AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಸುಬ್ರಮಣಿ ಪತ್ನಿ ಸಾವಿನ ಕೇಸ್​​ಗೆ ಟ್ವಿಸ್ಟ್​; ಕೊರೊನಾ ಅಲ್ಲ, ಆತ್ಮಹತ್ಯೆಯಿಂದ ನಿಧನ?

Subramani Wife Death: ಕೋಲಾರದ ಧರ್ಮರಾಯ ನಗರದಲ್ಲಿ ಇರುವ ನಿವಾಸದಲ್ಲಿ ಮೇ 7ರಂದು ಜ್ಯೋತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಯಿತು. ಆ ಸಂದರ್ಭದಲ್ಲಿ ಜ್ಯೋತಿ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಯಿತು.

‘ಸರಿಗಮಪ’ ಸುಬ್ರಮಣಿ ಪತ್ನಿ ಸಾವಿನ ಕೇಸ್​​ಗೆ ಟ್ವಿಸ್ಟ್​; ಕೊರೊನಾ ಅಲ್ಲ, ಆತ್ಮಹತ್ಯೆಯಿಂದ ನಿಧನ?
‘ಸರಿಗಮಪ’ ಸುಬ್ರಮಣಿ - ಪತ್ನಿ ಜ್ಯೋತಿ
ಮದನ್​ ಕುಮಾರ್​
| Edited By: |

Updated on:May 11, 2021 | 6:15 PM

Share

ಮುಖ್ಯಪೇದೆಯಾಗಿ ಕೆಲಸ ಮಾಡುತ್ತಲೇ ಗಾಯನದ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಸುಬ್ರಮಣಿ ಅವರ ಪತ್ನಿ ಜ್ಯೋತಿ ಕೊರೊನಾದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಸೋಮವಾರ (ಮೇ 10) ಹಬ್ಬಿತ್ತು. ಆದರೆ ಆ ಘಟನೆಗೆ ಈಗ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಸುಬ್ರಮಣಿ ಪತ್ನಿ ಜ್ಯೋತಿ ಸಾವಿಗೆ ಕೊರೊನಾ ವೈರಸ್​ ಕಾರಣವಲ್ಲ. ಅವರು ಆತ್ಮಹತ್ಯೆಯಿಂದ ಅಸುನೀಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಜ್ಯೋತಿ ಅವರಿಗೆ 33 ವರ್ಷ ವಯಸ್ಸಾಗಿತ್ತು.

ಉತ್ತಮ ಗಾಯಕನಾಗಿರುವ ಸುಬ್ರಮಣಿ ಅವರು ಸರಿಗಮಪ ವೇದಿಕೆಯಲ್ಲಿ ಹಾಡುವ ಮೂಲಕ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದರು. ಅನೇಕ ಟಿವಿ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. ಅವರ ಪತ್ನಿ ಜ್ಯೋತಿ ಕೋಲಾರದ ಧರ್ಮರಾಯ ನಗರದಲ್ಲಿ ಇರುವ ನಿವಾಸದಲ್ಲಿ ಮೇ 7ರಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಕೂಡಲೇ ಕೋಲಾರದ ಸ್ಥಳೀಯ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಯಿತು. ಆ ಸಂದರ್ಭದಲ್ಲಿ ಜ್ಯೋತಿ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಯಿತು. ವೆಂಟಿಲೇಟರ್​ ಬೆಡ್​ ಸಿಗದೇ ಪರದಾಡುವ ಪರಿಸ್ಥಿತಿ ಎದುರಾಯಿತು. ಬಳಿಕ ಹೊಸಕೋಟೆ ಹೊರವಲಯದ ಆಸ್ಪತ್ರೆಗೆ ಅವರನ್ನು ಸಂಬಂಧಿಕರು ಕರೆದುಕೊಂಡು ಬಂದರು. ಚಿಕಿತ್ಸೆ ಫಲಕಾರಿ ಆಗದೇ ಜ್ಯೋತಿ ಮೃತರಾದರು ಎಂಬ ಮಾಹಿತಿ ಲಭ್ಯವಾಗಿದೆ.

ಜ್ಯೋತಿ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗುತ್ತಿದೆ. ಕೆ.ಆರ್​. ಪುರ ಪೊಲೀಸ್​ ಠಾಣೆಯಲ್ಲಿ ಮುಖ್ಯಪೇದೆಯಾಗಿ ಸುಮ್ರಮಣಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ಅವರು ಕರ್ತವ್ಯಕ್ಕೆ ಗೈರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ:

ಭಾವಿ ಪತ್ನಿ 3 ದಿನದಿಂದ ಫೋನ್​ ಮಾಡಿಲ್ಲ ಎಂದು ಕಾನ್ಸ್​ಟೇಬಲ್​ ಆತ್ಮಹತ್ಯೆ

ತಲೆಗೆ ಗುಂಡು ಹಾರಿಸಿಕೊಂಡು ಚಿಕ್ಕಮಗಳೂರು ರೈತ ಆತ್ಮಹತ್ಯೆ

Published On - 5:16 pm, Tue, 11 May 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ