ಹೀಗೆ ಮುಂದುವರಿದ್ರೆ ರಾಕೇಶ್ ಅಡಿಗ ಬಿಗ್ ಬಾಸ್ ವಿನ್ನರ್? ಸ್ಪರ್ಧಿಗಳಿಗೆ ಶುರುವಾಯ್ತು ಭಯ

ಪ್ರತಿ ವಾರ ಸುದೀಪ್ ಅವರು ವೀಕೆಂಡ್​ನಲ್ಲಿ ಒಂದು ಸ್ಪರ್ಧಿಗೆ ಚಪ್ಪಾಳೆ ನೀಡುತ್ತಾರೆ. ಈ ಚಪ್ಪಾಳೆ ತೆಗೆದುಕೊಳ್ಳೋಕೆ ಸ್ಪರ್ಧಿಗಳು ಸಾಕಷ್ಟು ಪರಿಶ್ರಮ ಪಡಬೇಕಾಗುತ್ತದೆ.

ಹೀಗೆ ಮುಂದುವರಿದ್ರೆ ರಾಕೇಶ್ ಅಡಿಗ ಬಿಗ್ ಬಾಸ್ ವಿನ್ನರ್? ಸ್ಪರ್ಧಿಗಳಿಗೆ ಶುರುವಾಯ್ತು ಭಯ
Rakesh-Adiga-1
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 14, 2022 | 11:33 PM

ಕನ್ನಡ ಬಿಗ್ ಬಾಸ್​​ 9ನೇ ಸೀಸನ್​ನಲ್ಲಿ (Bigg Boss) ಈಗಾಗಲೇ 50 ದಿನ ಪೂರ್ಣಗೊಂಡಿದೆ. ಬಿಗ್ ಬಾಸ್​ನಲ್ಲಿ ಸ್ಪರ್ಧೆ ಹೆಚ್ಚಾಗಿದೆ. ಈಗಾಗಲೇ ಬಿಗ್ ಬಾಸ್ ಮನೆಯಿಂದ 6 ಸ್ಪರ್ಧಿಗಳು ಔಟ್ ಆಗಿದ್ದಾರೆ. ಸದ್ಯ ಮನೆಯಲ್ಲಿ 12 ಸ್ಪರ್ಧಿಗಳು ಇದ್ದಾರೆ. ಇವರ ಮಧ್ಯೆ ರಾಕೇಶ್ ಅಡಿಗ (Rakesh Adiga) ಅವರು ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರ ಪರ್ಫಾರ್ಮೆನ್ಸ್ ನೋಡಿ ಎಲ್ಲರಿಗೂ ಭಯ ಶುರುವಾಗಿದೆ.

50 ದಿನ ಪೂರ್ಣಗೊಂಡ ಸಂದರ್ಭದಲ್ಲಿ ಬಿಗ್ ಬಾಸ್​ನಲ್ಲಿ ಒಂದು ಸರ್​ಪ್ರೈಸ್ ಇತ್ತು. ಆರ್ಯವರ್ಧನ್ ಅವರನ್ನು ಮೊದಲು ಎಲಿಮಿನೇಟ್ ಮಾಡಲಾಗಿತ್ತು. ಆದರೆ, ಈ ವಾರ ಎಲಿಮಿನೇಷನ್​ ಮಾಡಲ್ಲ ಎಂದು ಬಿಗ್ ಬಾಸ್ ನಂತರ ಘೋಷಿಸಿದರು. ಈ ವೇಳೆ ಎಲ್ಲಾ ಸ್ಪರ್ಧಿಗಳು ಖುಷಿಪಟ್ಟರು. ಮತ್ತೊಂದೆಡೆ ಎಲ್ಲಾ ಸ್ಪರ್ಧಿಗಳಿಗೆ ಟೆನ್ಷನ್ ನೀಡುವ ಕೆಲಸ ಕೂಡ ಆಗಿದೆ.

ಪ್ರತಿ ವಾರ ಸುದೀಪ್ ಅವರು ವೀಕೆಂಡ್​ನಲ್ಲಿ ಒಂದು ಸ್ಪರ್ಧಿಗೆ ಚಪ್ಪಾಳೆ ನೀಡುತ್ತಾರೆ. ಈ ಚಪ್ಪಾಳೆ ತೆಗೆದುಕೊಳ್ಳೋಕೆ ಸ್ಪರ್ಧಿಗಳು ಸಾಕಷ್ಟು ಪರಿಶ್ರಮ ಪಡಬೇಕಾಗುತ್ತದೆ. ಕಳೆದ ವಾರವೂ ಸುದೀಪ್ ಚಪ್ಪಾಳೆ ನೀಡಿದ್ದಾರೆ. ಆದರೆ, ಅದು ಒಂದು ವಾರದ ಪರ್ಫಾರ್ಮೆನ್ಸ್ ನೋಡಿ ಅಲ್ಲ. ಬದಲಿಗೆ ಕಳೆದ 50 ದಿನಗಳನ್ನು ಗಮನಿಸಿ ಸುದೀಪ್ ಚಪ್ಪಾಳೆ ನೀಡಿದ್ದಾರೆ. ಈ ಪ್ರಶಂಸೆ ಸಿಕ್ಕಿದ್ದು ರಾಕೇಶ್ ಅಡಿಗ ಅವರಿಗೆ.

ರಾಕೇಶ್ ಅಡಿಗ ಅವರು ಬಿಗ್ ಬಾಸ್ ಒಟಿಟಿಯಲ್ಲಿ ಗಮನ ಸೆಳೆದರು. ನಂತರ ಟಿವಿ ಸೀಸನ್​ಗೆ ಬಂದರು. ಅಲ್ಲಿಂದ ಇಲ್ಲಿವರೆಗೆ ಅವರು ಒಂದೇ ರೀತಿಯ ಪರ್ಫಾರ್ಮೆನ್ಸ್ ನೀಡುತ್ತಾ ಬಂದಿದ್ದಾರೆ. ಅವರು ಜಗಳ ಮಾಡಿಕೊಳ್ಳೋದು ಕಡಿಮೆಯೇ. ಹಲವು ಕಡೆಗಳಲ್ಲಿ ಅವರು ಪ್ರಬುದ್ಧವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಟಾಸ್ಕ್​​ಗಳ ವಿಚಾರದಲ್ಲೂ ಅವರು ಹಿಂದೆ ಬಿದ್ದಿಲ್ಲ.

ಸದ್ಯ ರಾಕೇಶ್ ಅಡಿಗ ಪರ್ಫಾರ್ಮೆನ್ಸ್ ನೋಡಿ ಮನೆಯವರಿಗೆ ಹೆಚ್ಚು ಟೆನ್ಷನ್ ಆಗಿದೆ. ರೂಪೇಶ್ ಶೆಟ್ಟಿ ಮೊದಲಾದವರು ಈ ಬಗ್ಗೆ ಟೆನ್ಷನ್ ಮಾಡಿಕೊಂಡಿದ್ದಾರೆ. ರಾಕೇಶ್ ಅವರನ್ನು ಹಿಂದಿಕ್ಕದಿದ್ದರೆ ಸಂಕಷ್ಟ ಪಕ್ಕಾ ಎಂಬುದು ಅವರಿಗೆ ಗೊತ್ತಾಗಿದೆ. ಹೀಗೆಯೇ ಮುಂದುವರಿದರೆ ಅವರು ಗೆಲ್ಲಬಹುದು. ಹೀಗಾಗಿ, ಅವರನ್ನು ಹಿಂದಿಕ್ಕಲು ಎಲ್ಲರೂ ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಅಮೂಲ್ಯ ಗೌಡ-ರಾಕೇಶ್ ಅಡಿಗ ಮಧ್ಯೆ ಹೆಚ್ಚಾಯ್ತು ಆಪ್ತತೆ

ಈ ವಾರದ ನಾಮಿನೇಷನ್ ಲಿಸ್ಟ್

ಅಮೂಲ್ಯ ಗೌಡ, ದೀಪಿಕಾ ದಾಸ್, ರೂಪೇಶ್ ಶೆಟ್ಟಿ, ಅರುಣ್, ರೂಪೇಶ್ ರಾಜಣ್ಣ, ಆರ್ಯವರ್ಧನ್​, ಪ್ರಶಾಂತ್ ಸಂಬರ್ಗಿ, ಅರುಣ್ ಸಾಗರ್, ರೂಪೇಶ್ ಶೆಟ್ಟಿ , ದಿವ್ಯಾ ಉರುಡುಗ.

Published On - 10:15 pm, Mon, 14 November 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ