ಮನೆಯಲ್ಲೇ ಸಿಕ್ತು ಖ್ಯಾತ ಕಿರುತೆರೆ ನಟಿಯ ಶವ; ಬಾಯ್​ಫ್ರೆಂಡ್ ಮೇಲೆ ಮೂಡಿತು ಅನುಮಾನ

ಆರಂಭದಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲು ಪೊಲೀಸರು ನಿರ್ಧರಿಸಿದ್ದರು. ಆದರೆ, ರಶ್ಮಿರೇಖಾ ತಂದೆ ಮಾಡಿದ ಗಂಭೀರ ಆರೋಪದಿಂದ  ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ತನಿಖೆ ಆರಂಭಿಸಿದ್ದಾರೆ.

ಮನೆಯಲ್ಲೇ ಸಿಕ್ತು ಖ್ಯಾತ ಕಿರುತೆರೆ ನಟಿಯ ಶವ; ಬಾಯ್​ಫ್ರೆಂಡ್ ಮೇಲೆ ಮೂಡಿತು ಅನುಮಾನ
ರಶ್ಮಿರೇಖಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 21, 2022 | 10:04 AM

ಇತ್ತೀಚೆಗೆ ಕಿರುತೆರೆ ಲೋಕಕ್ಕೆ ಒಂದಾದ ಮೇಲೆ ಒಂದರಂತೆ ಆಘಾತ ಎದುರಾಗುತ್ತಲೇ ಇದೆ. ಕೆಲ ದಿನಗಳ ಹಿಂದೆ ಕೆಲವು ಬೆಂಗಾಲಿ ಧಾರಾವಾಹಿ ನಟಿಯರು ಮೃತಪಟ್ಟಿದ್ದರು. ಈಗ ಒಡಿಶಾದ ಖ್ಯಾತ ಕಿರುತೆರೆ ನಟಿ ರಶ್ಮಿರೇಖಾ ಓಜಾ (Rashmirekha Ojha) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅವರ ಶವ ಮನೆಯಲ್ಲಿ ಸಿಕ್ಕಿದೆ. ನಟಿಗೆ 23 ವರ್ಷ ವಯಸ್ಸಾಗಿತ್ತು. ಅವರ ಸಾವಿನ ಹಿಂದೆ ಬಾಯ್​ಫ್ರೆಡ್ ಸಂತೋಷ್ ಪಾತ್ರ (Santosh Patra) ಕೈವಾಡ ಇದೆ ಎಂದು ರಶ್ಮಿರೇಖಾ ತಂದೆ ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭುವನೇಶ್ವರದ ನಯಪಳ್ಳಿ ಭಾಗದಲ್ಲಿ ರಶ್ಮಿರೇಖಾ ಓಜಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಅಸಹಜ ಸಾವು ಎಂದು ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಆರಂಭದಲ್ಲಿ ಇದನ್ನು ಆತ್ಮಹತ್ಯೆ ಎಂದು ಪರಿಗಣಿಸಲು ಪೊಲೀಸರು ನಿರ್ಧರಿಸಿದ್ದರು. ಆದರೆ, ರಶ್ಮಿರೇಖಾ ತಂದೆ ಮಾಡಿದ ಗಂಭೀರ ಆರೋಪದಿಂದ  ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ತನಿಖೆ ಆರಂಭಿಸಿದ್ದಾರೆ.

ಸದ್ಯ ರಶ್ಮಿರೇಖಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರದಲ್ಲಿ ರಶ್ಮಿರೇಖಾ ಸಾವಿಗೆ ಕಾರಣ ಏನು ಎಂಬುದು ತಿಳಿದು ಬರಲಿದೆ. ‘ಪ್ರಾಥಮಿಕ ತನಿಖೆಯಿಂದ ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ. ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ನಟಿ ಬರೆದಿದ್ದಾರೆ. ಆದಾಗ್ಯೂ ನಾವು ಈ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ’ ಎಂದು ಭುವನೇಶ್ವರ ಡಿಸಿಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
Chetana Raj Death: ಫ್ಯಾಟ್​ ಸರ್ಜರಿಗೆ ಚೇತನಾ ರಾಜ್​ ಕಟ್ಟಿದ್ದ ಹಣ ಎಷ್ಟು? ಸತ್ತ ಮೇಲೂ ಹೆಚ್ಚಿತು ಆಸ್ಪತ್ರೆ ಬಿಲ್​
Image
ನಟಿ ಚೇತನಾ ರಾಜ್​ ನಿಧನ: ‘ತಾಳ್ಮೆ ಇಲ್ಲದವರು ಈ ಕ್ಷೇತ್ರಕ್ಕೆ ಬರಲೇಬೇಡಿ’; ರೂಪಿಕಾ ಕಿವಿಮಾತು
Image
ಫ್ಯಾಟ್​ ಕರಗಿಸಲು ಹೋಗಿ ಜೀವ ಕಳೆದುಕೊಂಡ ಕನ್ನಡದ ನಟಿ; 22ರ ಪ್ರಾಯದ ಪುತ್ರಿ ನಿಧನಕ್ಕೆ ಕಣ್ಣೀರಿಡುತ್ತಿರುವ ತಂದೆ
Image
Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು

ಇದನ್ನೂ ಓದಿ: Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು

‘ಈ ಸಾವಿನ ಹಿಂದೆ ನನ್ನ ಮಗಳ ಬಾಯ್​ಫ್ರೆಂಡ್ ಸಂತೋಷ್ ಪಾತ್ರ ಕೈವಾಡ ಇದೆ. ಶನಿವಾರ (ಜೂನ್ 18) ಬೆಳಗ್ಗೆ ನಾವು ಮಗಳಿಗೆ ಕರೆ ಮಾಡಿದ್ದೆವು. ಆದರೆ, ಅವಳು ಕರೆ ಸ್ವೀಕರಿಸಲಿಲ್ಲ. ಸಂತೋಷ್ ಈ ವಿಚಾರವನ್ನು ನಮಗೆ ಹೇಳಿದ. ಸಂತೋಷ್ ಹಾಗೂ ನನ್ನ ಮಗಳು ಇಬ್ಬರೂ ಒಂದೇ ಮನೆಯಲ್ಲಿ ವಾಸವಾಗಿದ್ದರು. ನಮಗೆ ಈ ಬಗ್ಗೆ ಮಾಹಿತಿಯೇ ಇರಲಿಲ್ಲ’ ಎಂದು ರಶ್ಮಿರೇಖಾ ತಂದೆ ಹೇಳಿದ್ದಾರೆ. ಅಲ್ಲದೆ, ಮಗಳ ಸಾವಿನ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:59 am, Tue, 21 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ