AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಮಕ್ಕಳು ಹೊಟ್ಟೆಯಲ್ಲಿ ಇರುವಾಗಲೇ ಅಪಘಾತ; ಕರಾಳ ಘಟನೆ ನೆನೆದ ಬಿಗ್ ಬಾಸ್ ವಿನ್ನರ್

ರೂಬೀನಾ ಮತ್ತು ಅಭಿನವ್ 2018ರಲ್ಲಿ ವಿವಾಹವಾದರು. ಇವರಿಬ್ಬರೂ ‘ಬಿಗ್ ಬಾಸ್ ಹಿಂದಿ 14’ನೇ ಸೀಸನ್​ನಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಅಕ್ಟೋಬರ್ 2020ರಿಂದ ಫೆಬ್ರವರಿ 2021ರವರೆಗೆ ಈ ಶೋ ನಡೆಯಿತು. ರೂಬೀನಾ ಗೆದ್ದರು. ರೂಬೀನಾ 2008ರಲ್ಲಿ ಕಿರುತೆರೆಗೆ ಕಾಲಿಟ್ಟರು. ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ.

ಅವಳಿ ಮಕ್ಕಳು ಹೊಟ್ಟೆಯಲ್ಲಿ ಇರುವಾಗಲೇ ಅಪಘಾತ; ಕರಾಳ ಘಟನೆ ನೆನೆದ ಬಿಗ್ ಬಾಸ್ ವಿನ್ನರ್
ರೂಬೀನಾ ದಿಲೈಕ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Nov 29, 2023 | 7:41 PM

‘ಬಿಗ್ ಬಾಸ್ ಹಿಂದಿ ಸೀಸನ್ 14’ರಲ್ಲಿ ಟ್ರೋಫಿ ಗೆಲ್ಲುವ ಮೂಲಕ ಕಿರುತೆರೆ ನಟಿ ರೂಬೀನಾ ದಿಲೈಕ್ (Rubina Dilaik) ಸಾಕಷ್ಟು ಜನಪ್ರಿಯತೆ ಪಡೆದರು. ಈಗ ಅವರು ಗರ್ಭಿಣಿ ಆಗಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ರೂಬೀನಾ ಹಾಗೂ ಅವರ ಪತಿ ಅಭಿನವ್ ಶೀಘ್ರದಲ್ಲೇ ಅವಳಿ ಮಕ್ಕಳ ಪೋಷಕರಾಗಲಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ರೂಬೀನಾ ತಮ್ಮ ಅಭಿಮಾನಿಗಳಿಗೆ ಈ ಸಿಹಿ ಸುದ್ದಿ ನೀಡಿದ್ದರು. ಈಗ ಅವರು ಒಂದು ಶಾಕಿಂಗ್ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ತಾವು ಅವಳಿ ಮಕ್ಕಳ ತಾಯಿಯಾಗಲಿದ್ದೇನೆ ಎಂದು ಹೇಳಿದ್ದಾರೆ. ಅದೇ ಸಂದರ್ಶನದಲ್ಲಿ ರೂಬೀನಾ ಅವರು ಅಪಘಾತದ (Accident) ಕಥೆಯನ್ನು ಹೇಳಿದ್ದಾರೆ. ರೂಬೀನಾ ಮೂರು ತಿಂಗಳ ಗರ್ಭಿಣಿಯಾಗಿದ್ದಾಗ (Pregnant) ಅವರ ಕಾರು ಅಪಘಾತಕ್ಕೀಡಾಗಿತ್ತು.

‘ನಾವು ಅವಳಿ ಮಕ್ಕಳಿಗೆ ಪೋಷಕರಾಗಲಿದ್ದೇವೆ ಎಂದು ತಿಳಿದಾಗ ಅಭಿನವ್ ಶಾಕ್​ಗೆ ಒಳಗಾದರು. ಅವರಿಗೆ ಮಾತೇ ಹೊರಡಲಿಲ್ಲ. ನಾವಿಬ್ಬರೂ ಕಾರಿನಲ್ಲಿ ಹೋಗುವಾಗ ಮಾತೇ ಆಡಲಿಲ್ಲ. ನಾವು ಸಂತೋಷವಾಗಿರಲಿಲ್ಲ ಎಂದು ಅಲ್ಲ. ನನಗೆ ಅವಳಿ ಮಕ್ಕಳು ಜನಿಸುತ್ತವೆ ಎಂಬುದನ್ನು ನಮಗೆ ನಂಬಲಾಗಲಿಲ್ಲ. ಈ ಗುಡ್ ನ್ಯೂಸ್ ಅನ್ನು ಮೂರು ತಿಂಗಳವರೆಗೆ ಯಾರಿಗೂ ಹೇಳಬೇಡಿ ಎಂದು ವೈದ್ಯರು ಹೇಳಿದ್ದರು. ಮೂರು ತಿಂಗಳ ನಂತರ ಪರೀಕ್ಷೆ ಮಾಡಿಸಿದೆವು. ಅವಳಿ ಮಕ್ಕಳು ಜನಿಸುತ್ತಿರುವ ವಿಚಾರ ನಮಗೆ ಖುಷಿ ತಂದಿತ್ತು’ ಎಂದಿದ್ದಾರೆ ರೂಬೀನಾ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ತುಕಾಲಿ ಸಂತೋಷ್​ಗೆ ವಾರದ ಆರಂಭದಲ್ಲೇ ಜೈಲು ಶಿಕ್ಷೆ; ಯಾಕೀ ನಿರ್ಧಾರ?

ಈ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅಭಿನವ್ ಮತ್ತು ರೂಬೀನಾ ಅವರ ಕಾರು ಅಪಘಾತಕ್ಕೀಡಾಗಿದೆ. ‘ತಪಾಸಣೆ ಮುಗಿಸಿ ನಾವು ಮನೆಗೆ ಹೋಗುತ್ತಿದ್ದಾಗ ನಮ್ಮ ಕಾರು ಅಪಘಾತಕ್ಕೀಡಾಯಿತು. ಹಿಂದಿನಿಂದ ನಮ್ಮ ಕಾರಿಗೆ ಟ್ರಕ್ ಡಿಕ್ಕಿ ಹೊಡೆಯಿತು. ಆ ಸಮಯದಲ್ಲಿ ನನ್ನ ತಲೆ ಮತ್ತು ಬೆನ್ನಿಗೆ ಪೆಟ್ಟಾಯಿತು. ಆ ಘಟನೆಯನ್ನು ನೆನಪಿಸಿಕೊಂಡರೆ ನನಗೆ ಈಗಲೂ ಭಯವಾಗುತ್ತದೆ. ಅದು ನನಗೆ ತುಂಬಾ ಕೆಟ್ಟ ಸಮಯವಾಗಿತ್ತು. ಆ ಬಳಿಕ ಮತ್ತೆ ಪರೀಕ್ಷೆ ಮಾಡಿಸಿದೆವು. ಎರಡೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ತಿಳಿಯಿತು. ದೇವರ ದಯೆಯಿಂದ ಎಲ್ಲವೂ ಸರಿ ಆಯಿತು. ಇಂದಿಗೂ ಆ ಘಟನೆಯನ್ನು ನೆನೆದಾಗ ನನ್ನ ಹೃದಯ ಜೋರಾಗಿ ಬಡಿದುಕೊಳ್ಳುತ್ತದೆ’ ಎಂದಿದ್ದಾರೆ ಅವರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್