ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ

Serial Producer KS Ramji: ‘ರಾಮಚಾರಿ’, ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’ ಇನ್ನೂ ಹಲವು ಕನ್ನಡದ ಪ್ರಮುಖ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ಕೆಎಸ್ ರಾಮ್​ಜೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದಾರೆ. ಇದೀಗ ರಾಮ್​ ಜೀ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪ, ದೂರು ನೀಡಿದ ನಿರ್ಮಾಪಕ
Ks Ramji

Updated on: Feb 02, 2025 | 8:42 AM

ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್​ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ಹರಿದಾಡುತ್ತಿವೆ. ಇದೀಗ ನಿರ್ಮಾಪಕ ರಾಮ್​ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಯುವ ನಟಿಯೊಬ್ಬಾಕೆ ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ನಟಿಯ ಕುಮ್ಮಕ್ಕಿನಿಂದ ಈಗ ಸಾಮಾಜಿಕ ಜಾಲತಾಣದಲ್ಲಿ ರಾಮ್​ಜೀ ವಿರುದ್ಧ ಪೋಸ್ಟ್​ಗಳು ಹರಿದಾಡುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ‘ಎಕ್ಸ್​ಪೋಸಿಂಗ್ ಕೆಎಸ್ ರಾಮ್​ಜೀ’ ಹೆಸರಿನ ಪೇಜ್ ತೆರೆದು ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಲಾಗುತ್ತಿದೆ. ಧಾರಾವಾಹಿಯಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಯುವತಿಗೆ ಮೋಸ ಮಾಡಿದ್ದಾರೆ. ಆ ಯುವತಿ ತನಗಾದ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದು, ಕೆಲವು ಸುದ್ದಿ ವಾಹಿನಿಗಳ ಕದ ತಟ್ಟಿದ್ದರು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ ಆದರೆ, ಕೆ ಎಸ್‌ ರಾಮ್‌ಜಿ ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ’ ಎಂಬ ಪೋಸ್ಟ್​ಗಳನ್ನು ಫೇಸ್​ಬುಕ್ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ:‘ಆತನಿಂದ ಜೀವನ ನರಕವಾಯ್ತು’; ಧಾರಾವಾಹಿ ತೊರೆಯಲು ಕಾರಣ ತಿಳಿಸಿದ ನಯನಾ ನಾಗರಾಜ್

ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ನಿರ್ಮಾಪಕ ಕೆಎಸ್ ರಾಮ್​ಜೀ ಪೊಲೀಸರಿಗೆ ದೂರು ನೀಡಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸಬೇಕೆಂದು ರಾಮ್​ಜೀ ಮನವಿ ಮಾಡಿದ್ದಾರೆ. ‘ತಾವು ಯಾವ ಯುವತಿಗೂ ಲೈಂಗಿಕ ಕಿರುಕುಳ ನೀಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ ಎಂದು ರಾಮ್​ಜೀ ಹೇಳಿದ್ದಾರೆ.

ಕೆಎಸ್ ರಾಮ್​ಜೀ ಜನಪ್ರಿಯ ಕನ್ನಡ ಧಾರಾವಾಹಿಗಳಾದ ‘ಪುಟ್ಟಗೌರಿ ಮದುವೆ’, ‘ಗೀತಾ’, ‘ನಾಗಿಣಿ 2’, ‘ರಾಮಾಚಾರಿ’ ಇನ್ನೂ ಹಲವು ಧಾರಾವಾಹಿಗಳನ್ನು ನಿರ್ಮಾಣ, ನಿರ್ದೇಶನಗಳನ್ನು ಸಹ ಮಾಡಿದ್ದಾರೆ. ಧಾರಾವಾಹಿಯಲ್ಲಿ ನಟಿಸಲು ಅವಕಾಶ ಕೇಳಿಕೊಂಡು ಬಂದ ಯುವತಿಯೊಬ್ಬಾಕೆ, ಅವಕಾಶ ಸಿಗದ ಕಾರಣ ರಾಮ್​ಜೀ ವಿರುದ್ಧ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂಬ ಸುದ್ದಿಯೂ ಸಹ ಹರಿದಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us