Sign In

By signing in or creating an account, you agree with Associated Broadcasting Company's Terms & Conditions and Privacy Policy.

Koffee With Karan 8: ‘ಕಾಫಿ ವಿತ್​ ಕರಣ್​’ ಶೋನಲ್ಲಿ ರಿಷಬ್​ ಶೆಟ್ಟಿ, ಯಶ್​? ಬಾಲಿವುಡ್​ ಅಂಗಳದಲ್ಲಿ ಕನ್ನಡಿಗರ ಹವಾ

Karan Johar | Rishab Shetty: ‘ಕಾಫಿ ವಿತ್​ ಕರಣ್​’ ಕಾರ್ಯಕ್ರಮದ ಜೊತೆ ಒಂದಷ್ಟು ವಿವಾದಗಳು ಅಂಟಿಕೊಂಡಿವೆ. ಹಾಗಾಗಿ ಕೆಲವು ಸೆಲೆಬ್ರಿಟಿಗಳು ಈ ಶೋಗೆ ಬರಲು ಹಿಂದೇಟು ಹಾಕಿದ್ದು ಕೂಡ ಉಂಟು.

Koffee With Karan 8: ‘ಕಾಫಿ ವಿತ್​ ಕರಣ್​’ ಶೋನಲ್ಲಿ ರಿಷಬ್​ ಶೆಟ್ಟಿ, ಯಶ್​? ಬಾಲಿವುಡ್​ ಅಂಗಳದಲ್ಲಿ ಕನ್ನಡಿಗರ ಹವಾ
ಕರಣ್ ಜೋಹರ್, ಯಶ್, ರಿಷಬ್ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Mar 30, 2023 | 5:39 PM

ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ (Karan Johar) ಅವರು ನಿರೂಪಕನಾಗಿಯೂ ಫೇಮಸ್​. ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ಖ್ಯಾತಿ ಅವರಿಗೆ ಸಲ್ಲುತ್ತದೆ. ಅದರಲ್ಲೂ ಅವರ ನಿರೂಪಣೆಯಲ್ಲಿ ಮೂಡಿಬಂದ ‘ಕಾಫಿ ವಿತ್​ ಕರಣ್​’ (Koffee With Karan) ಶೋಗೆ ಬೇರೆಯದ್ದೇ ತೂಕ ಇದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಬಂದುಹೋಗಿದ್ದಾರೆ. ಈವರೆಗೂ 7 ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಲಾಗಿದ್ದು, ‘ಕಾಫಿ ವಿತ್​ ಕರಣ್​’ 8ನೇ ಸೀಸನ್​ಗೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಬಾರಿ ‘ರಾಕಿಂಗ್​ ಸ್ಟಾರ್​’ ಯಶ್ ಹಾಗೂ ‘ಡಿವೈನ್​ ಸ್ಟಾರ್​’ ರಿಷಬ್​ ಶೆಟ್ಟಿ (Rishab Shetty) ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ‘ಬಾಲಿವುಡ್​ ಹಂಗಾಮ’ ವರದಿ ಮಾಡಿದೆ.

‘ಕಾಫಿ ವಿತ್​ ಕರಣ್​’ ಕಾರ್ಯಕ್ರಮದ ಈವರೆಗಿನ ಸೀಸನ್​ಗಳಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳಿಗೆ ಮಣೆ ಹಾಕಿದ್ದೇ ಹೆಚ್ಚು. ಆದರೆ ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದ ನಟ-ನಟಿಯರು ಕೂಡ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವುದರಿಂದ ಕರಣ್​ ಜೋಹರ್ ಅವರು ಸೌತ್​ ಸ್ಟಾರ್​ಗಳ ಕಡೆಗೂ ಗಮನ ಹರಿಸಲು ಆರಂಭಿಸಿದ್ದಾರೆ. 8ನೇ ಸೀಸನ್​ನಲ್ಲಿ ಯಶ್​, ರಿಷಬ್​ ಶೆಟ್ಟಿ ಹಾಗೂ ಅಲ್ಲು ಅರ್ಜುನ್​ ಅವರು ಪತ್ನಿ ಸಮೇತರಾಗಿ ಈ ಶೋನಲ್ಲಿ ಹಾಜರಿ ಹಾಕಲಿದ್ದಾರೆ ಎಂದು ಸುದ್ದಿ ಪ್ರಕಟ ಆಗಿದೆ. ಈ ಬಗ್ಗೆ ಕರಣ್​ ಜೋಹರ್​ ಅವರ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಯಶ್​, ರಿಷಬ್​ ಶೆಟ್ಟಿ, ಅಲ್ಲು ಅರ್ಜುನ್​ ಕೂಡ ಸುದ್ದಿ ಬಿಟ್ಟುಕೊಟ್ಟಿಲ್ಲ. ಸದ್ಯಕ್ಕೆ ಇದು ಅಂತೆ-ಕಂತೆ ಹಂತದಲ್ಲಿದೆ ಅಷ್ಟೇ.

ಇದನ್ನೂ ಓದಿ: ನೆಪೋಟಿಸಂ ಅಂದ್ರೆ ನೆನಪಾಗೋದೇ ಕರಣ್​ ಜೋಹರ್​

ಇದನ್ನೂ ಓದಿ
Image
Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಕನ್ನಡದ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಯಶ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಮಿಂಚಿದ್ದಾರೆ. ‘ಕಾಂತಾರ’ ಸಿನಿಮಾದಿಂದ ರಿಷಬ್​ ಶೆಟ್ಟಿ ಕೂಡ ದೇಶಾದ್ಯಂತ ಖ್ಯಾತಿ ಗಳಿಸಿದ್ದಾರೆ. ಅವರನ್ನು ಅನೇಕರು ತಮ್ಮ ಕಾರ್ಯಕ್ರಮಗಳಿಗೆ ಆಹ್ವಾನಿಸುತ್ತಿದ್ದಾರೆ. ಒಂದು ವೇಳೆ ಈ ಸ್ಟಾರ್​ ನಟರು ‘ಕಾಫಿ ವಿತ್​ ಕರಣ್​’ ಶೋನಲ್ಲಿ ಭಾಗಿಯಾದರೆ ಅಲ್ಲಿ ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚೆ ಆಗಬಹುದು ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ: Karan Johar: ಐಡಿ ಕಾರ್ಡ್​ ತೋರಿಸದೇ ಏರ್​ಪೋರ್ಟ್​ ಒಳಗೆ ನುಗ್ಗಲು ಯತ್ನಿಸಿದ ಕರಣ್​ ಜೋಹರ್​; ವಿಡಿಯೋ ವೈರಲ್​

‘ಕಾಫಿ ವಿತ್​ ಕರಣ್​’ ಕಾರ್ಯಕ್ರಮದ ಜೊತೆ ಒಂದಷ್ಟು ವಿವಾದಗಳು ಕೂಡ ಅಂಟಿಕೊಂಡಿವೆ. ಇದರಲ್ಲಿ ಬರೀ ವಿವಾದಾತ್ಮಕ ಪ್ರಶ್ನೆ ಕೇಳಲಾಗುತ್ತದೆ ಹಾಗೂ ಲೈಂಗಿಕತೆ ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತದೆ ಎಂಬ ಕಳಂಕ ಇದೆ. ಹಾಗಾಗಿ ಕೆಲವು ಸೆಲೆಬ್ರಿಟಿಗಳು ಈ ಶೋಗೆ ಬರಲು ಹಿಂದೇಟು ಹಾಕಿದ್ದು ಕೂಡ ಉಂಟು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ