ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ

Sangeetha Sringeri: ಈಗ ಸಂಗೀತಾ ಶೃಂಗೇರಿ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಮಾತು ಮಾತಿಗೆ ತಾವು ಮನೆ ತೊರೆಯುವುದಾಗಿ ಅವರು ಹೇಳುತ್ತಿದ್ದಾರೆ. ಇದು ಡ್ರಾಮಾ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ
ಸಂಗೀತಾ
Follow us
|

Updated on:Nov 23, 2023 | 7:59 AM

ಸಂಗೀತಾ ಶೃಂಗೇರಿ (Sangeetha Sringeri) ಅವರು ಬಿಗ್ ಬಾಸ್ ಮನೆಯಲ್ಲಿ ಈ ವಾರ ವಿಲನ್ ಆಗಿದ್ದಾರೆ. ಅವರು ತಂಡ ಒಂದು ಚಾಲೆಂಜ್ ನೀಡಿತ್ತು. ಇದರ ಪ್ರಕಾರ ಕಾರ್ತಿಕ್ ಹಾಗೂ ಸಂತೋಷ್​ ತಲೆಯನ್ನು ಶೇವ್ ಮಾಡಬೇಕಿತ್ತು. ಅವರು ಈ ಚಾಲೆಂಜ್​ನ ಸ್ವೀಕರಿಸಿದರು. ಈ ಘಟನೆ ಕಾರ್ತಿಕ್ ಮಹೇಶ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ. ಇದು ಸಂಗೀತಾ ಬಿಗ್ ಬಾಸ್ ಜರ್ನಿ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಸಂಗೀತಾ ಶೃಂಗೇರಿ ಅವರಿಗೆ 11 ಸಾವಿರ ಹಿಂಬಾಲಕರು ಕಡಿಮೆ ಆಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಯಾವುದೇ ಸೆಲೆಬ್ರಿಟಿ ಬಿಗ್ ಬಾಸ್​ಗೆ ಕಾಲಿಟ್ಟರೆ ಅವರ ಖ್ಯಾತಿ ಹೆಚ್ಚುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಹಿಂಬಾಲಕರ ಸಂಖ್ಯೆ ಜಾಸ್ತಿ ಆಗುತ್ತಾ ಹೋಗುತ್ತದೆ. ಬಿಗ್ ಬಾಸ್ ಜರ್ನಿ ಆರಂಭ ಆದಾಗ ಎಷ್ಟು ಜನ ಹಿಂಬಾಲಕರು ಇದ್ದರೋ ಜರ್ನಿ ಕೊನೆಗೊಳ್ಳುವಾಗ ಆ ಸಂಖ್ಯೆಯಲ್ಲಿ ದ್ವಿಗುಣ ಆದ ಉದಾಹರಣೆಯೂ ಸಾಕಷ್ಟು ಇದೆ. ನಟಿ ಸಂಗೀತಾ ಶೃಂಗೇರಿ ಅವರಿಗೂ ಹಾಗೆಯೇ ಆಗಿದೆ. ಅವರ ಹಿಂಬಾಲಕ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಲೇ ಇತ್ತು. ಆದರೆ, ಈ ಸಂಖ್ಯೆ ಈಗ ಏಕಾಏಕಿ ಕುಸಿದಿದೆ.

ತಲೆ ಬೋಳಿಸುವ ಟಾಸ್ಕ್ ಕೊಡುವುದಕ್ಕೂ ಮೊದಲು ಸಂಗೀತಾಗೆ 4.49 ಲಕ್ಷ ಹಿಂಬಾಲಕರು ಇದ್ದರು. ಅಂದರೆ 449 ಸಾವಿರ ಫಾಲೋವರ್ಸ್​. ಶೇವಿಂಗ್ ಘಟನೆ ಆದ ಬಳಿಕ ಈ ಸಂಖ್ಯೆ 4.38 ಲಕ್ಷಕ್ಕೆ ಇಳಿಕೆ ಆಗಿದೆ. ಅಂದರೆ, 438 ಸಾವಿರ ಹಿಂಬಾಲಕರು ಆಗಿದ್ದಾರೆ. ಇದು ಸಂಗೀತಾ ಆಟದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಈ ಸಂಖ್ಯೆ ದಿನ ಕಳೆದಂತೆ ಇಳಿಕೆ ಆಗುತ್ತಲೇ ಇದೆ.

ಇದನ್ನೂ ಓದಿ: ‘ಅವನು ನನ್ನ ಬಾಯ್​ಫ್ರೆಂಡ್​ ಅಲ್ಲ, ಇನ್ನು ಮಾತನಾಡಲ್ಲ’; ಶಪಥ ಮಾಡಿದ ಸಂಗೀತಾ  

ಈಗ ಸಂಗೀತಾ ಶೃಂಗೇರಿ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಮಾತು ಮಾತಿಗೆ ತಾವು ಮನೆ ತೊರೆಯುವುದಾಗಿ ಅವರು ಹೇಳುತ್ತಿದ್ದಾರೆ. ಇದು ಡ್ರಾಮಾ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಜಿಯೋ ಸಿನಿಮಾ ಹಾಗೂ ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆಗುತ್ತಿದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Thu, 23 November 23

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ