ನ್ಯೂ ಇಯರ್​​ ಪಾರ್ಟಿಗೆ ರಾಧಿಕಾ ಕುಮಾರಸ್ವಾಮಿ ರಂಗು; ಕಲರ್ಸ್​ ಕನ್ನಡದಲ್ಲಿ ಮಸ್ತ್​ ಡ್ಯಾನ್ಸ್​

Radhika Kumaraswamy: ಕೆಂಗುಲಾಬಿ ಬಣ್ಣದ ಕಾಸ್ಟ್ಯೂಮ್​ ಧರಿಸಿ ರಾಧಿಕಾ ಕುಮಾರಸ್ವಾಮಿ ಅವರು ಭರ್ಜರಿಯಾಗಿ ಡ್ಯಾನ್ಸ್​ ಮಾಡಿದ್ದಾರೆ. ‘ರಂಗು ರಂಗೋಲಿ’ ಕಾರ್ಯಕ್ರಮದ ಮೂಲಕ ಅವರು ಅಭಿಮಾನಿಗಳಿಗೆ ಮಸ್ತ್​ ಮನರಂಜನೆ ನೀಡಲಿದ್ದಾರೆ.

ನ್ಯೂ ಇಯರ್​​ ಪಾರ್ಟಿಗೆ ರಾಧಿಕಾ ಕುಮಾರಸ್ವಾಮಿ ರಂಗು; ಕಲರ್ಸ್​ ಕನ್ನಡದಲ್ಲಿ ಮಸ್ತ್​ ಡ್ಯಾನ್ಸ್​
ರಾಧಿಕಾ ಕುಮಾರಸ್ವಾಮಿ
Follow us
TV9 Web
| Updated By: ಮದನ್​ ಕುಮಾರ್​

Updated on: Dec 26, 2021 | 11:59 AM

ಹೊಸ ವರ್ಷವನ್ನು (New Year 2022) ಸ್ವಾಗತಿಸಲು ಇಡೀ ಪ್ರಪಂಚವೇ ಕಾದಿದೆ. ಈ ವರ್ಷ ಅನುಭವಿಸಿದ ಕಷ್ಟ-ನಷ್ಟಗಳನ್ನೆಲ್ಲ ಮರೆತು, ಹೊಸ ಸಂವತ್ಸರವನ್ನು ಬರಮಾಡಿಕೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಈ ಸಲುವಾಗಿ ಕನ್ನಡದ ಮನರಂಜನಾ ವಾಹಿನಿಗಳು ಕೂಡ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಿವೆ. ಕಲರ್ಸ್​ ಕನ್ನಡ (Colors Kannada) ವಾಹಿನಿಯಲ್ಲಿ ಈ ವರ್ಷಾಂತ್ಯದ ಪಾರ್ಟಿ ಜೋರಾಗಿರಲಿದೆ. ‘ರಂಗು ರಂಗೋಲಿ’ ಕಾರ್ಯಕ್ರಮದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ಮನಮೋಹಕವಾಗಿ ಡ್ಯಾನ್ಸ್​ ಮಾಡಿದ್ದಾರೆ. ಡಿ.31 ಮತ್ತು ಜ.1ರಂದು ರಾತ್ರಿ 7.30ಕ್ಕೆ ಈ ಕಲರ್​ಫುಲ್​ ಶೋ ಪ್ರಸಾರ ಆಗಲಿದೆ.

ಈ ಕಾರ್ಯಕ್ರಮದ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಕೆಂಗುಲಾಬಿ ಬಣ್ಣದ ಕಾಸ್ಟ್ಯೂಮ್​ ಧರಿಸಿ ರಾಧಿಕಾ ಕುಮಾರಸ್ವಾಮಿ ಅವರು ಭರ್ಜರಿ ಪರ್ಫಾರ್ಮೆನ್ಸ್​ ನೀಡಿದ್ದಾರೆ. ಹಲವು ಹಾಡುಗಳಿಗೆ ಅವರು ಹೆಜ್ಜೆ ಹಾಕಿದ್ದಾರೆ. ಗ್ಲಾಮರಸ್​ ಆಗಿ ಕ್ಯಾಮೆರಾ ಎದುರಿಸಿದ್ದಾರೆ. ‘ರಂಗು ರಂಗೋಲಿ’ ಕಾರ್ಯಕ್ರಮದ ಮೂಲಕ ಅವರು ಅಭಿಮಾನಿಗಳಿಗೆ ಮಸ್ತ್​ ಮನರಂಜನೆ ನೀಡಲಿದ್ದಾರೆ.

ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿರುವುದಾಗಿ ವೀಕ್ಷಕರು ಕಮೆಂಟ್​ ಮೂಲಕ ತಿಳಿಸಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ. ಅವರನ್ನು ಬೆಳ್ಳಿಪರದೆ ಮೇಲೆ ನೋಡಲು ಫ್ಯಾನ್ಸ್​ ಬಯಸುತ್ತಿದ್ದಾರೆ. ಒಂದಷ್ಟು ವರ್ಷಗಳ ಕಾಲ ಗ್ಯಾಪ್​ ಮಾಡಿದ್ದ ಅವರು ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. 2019ರಲ್ಲಿ ಅವರು ನಟಿಸಿದ ‘ಧಮಯಂತಿ’ ಚಿತ್ರ ಬಿಡುಗಡೆ ಆಯಿತು. ಈಗ ರಾಧಿಕಾ ಕುಮಾರಸ್ವಾಮಿ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ಪದೇ ಪದೇ ಎದುರಾಗುತ್ತಿರುವ ಕೊರೊನಾ ಕಾಟದಿಂದಾಗಿ ಆ ಎಲ್ಲ ಸಿನಿಮಾ ಕೆಲಸಗಳು ತಡವಾಗುತ್ತಿವೆ.

ರಾಧಿಕಾ ಕುಮಾರಸ್ವಾಮಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2002ರಲ್ಲಿ. ಅವರು ನಟಿಸಿದ ಮೊದಲ ಸಿನಿಮಾ ‘ನಿನಗಾಗಿ’ ಸೂಪರ್​ ಹಿಟ್​. ಆ ಬಳಿಕ ಅವರು ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ‘ತವರಿಗೆ ಬಾ ತಂಗಿ’ ಸಿನಿಮಾದಲ್ಲಿ ಶಿವರಾಜ್​ಕುಮಾರ್​ ಜತೆ ನಟಿಸುವ ಮೂಲಕ ಅವರು ಫ್ಯಾಮಿಲಿ ಪ್ರೇಕ್ಷಕರ​ ಮನ ಗೆದ್ದರು. ಇತ್ತೀಚಿನ ವರ್ಷಗಳಲ್ಲಿ ಅವರ ಸಿನಿಮಾಗಳ ಸಂಖ್ಯೆ ತಗ್ಗಿದೆ. ಅವರು ಬ್ಯಾಕ್​ ಟು ಬ್ಯಾಕ್​ ಚಿತ್ರಗಳಲ್ಲಿ ನಟಿಸಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ಇದನ್ನೂ ಓದಿ:

‘ಚಿತ್ರರಂಗಕ್ಕೆ ಪುನೀತ್​ ರೀತಿಯ ನಟ ಬೇಕು; ನಿಖಿಲ್​ ಹೆಚ್ಚು ಸಿನಿಮಾ ಮಾಡಲಿ’: ಎಚ್​​.ಡಿ. ಕುಮಾರಸ್ವಾಮಿ

ಪುನೀತ್ ಅವರೊಂದಿಗೆ ನಟಿಸುವ ಮಹದಾಸೆ ಈಡೇರಲೇಯಿಲ್ಲ, ನನ್ನ ನಿರ್ಮಾಣದ ಸಿನಿಮಾನಲ್ಲಿ ನಟಿಸಲು ಒಪ್ಪಿದ್ದರು: ರಾಧಿಕಾ ಕುಮಾಸ್ವಾಮಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ