Sangeetha Sringeri: ‘ಇದಕ್ಕೆ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’; ಬಿಗ್ ಬಾಸ್​ನಿಂದ ಹೊರ ಬಂದ ಸಂಗೀತಾ ಮೊದಲ ರಿಯಾಕ್ಷನ್

ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ ಮುಗಿದ ಬಳಿಕ ಯಾರ ಕೈಗೂ ಸಿಗಲಿಲ್ಲ. ಅವರು ಸದ್ಯ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಅಲ್ಲಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

Sangeetha Sringeri: ‘ಇದಕ್ಕೆ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’; ಬಿಗ್ ಬಾಸ್​ನಿಂದ ಹೊರ ಬಂದ ಸಂಗೀತಾ ಮೊದಲ ರಿಯಾಕ್ಷನ್
ಸಂಗೀತಾ
Follow us
ರಾಜೇಶ್ ದುಗ್ಗುಮನೆ
|

Updated on: Jan 30, 2024 | 9:50 AM

ಸಂಗೀತಾ ಶೃಂಗೇರಿ (Sangeetha Sringeri) ಅವರು ಈ ಬಾರಿಯ ಬಿಗ್ ಬಾಸ್​ನಲ್ಲಿ ಕಪ್ ಗೆಲ್ಲುತ್ತೇನೆ ಎನ್ನುವ ಭರವಸೆಯಲ್ಲಿದ್ದರು. ಶ್ರುತಿ ಬಳಿಕ ಎರಡನೇ ಲೇಡಿ ವಿನ್ನರ್ ತಾವೇ ಆಗಬೇಕು ಎನ್ನುವ ಕನಸು ಕಂಡಿದ್ದರು. ಆದರೆ, ಹಾಗಾಗಲೇ ಇಲ್ಲ. ಬಿಗ್ ಬಾಸ್ ವಿನ್ ಆಗಬೇಕು ಎನ್ನುವ ಅವರ ಕನಸು ಕನಸಾಗಿಯೇ ಉಳಿದಿದೆ. ಎರಡನೇ ರನ್ನರ್​ಅಪ್ ಸ್ಥಾನಕ್ಕೆ ಅವರು ಖುಷಿಪಟ್ಟುಕೊಂಡಿದ್ದಾರೆ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಸಂಗೀತಾ ಮೊದಲ ಬಾರಿಗೆ ರಿಯಾಕ್ಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಕಾರ್ತಿಕ್ ಮಹೇಶ್, ವಿನಯ್ ಗೌಡ, ತುಕಾಲಿ ಸಂತೋಷ್ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಮಾಧ್ಯಮದವರ ಕೈಗೆ ಸಿಕ್ಕರು. ಅವರು ಈಗಾಗಲೇ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ, ಸಂಗೀತಾ ಶೃಂಗೇರಿ ಅವರು ಯಾರ ಕೈಗೂ ಸಿಗುತ್ತಿಲ್ಲ. ಅವರು ಸದ್ಯ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಅಲ್ಲಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

‘ನನ್ನ ಪ್ರೀತಿಯ ಅಭಿಮಾನಿಗಳಿಗೆ, ಪ್ರೋತ್ಸಾಹಕರಿಗೆ, ಕನ್ನಡ ಜನತೆಗೆ ನಿಮ್ಮ ಸಂಗೀತಾ ಮಾಡುವ ನಮಸ್ಕಾರಗಳು. ಎಲ್ಲಾ ಹೇಗಿದ್ದೀರಿ? ನಮ್ಮ ಬಿಗ್ ಬಾಸ್ ಹೇಗಿತ್ತು? ನನ್ನ ಬಿಗ್ ಬಾಸ್ ಜರ್ನಿ ಅಂತೂ ನಿಮಗೆ ಗೊತ್ತೇ ಇದೆ. ನೀವು ಇಲ್ಲಿ ನನಗೆ ಕೊಟ್ಟ ಪ್ರೀತಿ, ಸಹಕಾರ ಈಗ ತಿಳಿಯುತ್ತಿದೆ. ನಿಮಗೆ ಹೇಗೆ ನನ್ನ ಧನ್ಯವಾದ ಅರ್ಪಿಸಲಿ ಎಂಬುದು ತಿಳಿಯದಾಗಿದೆ’ ಎಂದು ಪತ್ರ ಆರಂಭಿಸಿದ್ದಾರೆ ಸಂಗೀತಾ.

‘ನನ್ನ ಬೆನ್ನೆಲುಬಾಗಿ ನಿಂತು ನೀವು ತೋರಿದ ನಿಮ್ಮ ಪ್ರೀತಿಯ ಪ್ರೋತ್ಸಾಹಕ್ಕೆ ನಾನು ಎಂದಿಗೂ ಆಭಾರಿ. ಬಿಗ್ ಬಾಸ್ ಟ್ರೋಫಿ ನನಗೆ ಸಿಗದಿರಬಹುದು, ನಿಮ್ಮ ಪ್ರೀತಿ ನನಗೆ ನಿಜವಾದ ಗೆಲುವನ್ನೇ ತಂದುಕೊಟ್ಟಿದೆ. ನಿಮ್ಮಿಂದ ನಾನೇ ವಿನ್ನರ್ ಎನಿಸುತ್ತಿದೆ. ಇದಕ್ಕೆ ಇರಬೇಕು ನಮ್ಮ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’ ಎಂದು ಪೋಸ್ಟ್ ಪೂರ್ಣಗೊಳಿಸಿದ್ದಾರೆ ಸಂಗೀತಾ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ

ಸಂಗೀತಾ ಶೃಂಗೇರಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ಹೆಚ್ಚಿದೆ. ಇದರಿಂದ ಅವರು ಸಾಕಷ್ಟು ಖುಷಿಯಾಗಿದ್ದಾರೆ. ಆದರೆ, ಕಪ್ ಗೆಲ್ಲಬೇಕು ಎನ್ನುವ ಅವರು ಕನಸು ಈಡೇರಲಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಅವರು ಬದ್ಧ ವೈರಿ ಎಂದೇ ಪರಿಗಣಿಸಿದ್ದ ಕಾರ್ತಿಕ್ ಮಹೇಶ್ ಬಿಗ್ ಬಾಸ್ ವಿನ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ