Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು

ವೈದ್ಯರ ನಿರ್ಲಕ್ಷ್ಯದಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು
ಕಿರುತೆರೆ ನಟಿ ಚೇತನಾ ರಾಜ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 17, 2022 | 8:40 AM

ಬೆಂಗಳೂರು: ಕಿರುತೆರೆ ನಟಿ ಚೇತನಾ ರಾಜ್ ​(21) ನವರಂಗ್ ಸರ್ಕಲ್​​ನ ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ (Serial Actress Chetana Raj Death). ಫ್ಯಾಟ್​ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ ಚೇತನಾ ಶವದ ಎದುರು ತಾಯಿ ಮುನಿಲಕ್ಷ್ಮೀ ಕಣ್ಣೀರುಗರೆದರು. ಆಸ್ಪತ್ರೆಯಲ್ಲಿ ಅಗತ್ಯ ಸಲಕರಣೆಗಳಿಲ್ಲ, ಪೋಷಕರ ಒಪ್ಪಿಗೆ ಇಲ್ಲದೆ ಫ್ಯಾಟ್ ಸರ್ಜರಿ ನಡೆಸಲಾಗಿದೆ ಎಂದು ಚೇತನಾ ಅವರ ಅಪ್ಪ ವರದರಾಜ್ ಆರೋಪ ಮಾಡಿದರು. ಹಲವು ಧಾರಾವಾಹಿ, ಸಿನಿಮಾದಲ್ಲಿ ಚೇತನಾ ಅಭಿನಯಿಸಿದ್ದರು. ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವೈದ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಲು ಪೋಷಕರು ನಿರ್ಧರಿಸಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ಚೇತನಾ ರಾಜ್ ಕುಟುಂಬ ವಾಸವಿತ್ತು. ಸಾವಿನ ಕುರಿತು ಪೋಷಕರು ಅಥವಾ ಮಾಧ್ಯಮಗಳಿಗೆ ಡಾ.ಶೆಟ್ಟಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಮಾತನಾಡುವುದಾಗಿ ವೈದ್ಯರು ಹೇಳಿದರು. ಕಲರ್ಸ್ ಕನ್ನಡದಲ್ಲಿ ಬರುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ಚೇತನಾ ರಾಜ್ ನಟಿಸುತ್ತಿದ್ದರು. ಇನ್ನೂ ಬಿಡುಗಡೆಯಾಗದ ‘ಹವಾಯಾಮಿ’ ಸಿನಿಮಾದಲ್ಲೂ ನಟಿಸಿದ್ದರು.

ಪೋಷಕರಿಗೆ ಮಾಹಿತಿ ನೀಡದೇ ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ನಟಿ ಮುಂದಾಗಿದ್ದರು. ನಿನ್ನೆ (ಮೇ 16) ಬೆಳಿಗ್ಗೆ 9,30 ಕ್ಕೆ ಆಸ್ಪತ್ರೆಗೆ ದಾಖಲಾಗಿ ಸರ್ಜರಿ ಮಾಡಿಸಿಕೊಂಡಿದ್ದರು. ನಂತರ ವಿಚಾರ ಗೊತ್ತಾಗಿ ಶೆಟ್ಟಿ ಆಸ್ಪತ್ರೆಗೆ ಪೋಷಕರು ಧಾವಿಸಿದ್ದರು. ಶಸ್ತ್ರಚಿಕಿತ್ಸೆ ವೇಳೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು ಪರಿಸ್ಥಿತಿ ಗಂಭೀರವಾಗಿತ್ತು. ನಾಲ್ಕು ಗಂಟೆಗೆ ಹೆಚ್ಚಿನ ಚಿಕಿತ್ಸೆಗೆ ಪ್ರಯತ್ನಿಸಲಾಯಿತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟರು. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಲೇ ಚೇತನಾ ರಾಜ್ ಮೃತಪಟ್ಟಿದ್ದಾರೆ. ಪೋಷಕರ ಅನುಮತಿ ಇಲ್ಲದೆ ಸರ್ಜರಿ ಹೇಗೆ ಮಾಡಿದರು. ಶೆಟ್ಟಿ ಆಸ್ಪತ್ರೆಯವರೇ ಚೇತನಾ ರಾಜ್ ಸಾವಿಗೆ ಕಾರಣ ಎಂದು ಮೃತ ಚೇತನಾ ರಾಜ್ ದೊಡ್ಡಪ್ಪ ರಾಜಣ್ಣ ಪ್ರತಿಕ್ರಿಯಿಸಿದರು.

‘ಮಗಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ’ ಎಂದು ಮೃತ ಚೇತನಾ ರಾಜ್ ತಂದೆ ವರದರಾಜ್ ಹೇಳಿದರು. ಶ್ವಾಸಕೋಶಕ್ಕೆ ಕೊಬ್ಬಿನ ಅಂಶ ತುಂಬಿ ಉಸಿರಾಟದ ಸಮಸ್ಯೆ ಆಗಿದೆ. ಆಸ್ಪತ್ರೆಯಲ್ಲಿ ICU ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ. ಹಿಂದೆ ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳುವುದಾಗಿ ಕೇಳಿದ್ದಳು. ನಾವು ಬೇಡ ಎಂದಿದ್ದೆವು. ಇಂದು ನಮ್ಮ ಗಮನಕ್ಕೆ ತರದೇ ಸರ್ಜರಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ನಾವು ಬರುವ ಹೊತ್ತಿಗೆ ಮಗಳಿಗೆ ಸರ್ಜರಿ ನಡೆಯುತ್ತಿತ್ತು. ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ನನ್ನ ಪುತ್ರಿ ಮೃತಪಟ್ಟಿದ್ದಾಳೆ’ ಎಂದು ಅವರು ದೂರಿದರು.

Published On - 6:57 am, Tue, 17 May 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ