AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ನಡೆಸಿಕೊಡಲು ಸಲ್ಮಾನ್ ಖಾನ್ ತೆಗೆದುಕೊಂಡ ಸಂಭಾವನೆ ಎಷ್ಟು?

ಬಿಗ್ ಬಾಸ್ 18 ರ ಗ್ರ್ಯಾಂಡ್ ಫಿನಾಲೆ ನಂತರ, ಸಲ್ಮಾನ್ ಖಾನ್ ಅವರ ಅಗಾಧವಾದ ಸಂಭಾವನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ತಿಂಗಳಿಗೆ 60 ಕೋಟಿ ರೂಪಾಯಿಗಳ ಸಂಭಾವನೆಯೊಂದಿಗೆ, ಅವರು ಒಟ್ಟು 200 ಕೋಟಿಗೂ ಹೆಚ್ಚು ರೂಪಾಯಿಗಳನ್ನು ಗಳಿಸಿದ್ದಾರೆ ಎಂದು ವರದಿಯಾಗಿದೆ. ಇದು ಹಲವು ಬಾಲಿವುಡ್ ಬ್ಲಾಕ್‌ಬಸ್ಟರ್ ಚಿತ್ರಗಳ ಬಜೆಟ್‌ಗಿಂತಲೂ ಹೆಚ್ಚು.

ಬಿಗ್ ಬಾಸ್ ನಡೆಸಿಕೊಡಲು ಸಲ್ಮಾನ್ ಖಾನ್ ತೆಗೆದುಕೊಂಡ ಸಂಭಾವನೆ ಎಷ್ಟು?
ಸಲ್ಮಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 20, 2025 | 8:51 AM

Share

105 ದಿನಗಳ ನಂತರ ‘ಬಿಗ್ ಬಾಸ್ 18′ ಗ್ರ್ಯಾಂಡ್ ಫಿನಾಲೆ ನಡೆದಿದೆ. ನಟ ಸಲ್ಮಾನ್ ಖಾನ್ ಅವರ ಹೋಸ್ಟಿಂಗ್‌ನಿಂದಾಗಿ ಈ ಕಾರ್ಯಕ್ರಮದ ಜನಪ್ರಿಯತೆ ಅತ್ಯಧಿಕವಾಗಿದೆ. ಹತ್ತು ವರ್ಷಗಳಿಂದಲೂ ಸಲ್ಮಾನ್ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಇದಕ್ಕಾಗಿ ಅವರು ನಿರ್ಮಾಪಕರಿಂದ ಭಾರಿ ಶುಲ್ಕ ಪಡೆಯುತ್ತಾರೆ. ಬಿಗ್ ಬಾಸ್ ಹದಿನೆಂಟನೇ ಸೀಸನ್​ಗೆ ಸಲ್ಮಾನ್ ಭಾರೀ ಸಂಭಾವನೆ ತೆಗೆದುಕೊಂಡಿದ್ದಾರೆ. ಅದು ಎಷ್ಟು, ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಮಾಧ್ಯಮ ವರದಿಗಳ ಪ್ರಕಾರ ‘ಬಿಗ್ ಬಾಸ್ 18′ ಹೋಸ್ಟ್ ಮಾಡಲು ಸಲ್ಮಾನ್ ಖಾನ್ ತಿಂಗಳಿಗೆ 60 ಕೋಟಿ ರೂಪಾಯಿ ಸಂಭಾವನೆ ಸ್ವೀಕರಿಸಿದ್ದಾರೆ. ಇದು ಅವರನ್ನು ದೂರದರ್ಶನದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್ ಆಗಿದ್ದಾರೆ. ತಿಂಗಳಿಗೆ 60 ಕೋಟಿಯಂತೆ, ಬಿಗ್ ಬಾಸ್ ನಾಲ್ಕು ತಿಂಗಳ ಲೆಕ್ಕ ನಡೆದಿದ್ದು, 200+ ಕೋಟಿ ರೂಪಾಯಿ ಪಡೆದಿದ್ದಾರೆ.

ಸಲ್ಮಾನ್ ಖಾನ್ ಅವರ ಈ ಸಂಭಾವನೆಯು ಕೆಲವು ಭಾರತೀಯ ಬ್ಲಾಕ್‌ಬಸ್ಟರ್ ಚಿತ್ರಗಳ ಬಜೆಟ್‌ಗಿಂತ ಹೆಚ್ಚು. ಎಸ್. ಎಸ್. ರಾಜಮೌಳಿ ನಿರ್ದೇಶನದ ‘ಬಾಹುಬಲಿ’ ಸಿನಿಮಾ 180 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗಿದೆ. ಶಾರುಖ್ ಖಾನ್ ಅಭಿನಯದ ‘ಡಂಕಿ’ 120 ಕೋಟಿ ರೂ. ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರ 200 ಕೋಟಿ ರೂಪಾಯಿ ಬಜೆಟ್‌ನಲ್ಲಿ ತಯಾರಾಗಿದೆ.

ಕಿರುತೆರೆಯ ಇತರ ಸ್ಟಾರ್​ಗಳಿಗೆ ಹೋಲಿಸಿದರೆ ಸಲ್ಮಾನ್ ಪಡೆದಿರುವ ಈ ಮೊತ್ತ ಹಲವು ಪಟ್ಟು ಹೆಚ್ಚು. ನೆಟ್‌ಫ್ಲಿಕ್ಸ್‌ನ ‘ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ ಸೀಸನ್​​ಗಾಗಿ ಹಾಸ್ಯನಟ ಕಪಿಲ್ ಶರ್ಮಾ 60 ಕೋಟಿ ರೂಪಾಯಿಗಳನ್ನು ಸಂಭಾವನೆಯಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಕೂಡ ‘ಕೌನ್ ಬನೇಗಾ ಕರೋಡ್ ಪತಿ’ ಶೋಗಾಗಿ ಉತ್ತಮ ಮೊತ್ತವನ್ನು ವಿಧಿಸುತ್ತಾರೆ. ಆದರೆ ಆ ನಂಬರ್ ಸಲ್ಮಾನ್ ಸಂಭಾವನೆಗಿಂತ ಕಡಿಮೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಮನೆಗೆ ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಕೆ

ಕಳೆದ ಹಲವು ವರ್ಷಗಳಿಂದ ಸಲ್ಮಾನ್ ಖಾನ್ ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದ ಕೆಲವು ಸೀಸನ್‌ಗಳನ್ನು ನಟರಾದ ಅರ್ಷದ್ ವಾರ್ಸಿ ಮತ್ತು ಅಮಿತಾಭ್ ಬಚ್ಚನ್ ಕೂಡ ಆಯೋಜಿಸಿದ್ದರು. ಆದರೆ ಸಲ್ಮಾನ್‌ನಿಂದಾಗಿ ಈ ಶೋ ದೇಶಾದ್ಯಂತ ಭಾರೀ ಜನಪ್ರಿಯತೆ ಗಳಿಸಿದೆ. ಅವರ ‘ವೀಕೆಂಡ್ ಕಾ ವಾರ್’ ಸಂಚಿಕೆಯನ್ನು ವೀಕ್ಷಿಸಲು ವೀಕ್ಷಕರು ಕಾತರರಾಗಿರುತ್ತಾರೆ.  ‘ಬಿಗ್ ಬಾಸ್ ಹಿಂದಿ ಸೀಸನ್ 18’ರಲ್ಲಿ ಕರಣ್ ವೀರ್ ಸಿಂಗ್ ವಿನ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ