಮ ಲಚ್ಚಿ’ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಆರನೇ ಸ್ಥಾನದಲ್ಲಿದೆ. ಇತ್ತೀಚೆಗೆ ಆರಂಭ ಆದ ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿ ಟಿಆರ್​ಪಿ ಹೆಚ್ಚಿಸಿಕೊಳ್ಳುತ್ತಿದೆ. ಈ ಧಾರಾವಾಹಿಗೂ ಆರನೇ ಸ್ಥಾನ ಸಿಕ್ಕಿದೆ. ವಾರ ಕಳೆದಂತೆ ಧಾರಾವಾಹಿಯ ಟಿಆರ್​ಪಿ ಹೆಚ್ಚುತಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಸಿಹಿ ಕಹಿ ಚಂದ್ರು, ಸಾರಾ ಅಣ್ಣಯ್ಯ ಮೊದಲಾದವರು ಈ ಧಾರಾವಾಹಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ