ಲೈಂಗಿಕ ದೌರ್ಜನ್ಯ ಆರೋಪ: ‘ಮುದ್ದುಲಕ್ಷ್ಮಿ’ ಸೀರಿಯಲ್ ನಟ ಚರಿತ್ ಬಾಳಪ್ಪ ಬಂಧನ
ಸೀರಿಯಲ್ ನಟ ಚರಿತ್ ಬಾಳಪ್ಪ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಅವರನ್ನು ಆರ್.ಆರ್. ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಮುಂತಾದ ಆರೋಪಗಳು ಎದುರಾಗಿವೆ. ದೈಹಿಕ ಸಂಪರ್ಕಕ್ಕೆ ಚರಿತ್ ಬಾಳಪ್ಪ ಒತ್ತಾಯಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಕಿರುತೆರೆಯ ಸೀರಿಯಲ್ಗಳಲ್ಲಿ ನಟಿಸಿ ಹೆಸರು ಮಾಡಿರುವ ನಟ ಚರಿತ್ ಬಾಳಪ್ಪ ಅವರನ್ನು ಬಂಧಿಸಲಾಗಿದೆ. ಕಿರುತೆರೆ ನಟನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಹಿನ್ನೆಯಲ್ಲಿ ಚರಿತ್ ಬಾಲಪ್ಪ ಅವರನ್ನು ಬೆಂಗಳೂರಿನ ಆರ್.ಆರ್. ನಗರ ಪೊಲೀಸರು ಬಂಧಿಸಿದ್ದಾರೆ. ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿದಂತೆ ಹಲವು ಸೀರಿಯಲ್ಗಳಲ್ಲಿ ಚರಿತ್ ಬಾಳಪ್ಪ ನಟಿಸಿದ್ದಾರೆ. ತೆಲುಗಿನ ಅನೇಕ ಸೀರಿಯಲ್ಗಳಲ್ಲೂ ಅಭಿನಯಿಸಿದ್ದಾರೆ. ಈಗ ಗಂಭೀರ ಆರೋಪದ ಮೇಲೆ ಅವರ ಬಂಧನ ಆಗಿದೆ.
ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಚರಿತ್ ಬಾಳಪ್ಪ ಮೇಲಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಅಲ್ಲದೇ, ಯುವತಿ ವಾಸ ಮಾಡುತ್ತಿದ್ದ ಮನೆಗೆ ನುಗ್ಗಿ ಸಹಚರರ ಜೊತೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೂಡ ಮಾಡಲಾಗಿದೆ. ದೂರು ಆಧರಿಸಿ ಪೊಲೀಸರು ನಟನನ್ನು ಬಂದಿದ್ದಾರೆ.
ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಪರಿಚಯವಾದ ಫೋಟೋಗ್ರಾಫರ್ನನ್ನ ನಂಬಿ ಮೋಸ ಹೋದ ಯುವತಿ: ವಿಡಿಯೋ ಇಟ್ಟುಕೊಂಡು ಲೈಂಗಿಕ ದೌರ್ಜನ್ಯ
ಲೈಂಗಿಕ ದೌರ್ಜನ್ಯ ಮಾತ್ರವಲ್ಲದೇ ಚರಿತ್ ಬಾಳಪ್ಪ ಅವರು ಆ ಯುವತಿಯ ಬಳಿ ಹಣಕ್ಕೂ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಎಲ್ಲ ದೂರುಗಳನ್ನು ಆಧರಿಸಿ ಚರಿತ್ ಬಾಳಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ, ಹಲ್ಲೆ ಮುಂತಾದ ಕೇಸ್ ದಾಖಲಾಗಿದೆ.
ಇದನ್ನೂ ಓದಿ: ಖ್ಯಾತ ನಟ ಶರದ್ ಕಪೂರ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
ಈ ಘಟನೆಗೆ ಸಂಬಂಧಿಸಿದಂತೆ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಪತ್ನಿಯಿಂದ ಚರಿತ್ ಬಾಳಪ್ಪ ಡಿವೋರ್ಸ್ ಪಡೆದಿದ್ದಾರೆ. ಈ ಹಿಂದೆ ಚರಿತ್ ಬಾಳಪ್ಪ ವಿರುದ್ದವೇ ಪತ್ನಿ ಮಂಜುಶ್ರೀ ಕೂಡ ದೂರು ನೀಡಿದ್ದರು. ಕೋರ್ಟ್ ಆಜ್ಞೆಯಂತೆ ಡಿವೋರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಪತ್ನಿಗೆ ಚರಿತ್ ಬಾಳಪ್ಪ ಬೆದರಿಕೆ ಹಾಕಿದ್ದರು. ಆ ಕುರಿತು 2024ರ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.