ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​

‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸಾಕಷ್ಟು ಪ್ರತಿಭೆಗಳಿಗೆ ಇದು ವೇದಿಕೆ ಆಗಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ.

ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​
ಎಸ್​.ಪಿ. ಬಾಲಸುಬ್ರಹ್ಮಣ್ಯಂ ನೆನೆದು ಹಾಡುವಾಗಲೇ ಕಣ್ಣೀರಿಟ್ಟ ರಾಜೇಶ್​ ಕೃಷ್ಣನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 21, 2021 | 2:27 PM

ಎಸ್​.ಪಿ ಬಾಲಸುಬ್ರಹ್ಮಣ್ಯಂ​ ಅವರು ಅಭಿಮಾನಿ ಬಳಗದ ಜತೆಗೆ ದೊಡ್ಡ ಶಿಷ್ಯವರ್ಗವನ್ನೂ ಹೊಂದಿದ್ದಾರೆ. ನೇರವಾಗಿ ಹಾಗೂ ಪರೋಕ್ಷವಾಗಿ ಸಾಕಷ್ಟು ಮಂದಿ ಅವರಿಂದ ಹಲವು ವಿಚಾರಗಳನ್ನು ಕಲಿತಿದ್ದಾರೆ. ಈ ಕಾರಣಕ್ಕೆ ಎಸ್​ಪಿಬಿ ಎಂದರೆ ಎಲ್ಲರಿಗೂ ಅಪಾರ ಗೌರವ. ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಎರಡನೇ ಇನ್ನಿಂಗ್ಸ್​ ಮತ್ತೆ ಆರಂಭಿಸಲಾಗಿದೆ. ಈ ವೇದಿಕೆ ಸಾಕಷ್ಟು ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ.

‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸಾಕಷ್ಟು ಪ್ರತಿಭೆಗಳಿಗೆ ಇದು ವೇದಿಕೆ ಆಗಿದೆ. ಇದರ ಜತೆಗೆ ಎಸ್​ಪಿಬಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಕೂಡ ಆಗುತ್ತಿದೆ. ಜಡ್ಜ್​ಗಳು ಎಸ್​ಪಿಬಿ ಅವರನ್ನು ನೆನೆನೆನೆದು ಕಣ್ಣೀರು ಹಾಕುತ್ತಿದ್ದಾರೆ. ಈಗ ರಾಜೇಶ್​ ಕೃಷ್ಣನ್​ ಕೂಡ ಭಾವುಕರಾಗಿದ್ದಾರೆ.

ಎಸ್​ಪಿಬಿ ಕಂಡರೆ ರಾಜೇಶ್​​ ಕೃಷ್ಣನ್​ ಅವರಿಗೆ ಅಪಾರ ಗೌರವ. ಈಗ ಅವರಿಗೆ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ಜಡ್ಜ್​​ ಆಗುವ ಸದಾವಕಾಶ ಸಿಕ್ಕಿದೆ. ಇದಕ್ಕೆ ಅವರು ಸಾಕಷ್ಟು ಖುಷಿಯಾಗಿದ್ದಾರೆ. ‘ನಿಮಗಿದೆ ಮರುಜನ್ಮ.. ಜನಿಸಿರಿ ದಯಮಾಡಿ.. ಕಾಯುತಿದೆ ಕರುನಾಡು..’ ಎನ್ನುವ ಸಾಲುಗಳನ್ನು ಹೇಳುತ್ತಿದ್ದಂತೆ ಅವರು ಭಾವೋದ್ವೇಗಕ್ಕೆ ಒಳಗಾಗಿದ್ದಾರೆ. ಅವರು ವೇದಿಕೆ ಮೇಲೆಯೇ ಗಳಗಳನೆ ಅತ್ತಿದ್ದಾರೆ.

ಇಂದು (ಆಗಸ್ಟ್​ 21) ರಾತ್ರಿ 9 ಗಂಟೆಗೆ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಪ್ರಸಾರವಾಗಲಿದೆ. ಹೊಸ ಸೀಸನ್​ನಲ್ಲಿ ರಾಜೇಶ್ ಕೃಷ್ಣನ್, ವಿ.ಹರಿಕೃಷ್ಣ, ರಘು ದೀಕ್ಷಿತ್ ಹಾಗೂ ಎಸ್​ಪಿಬಿ ಮಗ ಚರಣ್​ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಈಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಅದರ ಮುಂದುವರಿದ ಭಾಗ ಇದಾಗಿದೆ. ಇತ್ತೀಚೆಗೆ ಚರಣ್​ ಅವರು ವೇದಿಕೆ ಮೇಲೆ ಮಾತನಾಡಿದ್ದರು.  ‘ಎಲ್ಲೆಲ್ಲಿ ಸಂಗೀತ ಇರುತ್ತದೆಯೋ ಅಲ್ಲಿ ನಮ್ಮ ತಂದೆ ಇರುತ್ತಾರೆ. ಅವರೆಲ್ಲಿ ಇರುತ್ತಾರೋ ನಾನು ಅಲ್ಲಿರ್ತೀನಿ’ ಎಂದಿದ್ದರು.

ಇದನ್ನೂ ಓದಿ: ಎSPB Birth Anniversary: ಪ್ರೀತಿಯ ಎಸ್​ಪಿಬಿ ಸರ್, ಎದೆ ತುಂಬಿ ಹಾಡಲು ನೀವು ಮತ್ತೆ ಹುಟ್ಟಿಬರಬೇಕು

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ