ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್

ಕೆಲವರು ಮಹಾಲಕ್ಷ್ಮೀ ಅವರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಶುಭಾಶಯ ತಿಳಿಸಿದ್ದಾರೆ. ಆದರೆ, ಒಂದು ವರ್ಗದ ಜನರು ಈ ವಿವಾಹದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
ಮಹಾಲಕ್ಷ್ಮಿ-ರವೀಂದರ್​ ಚಂದ್ರಶೇಖರನ್
TV9kannada Web Team

| Edited By: Rajesh Duggumane

Sep 01, 2022 | 9:38 PM

ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ, ನಿರೂಪಕಿ ಮಹಾಲಕ್ಷ್ಮೀ (Mahalakshmi ) ಅವರ ವಿವಾಹ ಇಂದು (ಸೆಪ್ಟೆಂಬರ್ 1) ನಡೆದಿದೆ. ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ (Ravindhar Chandrasekharan) ಅವರೊಂದಿಗೆ ಮಹಾಲಕ್ಷ್ಮೀ ಅವರ ಮದುವೆ ಕಾರ್ಯ ನಡೆದಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಮಹಾಲಕ್ಷ್ಮೀ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ನಟಿಯ ಆಯ್ಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ತಿರುಪತಿಯಲ್ಲಿ ಈ ಮದುವೆ ಕಾರ್ಯ ನಡೆದಿದೆ. ಇಬ್ಬರಿಗೂ ಇದು ಎರಡನೇ ಮದುವೆ. ‘ನನ್ನ ಜೀವನದಲ್ಲಿ ನಿಮ್ಮನ್ನು ಪಡೆದುಕೊಳ್ಳಲು ನಾನು ತುಂಬಾ ಅದೃಷ್ಟ ಮಾಡಿದ್ದೆ. ನನ್ನ ಜೀವನದಲ್ಲಿ ನೀವು ಪ್ರೀತಿ ತುಂಬಿದ್ದೀರಿ. ಲವ್​ ಯೂ’ ಎಂದು ಮಹಾಲಕ್ಷ್ಮೀ ಬರೆದುಕೊಂಡಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್ ಆಗುತ್ತಿದೆ.

ಕೆಲವರು ಮಹಾಲಕ್ಷ್ಮೀ ಅವರ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಶುಭಾಶಯ ತಿಳಿಸಿದ್ದಾರೆ. ಆದರೆ, ಒಂದು ವರ್ಗದ ಜನರು ಈ ವಿವಾಹದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ‘ಇದು ನಿಜವಾದ ಮದುವೆಯೋ ಅಥವಾ ಧಾರಾವಾಹಿಯ ಮದುವೆಯೋ’ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ‘ನನ್ನ ಬಳಿ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ’ ಎಂದು ಕಮೆಂಟ್ ಮಾಡಿದ್ದಾರೆ.

ರವೀಂದರ್‌ ಚಂದ್ರಶೇಖರನ್ ಹಾಗೂ ಮಹಾಲಕ್ಷ್ಮೀ ಒಂದೇ ಇಂಡಸ್ಟ್ರಿಯಲ್ಲಿ ಇದ್ದವರು. ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ರವೀಂದರ್ ನಿರ್ಮಾಣದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲೂ ಮಹಾಲಕ್ಷ್ಮೀ ಅಭಿನಯಿಸಿದ್ದರು. ಆ ಚಿತ್ರದಲ್ಲಿ ವಿದಾರ್ಥ್‌ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದರು.

ಇದನ್ನೂ ಓದಿ

ಮಹಾಲಕ್ಷ್ಮೀ ಅವರು ತಮಿಳು ಕಿರುತೆರೆ ಮಂದಿಗೆ ಚಿರಪರಿಚಿತರು. ಅವರು ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಸದ್ಯ ಅವರ ನಟನೆಯ ‘ಮಹಾರಸಿ’ ಹೆಸರಿನ ಧಾರಾವಾಹಿ ಪ್ರಸಾರ ಆಗುತ್ತಿದೆ. ರವೀಂದರ್‌ ಅವರು ತಮಿಳು ಚಿತ್ರರಂಗದಲ್ಲಿ ಫೇಮಸ್ ಆಗಿದ್ದಾರೆ. ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada