‘ಈ ಮನೆ ಅದಕ್ಕಲ್ಲ’; ಮಿತಿಮೀರಿ ರೊಮ್ಯಾನ್ಸ್ ಮಾಡಿದ ರೂಪೇಶ್ ಶೆಟ್ಟಿ​-ಸಾನ್ಯಾ ಐಯ್ಯರ್​ಗೆ ಕಿಚ್ಚ ಸುದೀಪ್ ಕ್ಲಾಸ್

ಇತ್ತೀಚೆಗೆ ರೂಪೇಶ್ ಶೆಟ್ಟಿ, ಸಾನ್ಯಾ ಐಯ್ಯರ್ ಹಾಗೂ ಆರ್ಯವರ್ಧನ್ ಗುರೂಜಿ ಕ್ಯಾಪ್ಟನ್ಸಿ ರೂಂನಲ್ಲಿ ಕುಳಿತಿದ್ದರು. ಆಗಲೇ ಆರ್ಯವರ್ಧನ್ ಅವರ ಕ್ಯಾಪ್ಟನ್ಸಿ ಅವಧಿ ಮುಗಿದಿತ್ತು. ಆದಾಗ್ಯೂ ಈ ರೂಂ ಬಳಕೆ ಮಾಡಿದ್ದರು ರೂಪೇಶ್ ಹಾಗೂ ಸಾನ್ಯಾ.

‘ಈ ಮನೆ ಅದಕ್ಕಲ್ಲ’; ಮಿತಿಮೀರಿ ರೊಮ್ಯಾನ್ಸ್ ಮಾಡಿದ ರೂಪೇಶ್ ಶೆಟ್ಟಿ​-ಸಾನ್ಯಾ ಐಯ್ಯರ್​ಗೆ ಕಿಚ್ಚ ಸುದೀಪ್ ಕ್ಲಾಸ್
ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 15, 2022 | 10:24 PM

‘ಬಿಗ್ ಬಾಸ್ ಕನ್ನಡ ಸೀಸನ್​ 9’ರಲ್ಲಿ ರೂಪೇಶ್ ಶೆಟ್ಟಿ (Roopesh Shetty)  ಹಾಗೂ ಸಾನ್ಯಾ ಐಯ್ಯರ್ ಸಖತ್ ಕ್ಲೋಸ್ ಆಗಿದ್ದಾರೆ. ಇಬ್ಬರೂ ದೊಡ್ಮನೆಯಲ್ಲಿ ಸುತ್ತಾಡಿಕೊಂಡು ಹಾಯಾಗಿದ್ದಾರೆ. ರಾತ್ರಿ ಲೈಟ್ ಆಫ್​ ಆದ ನಂತರವೂ ಇವರು ಹಗ್ ಮಾಡಿಕೊಂಡು ಮಾತನಾಡಿಕೊಂಡಿರುತ್ತಾರೆ. ಈಗ ಈ ಜೋಡಿಯ ರೊಮ್ಯಾನ್ಸ್ ಮಿತಿ ಮೀರಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಗಟ್ಟಿಯಾಗೇ ಕ್ಲಾಸ್​ ತೆಗೆದುಕೊಂಡಿದ್ದಾರೆ. ಸುದೀಪ್ ಆಡಿದ ಮಾತಿಗೆ ಗಳಗಳನೆ ಅತ್ತಿದ್ದಾರೆ ರೂಪೇಶ್.

ಇತ್ತೀಚೆಗೆ ರೂಪೇಶ್ ಶೆಟ್ಟಿ, ಸಾನ್ಯಾ ಐಯ್ಯರ್ ಹಾಗೂ ಆರ್ಯವರ್ಧನ್ ಗುರೂಜಿ ಕ್ಯಾಪ್ಟನ್ಸಿ ರೂಂನಲ್ಲಿ ಕುಳಿತಿದ್ದರು. ಆಗಲೇ ಆರ್ಯವರ್ಧನ್ ಅವರ ಕ್ಯಾಪ್ಟನ್ಸಿ ಅವಧಿ ಮುಗಿದಿತ್ತು. ಆದಾಗ್ಯೂ ಈ ರೂಂ ಬಳಕೆ ಮಾಡಿದ್ದರು ರೂಪೇಶ್ ಹಾಗೂ ಸಾನ್ಯಾ. ರೂಪೇಶ್ ಮೈಮೇಲೆ ಸಾನ್ಯಾ ಮಲಗಿದ್ದರು. ಈ ಪ್ರೋಮೋವನ್ನು ಕಲರ್ಸ್ ಕನ್ನಡ ಹಂಚಿಕೊಂಡಿದೆ. ಈ ಘಟನೆ ವಿಚಾರಕ್ಕೆ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಬಿಗ್ ಬಾಸ್ ಮನೆಯಲ್ಲಿ ಹೆಚ್ಚಿತು ರೂಪೇಶ್ ಶೆಟ್ಟಿ-ಸಾನ್ಯಾ ಐಯ್ಯರ್ ಆಪ್ತತೆ; ಇಲ್ಲಿದೆ ವಿಡಿಯೋ ಸಾಕ್ಷಿ
Image
ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ
Image
ಕ್ಯೂಟ್ ಅವತಾರದಲ್ಲಿ ಕಾಣಿಸಿಕೊಂಡ ಸಾನ್ಯಾ ಐಯ್ಯರ್; ಅಭಿಮಾನಿಗಳು ಏನ್​ ಅಂದ್ರು?
Image
ಬಿಗ್ ಬಾಸ್​ನಿಂದ ಹೊರ ನಡೆಯಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ; ಈ ವೀಕೆಂಡ್​ನಲ್ಲೇ ಎಲಿಮಿನೇಷನ್​?

‘ಕ್ಯಾಪ್ಟನ್ಸಿ ಅವಧಿ ಮುಗಿದ ನಂತರ ನೀವು ಪಿಕ್​ನಿಕ್ ಮಾಡ್ತಾ ಇದ್ರಿ. ಆ ರೂಂಗೆ ಒಂದು ಗೌರವ ಇದೆ. ಅದು ಪಿಕ್​ನಿಕ್ ಸ್ಪಾಟ್​ ಅಲ್ಲ’ ಎಂದರು ಸುದೀಪ್. ಇದಕ್ಕೆ ರೂಪೇಶ್ ಸ್ಪಷ್ಟನೆ ನೀಡುವ ಕೆಲಸ ಮಾಡಿದರು. ‘ನಮ್ಮ ಉದ್ದೇಶ ಆ ರೀತಿ ಇರಲಿಲ್ಲ. ನಾನು ಯಾವಾಗಲೂ ಆ ರೀತಿ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಲು ಬಂದರು ರೂಪೇಶ್.

‘ನೀವು ಮಿತಿಮೀರಿ ನಡೆದುಕೊಂಡಿದ್ದೀರಿ. ಆ ರೀತಿ ಆಗಿದ್ದಕ್ಕಾಗಿಯೇ ನಾವು ಹೇಳ್ತಿರೋದು. ನೀವು ಮಧ್ಯರಾತ್ರಿ ಹಗ್ ಮಾಡಿಕೊಳ್ತೀರಿ. ಅದಕ್ಕೆ ನಾವು ಯಾವಾಗಲೂ ಅಪಸ್ವರ ತೆಗೆದಿಲ್ಲ. ಅದು ಇಲ್ಲಿ ಸಮಸ್ಯೆ ಅಲ್ಲ. ಈ ಮೊದಲು ಅನೇಕರು ಈ ಮನೆಯಲ್ಲಿ ಕ್ಲೋಸ್ ಆಗಿದ್ದರು. ಆದರೆ, ಈಗ ಇದನ್ನು ಹೇಳ್ತಿದೀವಿ ಎಂದರೆ ಅರ್ಥ ಮಾಡಿಕೊಳ್ಳಿ. ನೀವು ಈ ರೀತಿ ಮಾಡ್ತಾ ಇರೋದ್ರಿಂದಲೇ ನಮಗೆ ಕಟೆಂಟ್ ಸಿಗುತ್ತಿದೆ ಎಂದುಕೊಂಡರೆ ಈ ಮನೆ ಅದಕ್ಕಲ್ಲ’ ಎಂದು ಸುದೀಪ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಹೆಚ್ಚಿತು ರೂಪೇಶ್ ಶೆಟ್ಟಿ-ಸಾನ್ಯಾ ಐಯ್ಯರ್ ಆಪ್ತತೆ; ಇಲ್ಲಿದೆ ವಿಡಿಯೋ ಸಾಕ್ಷಿ

‘ಬಿಗ್ ಬಾಸ್ ಒಟಿಟಿ’ಯಲ್ಲಿ ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಸಖತ್ ಕ್ಲೋಸ್ ಆದರು. ಇವರ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆಯಿತು. ಈ ಕಾರಣಕ್ಕೂ ಇಬ್ಬರೂ ಒಟಿಟಿ ಸೀಸನ್​ನಲ್ಲಿ ಮಿಂಚಿದ್ದಾರೆ. ಈಗ ಟಿವಿ ಸೀಸನ್​ಗೆ ಇಬ್ಬರೂ ಎಂಟ್ರಿ ಕೊಟ್ಟಾಗಿದೆ. ಇವರು ಮನೆಯಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಈಗ ಇಬ್ಬರ ಮಧ್ಯೆ ಆಪ್ತತೆ ಹೆಚ್ಚುತ್ತಿರುವುದನ್ನು ಗಮನಿಸಿದ ಸುದೀಪ್ ಎಚ್ಚರಿಕೆ ನೀಡಿದ್ದಾರೆ.

Published On - 10:13 pm, Sat, 15 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ