AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟ, ರಂಗಭೂಮಿ ಕಲಾವಿದ ವಿಜಯಕುಮಾರ್ ಜಿತೂರಿ ನಿಧನ

ಕಿರುತೆರೆ ಹಾಗೂ ರಂಗಭೂಮಿಯ ಹಿರಿಯ ನಟ ವಿಜಯಕುಮಾರ್ ಜಿತೂರಿ ಅವರು ಗದಗದಲ್ಲಿ ನಿಧನರಾಗಿದ್ದಾರೆ. 'ಮಂಗಳ ಗೌರಿ ಮದುವೆ' ಧಾರಾವಾಹಿ ಮೂಲಕ ಹೆಸರು ಮಾಡಿದ್ದ ಇವರು, ಕೊನೆಯ ದಿನಗಳಲ್ಲಿ ಸರಿಯಾದ ನಟನೆಯ ಅವಕಾಶಗಳಿಲ್ಲದೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಇವರ ನಿಧನಕ್ಕೆ ಕಲಾ ಲೋಕ ಕಂಬನಿ ಮಿಡಿದಿದೆ.

ಕಿರುತೆರೆ ನಟ, ರಂಗಭೂಮಿ ಕಲಾವಿದ ವಿಜಯಕುಮಾರ್ ಜಿತೂರಿ ನಿಧನ
ವಿಜಯಕುಮಾರ್ ಜಿತೂರಿ
ಮಂಗಳ ರಾಜ್
| Edited By: |

Updated on:Aug 11, 2026 | 11:20 AM

Share

ಮುಖ್ಯಾಂಶಗಳು

  • ಗದಗದಲ್ಲಿ ನಟ ವಿಜಯಕುಮಾರ್ ಜಿತೂರಿ ನಿಧನ
  • 'ಮಂಗಳ ಗೌರಿ ಮದುವೆ'ಯಲ್ಲಿ ಕಾನ್‌ಸ್ಟೇಬಲ್ ಪಾತ್ರ
  • ಕೊನೆ ದಿನಗಳಲ್ಲಿ ಕಾಡಿದ ಆರ್ಥಿಕ ಸಂಕಷ್ಟ

ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಖ್ಯಾತ ಹಿರಿಯ ಕಲಾವಿದ ವಿಜಯಕುಮಾರ್ ಜಿತೂರಿ (Vijay Kumar) ನಿಧನ ಹೊಂದಿದ್ದಾರೆ. ಸೋಮವಾರ (ಆಗಸ್ಟ್ 10) ಸಂಜೆ ಹುಟ್ಟೂರಾದ ಗದಗದಲ್ಲಿ ಅವರು ನಿಧನ ಹೊಂದಿದ್ದಾರೆ. ಕಿರುತೆರೆ ಜೊತೆಗೆ ಹಿರಿತೆರೆ, ರಂಗಭೂಮಿಯಲ್ಲಿ ಅವರು ನಟಿಸಿ ಗಮನ ಸೆಳೆದಿದ್ದರು. ಅವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.

ವಿಜಯಕುಮಾರ್ ಜಿತೂರಿ ಅವರು ಕೇವಲ ನಟ ಮಾತ್ರ ಅಲ್ಲ ಗಾಯಕ ಕೂಡ ಹೌದು. ಅವರು ಕಲಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈಗ ಗದಗದ ಬೆಟಗೇರಿಯಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಅವರಿಗೆ ಸೋಮವಾರ ಉಸಿರಾಟದ ತೊಂದರೆ ಕಾಣಸಿಕೊಂಡಿತ್ತು.

ವಿಜಯಕುಮಾರ್ ಜಿತೂರಿ ಅವರು ಹಲವು ವರ್ಷಗಳಿಂದ ಬಣ್ಣದ ಲೋಕದ ಜೊತೆ ಒಡನಾಟ ಹೊಂದಿದ್ದರು. ಅವರು ಗಗನ್ ಚಿನ್ನಪ್ಪ ಅಭಿನಯದ ‘ಮಂಗಳ ಗೌರಿ ಮದುವೆ’ ಧಾರಾವಾಹಿಯಲ್ಲಿ ಕಾನ್​​ಸ್ಟೇಬಲ್ ಪಾತ್ರ ಮಾಡಿದ್ದರು. ಗಗನ್ ಚಿನ್ನಪ್ಪ ಜೊತೆ ಅವರು ಆ ಧಾರಾವಾಹಿಯಲ್ಲಿ ಸಾಕಷ್ಟು ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಕಲಾವಿದರಿಗೆ ಎಚ್ಚರಿಕೆ ನೀಡಿದ ಕಿರುತೆರೆ ನಿರ್ಮಾಪಕ ಸಂಘ, ಹೇಳಿರುವುದೇನು?

ಅವರು ಇಷ್ಟೆಲ್ಲ ಧಾರಾವಾಹಿಗಳಲ್ಲಿ ನಟಿಸಿದ ಹೊರತಾಗಿಯೂ ಆರ್ಥಿಕ ಸಂಕಷ್ಟ ಬಹುವಾಗಿ ಕಾಡುತ್ತಾ ಇತ್ತು. ಅವರಿಗೆ ಇತ್ತೀಚೆಗೆ ಹೆಚ್ಚಿನ ಅವಕಾಶಗಳು ಬಂದಿರಲಿಲ್ಲ. ಈ ಕಾರಣದಿಂದ ಮನೆ ಬಾಡಿಗೆ ಕಟ್ಟಲೂ ಸಾಧ್ಯವಾಗದೇ ಹುಟ್ಟೂರಿಗೆ ತೆರಳಿದ್ದರು. ಈಗ ಅವರು ಇಹಲೋಕ ತ್ಯಜಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:10 am, Tue, 11 August 26

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ