ತನಿಷಾ ವಿರುದ್ಧ ದೂರು, ಬಿಗ್​ಬಾಸ್​ಗೆ ನೊಟೀಸ್ ಕೊಟ್ಟ ಪೊಲೀಸರು

Bigg Boss: ಬಿಗ್​ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ, ಬಿಗ್​ಬಾಸ್ ಮನೆಯಲ್ಲಿ ಜಾತಿ ನಿಂದನೆ ಮಾತೊಂದನ್ನು ಆಡಿದ್ದಾರೆಂದು ಅವರ ವಿರುದ್ಧ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಿಗ್​ಬಾಸ್​ಗೆ ನೊಟೀಸ್ ನೀಡಿದ್ದಾರೆ.

ತನಿಷಾ ವಿರುದ್ಧ ದೂರು, ಬಿಗ್​ಬಾಸ್​ಗೆ ನೊಟೀಸ್ ಕೊಟ್ಟ ಪೊಲೀಸರು
Follow us
ಮಂಜುನಾಥ ಸಿ.
|

Updated on: Nov 16, 2023 | 8:41 PM

ಈ ಬಾರಿ ಬಿಗ್​ಬಾಸ್ ಮನೆಯ ಒಳಗಿನ ಜಗಳ, ವಿವಾದಗಳಿಗಿಂತಲೂ ಹೊರಗೆ ಸೃಷ್ಟಿಸುತ್ತಿರುವ ವಿವಾದಗಳಿಂದ ಹೆಚ್ಚು ಹೆಚ್ಚು ಸುದ್ದಿಯಾಗುತ್ತಿದೆ. ಮೊದಲಿಗೆ ಬಿಗ್​ಬಾಸ್ ಸ್ಪರ್ಧಿ ವರ್ತೂರು ಪ್ರಕಾಶ್ ಹುಲಿ ಉಗುರು ಧರಿಸಿದ್ದು ವಿವಾದವಾಗಿ ಅವರು ಜೈಲು ಪಾಲಾದರು. ಅದರ ಬಳಿಕ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳಿಗೆ ಹುಲಿ ಉಗುರಿನ ಪ್ರಕರಣದಲ್ಲಿ ನೊಟೀಸ್ ಜಾರಿ ಆಗಿ, ವಿಚಾರಣೆ ಎದುರಿಸಬೇಕಾಯ್ತು. ಅದು ಮುಗಿಯುತ್ತಿದ್ದಂತೆ ಈಗ ಮತ್ತೊಬ್ಬ ಸ್ಪರ್ಧಿ ತನಿಷಾ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಎಫ್​ಐಆರ್ ನಮೂದು ಮಾಡಿಕೊಂಡಿದ್ದಾರೆ.

ತನಿಷಾ, ಬಿಗ್​ಬಾಸ್ ಮನೆಯಲ್ಲಿ ಆಡಿದ ಮಾತೊಂದು ವಿವಾದಕ್ಕೆ ಕಾರಣವಾಗಿದೆ. ತನಿಷಾ, ಜಾತಿ ನಿಂದನೆ ಮಾಡಿದ್ದಾರೆಂದು ಭೋವಿ ಸಮುದಾಯದ ಮಹಿಳಾ ವಿಭಾಗ ಅಧ್ಯಕ್ಷರಾದ ಪದ್ಮಾ ಎಂಬುವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ರಾಮನಗರ ಪೊಲೀಸರು ಬಿಗ್​ಬಾಸ್​ ರಿಯಾಲಿಟಿ ಶೋನ ಆಯೋಜಕರಿಗೆ ನೊಟೀಸ್ ಜಾರಿ ಮಾಡಿದ್ದಾರೆ.

ಪ್ರಕರಣ ಸಂಬಂಧ ಮಾಧ್ಯಮದೊಟ್ಟಿಗೆ ಮಾತನಾಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ”ಬಿಗ್​ಬಾಸ್ ಶೋನ ಸ್ಪರ್ಧಿ ತನಿಷಾ ಕುಪ್ಪಂಡ ಭೋವಿ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆಂದು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂತೆಯೇ ಸ್ಪರ್ಧಿ ತನಿಷಾ ವಿರುದ್ಧ ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಷಾ ನಿಂದನಾತ್ಮಕ ಪದ ಬಳಸಿದ್ದಾರೆ ಎನ್ನಲಾದ ಪ್ರೋಮೋ ಅನ್ನು ಪರಿಶೀಲಿಸಿದ್ದು, ಮೂಲ ದೃಶ್ಯಗಳ ವಿಡಿಯೋವನ್ನು ನೀಡುವಂತೆ ನೋಟೀಸ್ ನೀಡಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ:‘ವರ್ತೂರು ಸಂತೋಷ್ ಬಿಗ್​ಬಾಸ್ ಸಂಭಾವನೆ ಸೇರುವುದು ಅನಾಥಾಶ್ರಮಕ್ಕೆ’

”ಪ್ರಕರಣವನ್ನು ನಿಯಮಾನುಸಾರ ತನಿಖೆ ನಡೆಸುತ್ತಿದ್ದೇವೆ. ಬಿಗ್​ಬಾಸ್​ನವರು ಕೊಡುವ ದೃಶ್ಯಗಳನ್ನು ಪರಿಶೀಲನೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮಾಗಡಿಯ ಡಿವೈಎಸ್​ಪಿ ಅವರಿಗೆ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ” ಎಂದಿದ್ದಾರೆ.

ಟಾಸ್ಕ್​ ಒಂದರಲ್ಲಿ ಉಸ್ತುವಾರಿಯಾಗಿದ್ದ ಡ್ರೋನ್ ಪ್ರತಾಪ್, ತಮ್ಮ ತಂಡಕ್ಕೆ ಅನುಕೂಲವಾಗುವಂತೆ ಆಡಲಿಲ್ಲ ಎಂದು ತನಿಷಾ, ಡ್ರೋನ್ ಪ್ರತಾಪ್ ಅನ್ನು ಬೈಯ್ಯುವ ಸಮಯದಲ್ಲಿ ಮಾಡಿದ್ದ ಪದ ಬಳಕೆಯ ಬಗ್ಗೆ ಭೋವಿ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದ್ದು, ತನಿಷಾ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್