AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಧಾರಾವಾಹಿಗೆ ಕೊನೆಯ ದಿನದ ಶೂಟಿಂಗ್; ಸೀರಿಯಲ್ ಪೂರ್ಣಗೊಳ್ಳಲು ಕಾರಣವೇನು?

Seetha Raama Serial: ಜೀ ಕನ್ನಡ ಧಾರಾವಾಹಿ ‘ಸೀತಾ ರಾಮ’ ಶೀಘ್ರವೇ ಅಂತ್ಯಗೊಳ್ಳಲಿದೆ. ಧಾರಾವಾಹಿಯ ಅಭಿಮಾನಿಗಳಲ್ಲಿ ಈ ಸುದ್ದಿ ಬೇಸರ ಉಂಟು ಮಾಡಿದೆ.2023ರ ಜುಲೈ 17ರಂದು ಈ ಧಾರಾವಾಹಿ ಪ್ರಸಾರ ಆರಂಭಿಸಿತು. ಸುಮಾರು ಎರಡು ವರ್ಷಗಳ ಕಾಲ ಪ್ರಸಾರ ಕಂಡ ಈ ಧಾರಾವಾಹಿಗೆ ಇನ್ನು ಕೆಲವೇ ದಿನಗಳಲ್ಲಿ ಕೊನೆಯ ಎಪಿಸೋಡ್ ಪ್ರಸಾರ ಕಾಣಲಿದೆ.

‘ಸೀತಾ ರಾಮ’ ಧಾರಾವಾಹಿಗೆ ಕೊನೆಯ ದಿನದ ಶೂಟಿಂಗ್; ಸೀರಿಯಲ್ ಪೂರ್ಣಗೊಳ್ಳಲು ಕಾರಣವೇನು?
ಸೀತಾ ರಾಮ
ರಾಜೇಶ್ ದುಗ್ಗುಮನೆ
|

Updated on: May 22, 2025 | 6:58 AM

Share

ಗಗನ್ ಚಿನ್ನಪ್ಪ, ವೈಷ್ಣವಿ ಗೌಡ (Vaishnavi Gowda), ಪೂಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ನಟಿಸಿರುವ ‘ಸೀತಾ ರಾಮ’ಧಾರಾವಾಹಿಗೆ ಇತ್ತೀಚೆಗೆ ಕೊನೆಯ ದಿನದ ಶೂಟ್ ಪೂರ್ಣಗೊಂಡಿದೆ. ಈ ಮೂಲಕ ಇನ್ನು ಕೆಲವೇ ದಿನಗಳಲ್ಲಿ ಧಾರಾವಾಹಿ ಕೊನೆ ಆಗಲಿದೆ. ಸೀರಿಯಲ್ ಪ್ರಿಯರಿಗೆ ಈ ವಿಚಾರ ಬೇಸರ ಉಂಟು ಮಾಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹಾಗಾದರೆ ಈ ಧಾರಾವಾಹಿ ಕೊನೆಗೊಳ್ಳಲು ಕಾರಣಗಳು ಏನು? ಇಲ್ಲಿದೆ ವಿವರ.

ಮರಾಠಿ ಧಾರಾವಾಹಿ ‘ಮುಜಿ ತುಜಿ ರೇಶಿಮಗಾಡ’ ಧಾರಾವಾಹಿಯ ರಿಮೇಕ್ ಆಗಿ ‘ಸೀತಾ ರಾಮ’ ಧಾರಾವಾಹಿ ಮೂಡಿ ಬಂತು. 2023ರ ಜುಲೈ 17ರಂದು ಈ ಧಾರಾವಾಹಿ ಪ್ರಸಾರ ಆರಂಭಿಸಿತು. ಸುಮಾರು ಎರಡು ವರ್ಷಗಳ ಕಾಲ ಪ್ರಸಾರ ಕಂಡ ಈ ಧಾರಾವಾಹಿಗೆ ಇನ್ನು ಕೆಲವೇ ದಿನಗಳಲ್ಲಿ ಕೊನೆಯ ಎಪಿಸೋಡ್ ಪ್ರಸಾರ ಕಾಣಲಿದೆ. ಈ ಧಾರಾವಾಹಿ ಈ ವರೆಗೆ 465 ಎಪಿಸೋಡ್​ಗಳನ್ನು ಪ್ರಸಾರ ಕಂಡಿದೆ. ಧಾರಾವಾಹಿಯ ಕಲಾವಿದರಾದ ಅಶೋಕ ಮೊದಲಾದವರು ಈ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಖಚಿತಪಡಿಸಿದ್ದಾರೆ. ಈ ಧಾರಾವಾಹಿ ಕೊನೆಗೊಳ್ಳಲು ಕಾರಣವಾದ ಅಂಶಗಳ ಬಗ್ಗೆ ಕೆಳಗಿದೆ ವಿವರ.

ಇದನ್ನೂ ಓದಿ: ‘ಸೀತಾ ರಾಮ’: ಸಿಹಿ ಆತ್ಮವೇ ಹೆದರಿ ಮನೆಬಿಟ್ಟು ಹೋದಾಗ.. ವೀಕ್ಷಕರಲ್ಲಿ ಮೂಡಿದೆ ಅಸಮಾಧಾನ

ಇದನ್ನೂ ಓದಿ
Image
‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ರಾವಲ್ ಹೊರ ನಡೆಯಲು ಅಕ್ಷಯ್ ಕುಮಾರ್ ಕಾರಣ
Image
3.5 ಲಕ್ಷ ಬೆಲೆಯ ಗೌನ್ ಧರಿಸಿ ಕಾನ್ ಸಿನಿಮೋತ್ಸವದಲ್ಲಿ ಮಿಂಚಿದ ಜಾನ್ವಿ
Image
ಹಿರಿಯ ನಟ ಪರೇಶ್ ರಾವಲ್ ವಿರುದ್ಧ ದೂರು, 25 ಕೋಟಿ ರೂ ಪರಿಹಾರಕ್ಕೆ ಒತ್ತಾಯ
Image
ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು

ಸಮಯ ಬದಲಾವಣೆ

‘ಸೀತಾ ರಾಮ’ ಧಾರಾವಾಹಿ ಈ ಮೊದಲು ಪ್ರೈಮ್ ಟೈಮ್​ನಲ್ಲಿ ಪ್ರಸಾರ ಕಾಣುತ್ತಿತ್ತು. ಇತ್ತೀಚೆಗೆ ‘ನಾನಿನ್ನ ಬಿಡಲಾರೆ’ ಧಾರಾವಾಹಿ ಪ್ರಸಾರ ಆರಂಭ ಆಗುತ್ತಿದ್ದಂತೆ ‘ಸೀತಾ ರಾಮ’ ಸಮಯವನ್ನು ಸಂಜೆ 5.30ಕ್ಕೆ ಬದಲಾವಣೆ ಮಾಡಲಾಯಿತು. ಇದರಿಂದ ಜನಪ್ರಿಯತೆ ಕಡಿಮೆ ಆಯಿತು.

ಟಿಆರ್​ಪಿ

‘ಸೀತಾ ರಾಮ’ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರ ಕಾಣುತ್ತಿದ್ದಾಗ ಇದಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಇದ್ದರು. ಯಾವಾಗ ಧಾರಾವಾಹಿ ಸಂಜೆ ಪ್ರಸಾರ ಆರಂಭಿಸಿತೋ ಆಗ ದೊಡ್ಡ ಮಟ್ಟದಲ್ಲಿ ವೀಕ್ಷಕರನ್ನು ಈ ಧಾರಾವಾಹಿ ಕಳೆದುಕೊಂಡಿತು. ಇದರಿಂದ ಟಿಆರ್​ಪಿ ಕುಸಿಯಿತು.

ಧಾರಾವಾಹಿ ಕಥೆ

ಮೂಲ ಧಾರಾವಾಹಿಯ ಕಥೆಗೂ ಈ ಧಾರಾವಾಹಿಯ ಕಥೆಯಲ್ಲೂ ವ್ಯತ್ಯಾಸ ಮಾಡಿಕೊಳ್ಳಲಾಗಿದೆ ಎನ್ನುವ ಮಾತಿದೆ. ಇತ್ತೀಚೆಗೆ ಧಾರಾವಾಹಿಯ ಕಥೆ ದಿಕ್ಕು ತಪ್ಪಿದೆ ಎನ್ನುವ ಬಗ್ಗೆ ಚರ್ಚೆ ಆಗಿತ್ತು.

ವೈಷ್ಣವಿ ಗೌಡ ಮದುವೆ

ಕಥಾ ನಾಯಕಿ ವೈಷ್ಣವಿ ಗೌಡ ಎರಡು ವರ್ಷಗಳ ಕಾಲ ಅವರು ಸಂಪೂರ್ಣವಾಗಿ ಈ ಧಾರಾವಾಹಿಗೆ ಮುಡಿಪಿಟ್ಟಿದ್ದಾರೆ. ಅವರು ಈಗ ವಿವಾಹ ಆಗುತ್ತಿದ್ದಾರೆ. ಈ ಕಾರಣಕ್ಕೆ ಅವರಿಗೆ ಮದುವೆಗೆ ಒಂದು ದೊಡ್ಡ ವೆಕೇಶನ್ ಬೇಕೆ ಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ