Sudha Murthy: ನಟ ಸಲ್ಮಾನ್ ಖಾನ್ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದ ಸುಧಾ ಮೂರ್ತಿ

‘ದಿ ಕಪಿಲ್​ ಶರ್ಮಾ ಶೋ’ಗೆ ಸಾಕಷ್ಟು ಜನಪ್ರಿಯತೆ ಇದೆ. ಅನೇಕ ಸೆಲೆಬ್ರಿಟಿಗಳು ಈ ಶೋಗೆ ಬಂದು ಹೋಗಿದ್ದಾರೆ. ಸುಧಾ ಮೂರ್ತಿ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

Sudha Murthy: ನಟ ಸಲ್ಮಾನ್ ಖಾನ್ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದ ಸುಧಾ ಮೂರ್ತಿ
ಸಲ್ಮಾನ್ ಖಾನ್-ಸುಧಾ ಮೂರ್ತಿ
Follow us
ರಾಜೇಶ್ ದುಗ್ಗುಮನೆ
|

Updated on: May 16, 2023 | 9:30 AM

ಇನ್ಫೋಸಿಸ್ ಸಂಸ್ಥಾಪಕ ಎನ್​.ಆರ್​. ನಾರಾಯಣ್ ಮೂರ್ತಿ (NR Narayana Murthy) ಪತ್ನಿ ಸುಧಾ ಮೂರ್ತಿ ಪರಿಚಯ ಬಹುತೇಕರಿಗೆ ಇದೆ. ಅವರು ತುಂಬಾನೇ ಸಿಂಪಲ್​. ಅಷ್ಟೊಂದು ಹಣ ಇದ್ದರೂ ಅವರು ಎಂದಿಗೂ ಬೀಗಿದವರಲ್ಲ. ಒಂದೇ ಒಂದು ದಿನ ಜಂಬ ತೋರಿಸಿದವರಲ್ಲ. ಅವರು ಎಲ್ಲೇ ತೆರಳಿದರೂ ಸೀರೆ ಉಟ್ಟೇ ತೆರಳುತ್ತಾರೆ. ಸುಧಾ ಮೂರ್ತಿ ಅವರು ಇತ್ತೀಚೆಗೆ ಕಪಿಲ್ ಶರ್ಮಾ ಶೋಗೆ ಆಗಮಿಸಿದ್ದರು. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸಲ್ಮಾನ್ ಖಾನ್ (Salman Khan) ಬಗ್ಗೆ ಅವರು ಬಾಯ್ತುಂಬ ಹೊಗಳಿದ್ದಾರೆ.

‘ದಿ ಕಪಿಲ್​ ಶರ್ಮಾ ಶೋ’ಗೆ ಸಾಕಷ್ಟು ಜನಪ್ರಿಯತೆ ಇದೆ. ಅನೇಕ ಸೆಲೆಬ್ರಿಟಿಗಳು ಈ ಶೋಗೆ ಬಂದು ಹೋಗಿದ್ದಾರೆ. ಸುಧಾ ಮೂರ್ತಿ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇದಿಕೆ ಏರುವಾಗ ಅವರು ಸೀರೆ ಧರಿಸಿ ಸಿಂಪಲ್ ಆಗಿ ಬಂದಿದ್ದರು ಅನ್ನೋದು ವಿಶೇಷ. ಅವರ ಸರಳತೆ ಎಲ್ಲರಿಗೂ ಇಷ್ಟ ಆಗಿದೆ. ಅವರನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ‘ದಿ ಕಪಿಲ್ ಶರ್ಮಾ’ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಬಗ್ಗೆ ಸುಧಾ ಮೂರ್ತಿ ಮಾತನಾಡಿದ್ದಾರೆ.

2015ರಲ್ಲಿ ತೆರೆಗೆ ಬಂದ ‘ಬಜರಂಗಿ ಭಾಯಿಜಾನ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಬಜರಂಗಿ ಭಕ್ತನಾಗಿ ಕಾಣಿಸಿಕೊಂಡರೆ ಹರ್ಷಾಲಿ ಮಲ್ಹೋತ್ರಾ ಅವರು ಮುನ್ನಿ ಆಗಿ ಗಮನ ಸೆಳೆದರು. ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ಈ ಸಿನಿಮಾಗೆ ಸಲ್ಮಾನ್ ಖಾನ್ ಮಾತ್ರ ಸೂಕ್ತ ಎಂದು ಸುಧಾಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

‘ಮಗುವಿನ ಮುಗ್ಧತೆಯನ್ನು ಸಲ್ಮಾನ್ ಖಾನ್ ಮಾತ್ರ ತೆರೆಯ ಮೇಲೆ ತರಬಲ್ಲರು. ಅವರು ಬಜರಂಗಿ ಭಾಯಿಜಾನ್ ಸಿನಿಮಾ ಮಾಡಲು ಯೋಗ್ಯ ಹೀರೋ’ ಎಂದಿದ್ದಾರೆ ಸುಧಾ ಮೂರ್ತಿ. ಈ ವಿಡಿಯೋ ಸಲ್ಮಾನ್ ಖಾನ್ ಅಭಿಮಾನಿಗಳ ಫ್ಯಾನ್ ಪೇಜ್​ಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸಲ್ಮಾನ್ ಖಾನ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮೊದಲ ಭೇಟಿಯಲ್ಲಿ ಭಾವಿ ಗಂಡ ಇನ್ಫೋಸಿಸ್ ನಾರಾಯಣ ಮೂರ್ತಿಯನ್ನು ನೋಡಿ ಯಾರಪ್ಪಾ ಇವ ಬಸ್​ ಕಂಡಕ್ಟರ್​ ಅಂದುಕೊಂಡ​ ಸುಧಾ ಮೂರ್ತಿ!

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಬರಲಿದೆ ಎನ್ನುವ ಸುದ್ದಿ ಚರ್ಚೆಯಲ್ಲಿದೆ. ಆದರೆ, ಈ ಸಿನಿಮಾ ಯಾವಾಗ ಬರುತ್ತದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಇನ್ನೂ ಅಪ್​ಡೇಟ್ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ