ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್?

ಬಿಗ್ ಬಾಸ್ ಕನ್ನಡ ಮನೆಯಲ್ಲಿ ರಿಷಾ ಅವರು ಗಿಲ್ಲಿ ಮೇಲೆ ಹಲ್ಲೆ ಮಾಡಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ದೈಹಿಕ ಹಲ್ಲೆ ಮಾಡಿದವರನ್ನು ತಕ್ಷಣವೇ ಹೊರಹಾಕುವ ನಿಯಮವಿರುವುದರಿಂದ, ರಿಷಾ ಅವರು ಎಲಿಮಿನೇಟ್ ಆಗುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ. ಹಿಂದಿನ ಸೀಸನ್‌ಗಳಲ್ಲಿ ಇದೇ ರೀತಿ ಘಟನೆಗಳು ನಡೆದಿವೆ.

ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್?
ಬಿಗ್ ಬಾಸ್

Updated on: Nov 03, 2025 | 8:38 AM

‘ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು’ ಎಂಬುದು ಬಿಗ್ ಬಾಸ್​ನ (Bigg Boss) ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಈ ಮೊದಲು ಬಿಗ್ ಬಾಸ್​ನಲ್ಲಿ ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಕಳೆದ ಸೀಸನ್​ನಲ್ಲಿ ರಂಜಿತ್ ಅವರು ಇದೇ ರೀತಿ ಮಾಡಿ ಮನೆಯಿಂದ ಹೊರ ಹೋಗಿದ್ದರು. ಈಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರನ್ನು ಎಲಿಮಿನೇಟ್ ಮಾಡಬೇಕು ಎಂಬ ಕೂಗು ಕೇಳಿ ಬಂದಿದೆ.

ರಿಷಾ ಅವರ ಬಳಿ ಬಕೆಟ್ ಕೊಡುವಂತೆ ಗಿಲ್ಲಿ ಅವರು ಬಾತ್​ರೂಂನಲ್ಲಿ ಮನವಿ ಮಾಡಿದ್ದಾರೆ. ಆದರೆ, ರಿಷಾ ಇದಕ್ಕೆ ಬಗ್ಗಲಿಲ್ಲ. ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಹೊರಟ ಗಿಲ್ಲಿ ಅವರು, ರಿಷಾ ಅವರ ಬಟ್ಟೆಯನ್ನು ತಂದು ಬಾತ್​ರೂಂ ಹೊರ ಭಾಗದಲ್ಲಿರುವ ನೆಲದ ಮೇಲೆ ಹಾಕಿದ್ದಾರೆ. ಇದು ರಿಷಾ ಕೋಪಕ್ಕೆ ಕಾರಣ ಆಗಿದೆ. ‘ಗಿಲ್ಲಿ’ ಎಂದು ಕೂಗುತ್ತಾ ಬಂದ ಅವರು, ಗಿಲ್ಲಿಗೆ ಹೊಡೆದಿದ್ದಾರೆ.

ಇಷ್ಟಕ್ಕೆ ರಿಷಾ ನಿಲ್ಲಲಿಲ್ಲ. ರಿಷಾ ಅವರು ಗಿಲ್ಲಿ ಮೇಲೆ ಕೂಗಾಡಿದ್ದಾರೆ. ಗಿಲ್ಲಿ ಬಟ್ಟೆಗಳನ್ನೆಲ್ಲ ಎತ್ತಿ ಬೀಸಾಕಿದ್ದಾರೆ. ಸೂಟ್​ಕೇಸ್​ನ ಒದ್ದಿದ್ದಾರೆ ಆ ಬಳಿಕ ಗಿಲ್ಲಿಯನ್ನು ತಳ್ಳಿದ್ದಾರೆ. ರಿಷಾ ಮಾಡಿದ್ದು ಬಿಗ್ ಬಾಸ್ ಮೂಲ ನಿಯಮಗಳಿಗೆ ವಿರುದ್ಧವಾಗಿದೆ. ಕಳೆದ ಸೀಸನ್​ಗಳಲ್ಲಿ ಈ ರೀತಿ ಮಾಡಿದಾಗ ತಕ್ಷಣವೇ ಅವರನ್ನು ದೊಡ್ಮನೆಯಿಂದ ಹೊರಕ್ಕೆ ಹಾಕಲಾಗಿತ್ತು. ಈ ಬಾರಿಯೂ ಅದೇ ರೀತಿ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
ಹೊರಗಿನ ವಿಚಾರ ತಿಳಿದುಕೊಳ್ಳಲು ಬಟ್ಟೆಯಲ್ಲಿ ಕೋಡ್​ವರ್ಡ್​; ಶಾಕಿಂಗ್ ವಿಚಾರ
‘ಹೀಗೆ ಮುಂದುವರಿದ್ರೆ ಜನ ಬಿಗ್ ಬಾಸ್ ನೋಡೋದು ಬಿಡ್ತಾರೆ’; ಸುದೀಪ್
ಬಿಗ್ ಬಾಸ್ ಮನೆಯಿಂದ ಮಲ್ಲಮ್ಮ ಹೊರ ಹೋಗಲು ಕಾರಣವಾಯ್ತು ಆ ಒಂದು ವಂದಂತಿ?
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

ಇದನ್ನೂ ಓದಿ: ಹೊರಗಿನ ವಿಚಾರ ತಿಳಿದುಕೊಳ್ಳಲು ಬಟ್ಟೆಯಲ್ಲಿ ಕೋಡ್​ವರ್ಡ್​; ಶಾಕಿಂಗ್ ವಿಚಾರ ಹೇಳಿದ ಸುದೀಪ್

ತೆಲುಗು ಬಿಗ್ ಬಾಸ್​ನಲ್ಲಿ ಇದೇ ರೀತಿಯ ಘಟನೆ ನಡೆದಿದೆ. ಮಹಿಳಾ ಸ್ಪರ್ಧಿ ಮೇಲೆ ಪುರುಷ ಸ್ಪರ್ಧಿ ಕಠಿಣವಾಗಿ ನಡೆದುಕೊಂಡಿದ್ದ. ಈ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆದವು. ವೀಕೆಂಡ್ ಎಪಿಸೋಡ್​ನಲ್ಲಿ ಅಕ್ಕಿನೇನಿ ನಾಗಾರರ್ಜುನ ಬರುತ್ತಿದ್ದಂತೆ ಆ ಸ್ಪರ್ಧಿಯನ್ನು ಹೊರಕ್ಕೆ ಕಳುಹಿಸಲಾಯಿತು. ಕನ್ನಡದಲ್ಲೂ ಇದೇ ರೀತಿ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇಲ್ಲವೇ, ಬಿಗ್ ಬಾಸ್ ಈ ಬಗ್ಗೆ ಯಾವ ರೀತಿಯ ಆದೇಶ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us