ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ ಉಮಾಶ್ರೀ ಧಾರಾವಾಹಿ; ಇಲ್ಲಿದೆ ಟಾಪ್ 10 ಸೀರಿಯಲ್ಸ್

Kannada Serials TRP: ಕಳೆದ ವಾರದ (ಏಪ್ರಿಲ್ 29-ಮೇ 4) ಟಿಆರ್​ಪಿ ಹೊರಬಿದ್ದಿದೆ. ಉಮಾಶ್ರೀ ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಮೊದಲ ಸ್ಥಾನ ಕಾಯ್ದುಕೊಂಡಿದೆ.

ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ ಉಮಾಶ್ರೀ ಧಾರಾವಾಹಿ; ಇಲ್ಲಿದೆ ಟಾಪ್ 10 ಸೀರಿಯಲ್ಸ್
ಉಮಾಶ್ರೀ-ನಿಶಾ
Follow us
|

Updated on:May 11, 2023 | 1:15 PM

ಕಿರುತೆರೆಯಲ್ಲಿ ಸ್ಪರ್ಧೆ ಹೆಚ್ಚಿದೆ. ಪ್ರತಿ ವಾಹಿನಿಯವರು ಧಾರಾವಾಹಿಗಳನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ಪ್ರಯತ್ನಿಸುತ್ತಾರೆ. ಮದುವೆ ದೃಶ್ಯಗಳು ಬಂತೆಂದರೆ ಅಲ್ಲಿ ನಿಜವಾದ ವಿವಾಹವೇ ಜರುಗುತ್ತಿದೆಯೇನೋ ಎನ್ನುವಷ್ಟು ಅದ್ದೂರಿಯಾಗಿ ಇರುತ್ತವೆ ಸೆಟ್​ಗಳು. ಇನ್ನು, ಮೇಕಿಂಗ್ ವಿಚಾರದಲ್ಲೂ ಧಾರಾವಾಹಿ ಟೀಂಗಳು ಹಿಂದೆ ಬಿದ್ದಿಲ್ಲ. ಈ ಎಲ್ಲಾ ಕಾರಣದಿಂದ ಸ್ಪರ್ಧೆ ಹೆಚ್ಚಾಗಿದೆ. ಈ ಸ್ಪರ್ಧೆಯಲ್ಲಿ ಗೆದ್ದವರು ಯಾರು ಎಂಬುದನ್ನು ಅಳೆಯೋಕೆ ಇರೋದು ಟಿಆರ್​ಪಿ. ಕಳೆದ ವಾರದ (ಏಪ್ರಿಲ್ 29-ಮೇ 4) ಟಿಆರ್​ಪಿ ಹೊರಬಿದ್ದಿದೆ. ಉಮಾಶ್ರೀ (Umashree) ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ (Puttakana Makkala)ಮೊದಲ ಸ್ಥಾನ ಕಾಯ್ದುಕೊಂಡಿದೆ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ಉಮಾಶ್ರೀ ಅವರು ನಟನೆ ಮೂಲಕ ಗಮನ ಸೆಳೆದಿದ್ದಾರೆ. ಅವರ ಪಾತ್ರ ವೀಕ್ಷಕರಿಗೆ ಇಷ್ಟವಾಗಿದೆ. ಹೀಗಾಗಿ, ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ.

ಗಟ್ಟಿಮೇಳ:

ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿರುವ ‘ಗಟ್ಟಿಮೇಳ’ ಧಾರಾವಾಹಿ ಕಳೆದವಾರ ಎರಡನೇ ಸ್ಥಾನದಲ್ಲಿತ್ತು. ಈ ಸ್ಥಾನವನ್ನು ಉಳಿಸಿಕೊಂಡಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಜನಮನ್ನಣೆ ಪಡೆದಿದೆ. ಈಗಾಗಲೇ ಧಾರಾವಾಹಿ 1000+ ಎಪಿಸೋಡ್ ಪೂರೈಸಿದೆ. ಆದಾಗ್ಯೂ ಧಾರಾವಾಹಿ ಟಿಆರ್​ಪಿ ಕಳೆದುಕೊಂಡಿಲ್ಲ.

ಲಕ್ಷ್ಮೀ ಬಾರಮ್ಮ:

ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಜನಮನ್ನಣೆ ಪಡೆದಿದೆ. ಈ ಧಾರಾವಾಹಿಯನ್ನು ಜನರು ಇಷ್ಟಪಡುತ್ತಿದ್ದಾರೆ. ಟಾಪ್ ಐದರಲ್ಲಿ ಈ ಧಾರಾವಾಹಿಗೆ ಮೂರನೇ ಸ್ಥಾನ ಇದೆ.

ಶ್ರೀರಸ್ತು ಶುಭಮಸ್ತು:

ಸುಧಾರಾಣಿ ಅವರು ಹಿರಿತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡವರು. ಅವರು ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಗಮನ ಸೆಳೆಯುತ್ತಿದ್ದಾರೆ. ತುಳಸಿ ಹೆಸರಿನ ಪಾತ್ರವನ್ನು ಅವರು ಮಾಡಿದ್ದಾರೆ. ಮಾಧವ್ ಆಗಿ ಅಜಿತ್ ಹಂದೆ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಕಳೆದ ವಾರ ಈ ಧಾರಾವಾಹಿ ಐದನೇ ಸ್ಥಾನದಲ್ಲಿತ್ತು.

‘ಭಾಗ್ಯ ಲಕ್ಷ್ಮೀ’:

‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಕೂಡ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿದೆ. ಈ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿದೆ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ.

ಉಳಿದ ಸ್ಥಾನ..

ಆರನೇ ಸ್ಥಾನದಲ್ಲಿ ‘ಸತ್ಯ’, ಏಳನೇ ಸ್ಥಾನದಲ್ಲಿ ‘ತ್ರಿನಯನಿ’, ಎಂಟನೇ ಸ್ಥಾನದಲ್ಲಿ ‘ಹಿಟ್ಲರ್ ಕಲ್ಯಾಣ’, ಒಂಭತ್ತು ಹಾಗೂ ಹತ್ತನೇ ಸ್ಥಾನದಲ್ಲಿ  ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’, ಹಾಗೂ ‘ಪುನರ್ ​ವಿವಾಹ’ ಧಾರಾವಾಹಿಗಳು ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:42 pm, Thu, 11 May 23

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!