‘ಮಂಜು ತಿಕ್ಲ, ಚೈತ್ರಾ ಪುಕ್ಲು’: ಬಿಗ್ ಬಾಸ್ ಮನೆಗೆ ಬರುತ್ತಲೇ ವಿವಾದ ಎಬ್ಬಿಸಿದ ರಜತ್

ಹಲವು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಹೆಸರು ಮಾಡಿರುವ ರಜತ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ವೈಲ್ಡ್ ಕಾರ್ಡ್​ ಮೂಲಕ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಸ್ಪರ್ಧಿ ಆಗಿದ್ದಾರೆ. ವೇದಿಕೆಯಲ್ಲಿ ಸುದೀಪ್ ಜೊತೆ ಮಾತನಾಡುವಾಗ ರಜತ್ ಅವರು ಭಾರಿ ಜೋಶ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವು ಕಿರಿಕ್​ ಡೈಲಾಗ್​ಗಳಲ್ಲಿ ಹೇಳಿದ್ದಾರೆ.

‘ಮಂಜು ತಿಕ್ಲ, ಚೈತ್ರಾ ಪುಕ್ಲು’: ಬಿಗ್ ಬಾಸ್ ಮನೆಗೆ ಬರುತ್ತಲೇ ವಿವಾದ ಎಬ್ಬಿಸಿದ ರಜತ್
ರಜತ್, ಚೈತ್ರಾ ಕುಂದಾಪರ, ಉಗ್ರಂ ಮಂಜು
Follow us
ಮದನ್​ ಕುಮಾರ್​
|

Updated on: Nov 17, 2024 | 11:18 PM

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ 50 ದಿನಗಳು ಕಳೆದಿವೆ. ಈ ಹಂತದಲ್ಲಿ ಹೊಸ ಸ್ಪರ್ಧಿಗಳನ್ನು ಪರಿಚಯಿಸಲಾಗಿದೆ. ಈಗಾಗಲೇ ಹನುಮಂತ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಗಮನ ಸೆಳೆದಿದ್ದಾರೆ. ಮತ್ತೆ ಇಬ್ಬರು ಸ್ಪರ್ಧಿಗಳಿಗೆ ವೈಲ್ಡ್ ಕಾರ್ಡ್​ ಮೂಲಕ ಅವಕಾಶ ನೀಡಲಾಗಿದೆ. ತೆಲುಗು ಕಿರುತೆರೆಯಲ್ಲಿ ಹೆಸರು ಮಾಡಿರುವ ಶೋಭಾ ಶೆಟ್ಟಿ ಹಾಗೂ ಒಂದಷ್ಟು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಅನುಭವ ಪಡೆದಿರುವ ರಜತ್ ಅವರು ಈಗ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಬಂದಿದ್ದಾರೆ.

ಬಿಗ್ ಬಾಸ್ ಮನೆಯ ಒಳಗೆ ಹೋಗುವುದಕ್ಕೂ ಮುನ್ನ ರಜತ್​ ಮತ್ತು ಶೋಭಾ ಶೆಟ್ಟಿ ಅವರನ್ನು ವೇದಿಕೆಯಲ್ಲಿ ಸುದೀಪ್ ಮಾತನಾಡಿಸಿದ್ದಾರೆ. ಭಾರಿ ಉತ್ಸಾಹ ಮತ್ತು ಕಾನ್ಫಿಡೆನ್ಸ್​ನಲ್ಲಿ ರಜತ್ ಮಾತನಾಡಿದ್ದಾರೆ. ಆದರೆ ಮಾತಿನ ಭರದಲ್ಲಿ ಅವರು ಕೆಲವು ಸ್ಪರ್ಧಿಗಳ ಬಗ್ಗೆ ಹಗುರವಾದ ಮಾತುಗಳನ್ನು ಹೇಳಿದ್ದಾರೆ. ಇದರಿಂದ ಮನೆಯ ಒಳಗೆ ವಿವಾದ ಹೊತ್ತಿಕೊಳ್ಳುವ ಸಾಧ್ಯತೆ ಇದೆ.

ಉಪೇಂದ್ರ ನಟನೆಯ ‘ರಕ್ತಕಣ್ಣೀರು’ ಸಿನಿಮಾದ ಡೈಲಾಗ್ ರೀತಿಯಲ್ಲಿ ರಜತ್ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ‘ಈ ಮನೆಯಲ್ಲಿ ಅರ್ಧ ಜನ ತಿಕ್ಲು, ಇನ್ನು ಅರ್ಧ ಜನ ಪುಕ್ಲು. ಇವರು ಯಾರೂ ಉದ್ಧಾರ ಆಗಲ್ಲ’ ಎಂದು ರಜತ್ ಹೇಳಿದರು. ‘ತಿಕ್ಲು ಯಾರು, ಪುಕ್ಲು ಯಾರು’ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಕ್ಕೆ ಉಗ್ರಂ ಮಂಜು ಮತ್ತು ಚೈತ್ರಾ ಕುಂದಾಪರ ಅವರ ಹೆಸರನ್ನು ರಜತ್ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಅನುಷಾ ರೈ ಎಲಿಮಿನೇಟ್; ಬಚಾವ್ ಆದ ಧರ್ಮ

‘ಉಗ್ರಂ ಮಂಜು ಮನಸ್ಸಿಗೆ ಬಂದಂಗೆ ಆಡುತ್ತಾರೆ. ತ್ರಿವಿಕ್ರಮ್​ ಅವರದ್ದು ಮುಖವಾಡದ ಆಟ. ಗೌತಮಿ ಕೂಡ ಮುಖವಾಡ ಹಾಕಿಕೊಂಡಿದ್ದಾರೆ. ಆದರೆ ನಾನು ಸಂಪೂರ್ಣ ಮನರಂಜನೆ ನೀಡುತ್ತೇನೆ.’ ಎಂದು ರಜತ್ ಹೇಳಿದ್ದಾರೆ. ‘ಇಷ್ಟು ವರ್ಷ ಮಾಡಿದ ಬೇರೆ ಬೇರೆ ರಿಯಾಲಿಟಿ ಶೋನಲ್ಲಿ ನನ್ನನ್ನು ಬೆಂಬಲಿಸಿದ್ದೀರಿ. ಈಗ ದೊಡ್ಡ ವೇದಿಕೆ ಸಿಕ್ಕಿದೆ. ಈಗಲೂ ಬೆಂಬಲ ನೀಡಿ’ ಎಂದು ಪ್ರೇಕ್ಷಕರಲ್ಲಿ ರಜತ್ ಮನವಿ ಮಾಡಿದ್ದಾರೆ. ಸೋಮವಾರ (ನವೆಂಬರ್​ 18) ಬೆಳಗ್ಗೆ ರಜತ್ ಮತ್ತು ಶೋಭಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯ ಒಳಗೆ ಕಾಲಿಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ