AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಶಿರ್ ಶಾಸ್ತ್ರಿ – ಐಶ್ವರ್ಯಾ ಶಿಂಧೋಗಿ ಎಂಗೇಜ್‌ಮೆಂಟ್; ಕೊನೆಗೂ ಪ್ರೀತಿ ವಿಷಯ ರಿವೀಲ್ ಮಾಡಿದ ಜೋಡಿ

ಬಿಗ್ ಬಾಸ್ ಖ್ಯಾತಿಯ ಶಿಶಿರ್ ಶಾಸ್ತ್ರಿ ಹಾಗೂ ಐಶ್ವರ್ಯಾ ಶಿಂಧೋಗಿ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಶೋ ಮುಗಿದ ಮೇಲೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಪ್ರೀತಿಯನ್ನು ಅಧಿಕೃತಗೊಳಿಸಿದೆ. ಬ್ರೇಕಪ್ ಟ್ರೋಲ್‌ಗಳಿಗೆ ವಿಡಿಯೋ ಮೂಲಕ ಖಡಕ್ ಉತ್ತರ ನೀಡಿದ್ದು, ಅಭಿಮಾನಿಗಳು ಹಾಗೂ ಕಿರುತೆರೆ ಬಳಗ ಹೊಸ ಬಾಳಿಗೆ ಹೆಜ್ಜೆ ಇಡುತ್ತಿರುವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

ಶಿಶಿರ್ ಶಾಸ್ತ್ರಿ - ಐಶ್ವರ್ಯಾ ಶಿಂಧೋಗಿ ಎಂಗೇಜ್‌ಮೆಂಟ್; ಕೊನೆಗೂ ಪ್ರೀತಿ ವಿಷಯ ರಿವೀಲ್ ಮಾಡಿದ ಜೋಡಿ
ಶಿಶಿರ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Nov 05, 2026 | 7:13 AM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಮನೆಯಲ್ಲಿ ಬೆಳೆದ ಪ್ರೀತಿ
  • ರಿಯಲ್ ಲೈಫ್ ಜಂಟಿಯಾದ ಶಿಶಿರ್-ಐಶ್ವರ್ಯಾ
  • ಬ್ರೇಕಪ್ ಟ್ರೋಲ್‌ಗಳಿಗೆ ಖಡಕ್ ಉತ್ತರ

ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮನೆಯಲ್ಲಿ ಒಂದಾದ ಮತ್ತೊಂದು ಜೋಡಿ ಈಗ ಹೊಸ ಬಾಳಿಗೆ ಕಾಲಿಡಲು ಸಂಪೂರ್ಣವಾಗಿ ಸಜ್ಜಾಗಿದೆ. ಹೌದು, ನಟ ಶಿಶಿರ್ ಶಾಸ್ತ್ರಿ ಹಾಗೂ ನಟಿ ಐಶ್ವರ್ಯಾ ಶಿಂಧೋಗಿ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಕಿರುತೆರೆ ಅಂಗಳದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ.

ಬಿಗ್ ಬಾಸ್ ಮನೆಯಲ್ಲಾದ ಪರಿಚಯ

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ವೇಳೆ ಇವರಿಬ್ಬರ ನಡುವೆ ಮೊದಲ ಬಾರಿಗೆ ಪರಿಚಯವಾಗಿತ್ತು. ಶೋನಲ್ಲಿ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಶೋ ಮುಗಿದ ನಂತರವೂ ಇವರ ಬಾಂಧವ್ಯ ಮುಂದುವರಿದು, ಕಾಲಕ್ರಮೇಣ ಗಾಢವಾದ ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಕಳೆದ ಕೆಲವು ಸಮಯದಿಂದ ಈ ಜೋಡಿ ವಿವಿಧ ಸಮಾರಂಭಗಳಲ್ಲಿ, ಪ್ರವಾಸಗಳಲ್ಲಿ ಸದಾ ಒಟ್ಟಿಗೆ ಸುತ್ತಾಡುತ್ತಾ ಕಾಣಿಸಿಕೊಳ್ಳುತ್ತಿತ್ತು. ಇದರಿಂದಾಗಿ ಇವರ ನಡುವೆ ಪ್ರೀತಿ ಇದೆ ಎಂಬ ವದಂತಿಗಳು ಬಲವಾಗಿದ್ದರೂ, ಇಬ್ಬರೂ ಈ ವಿಷಯವನ್ನು ಎಲ್ಲೂ ಅಧಿಕೃತವಾಗಿ ಬಿಟ್ಟುಕೊಟ್ಟಿರಲಿಲ್ಲ.

ಶೀಘ್ರದಲ್ಲೇ ಶುಭಕಾರ್ಯ

ಇದೀಗ ತಮ್ಮ ನಡುವಿನ ಪ್ರೀತಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ಈ ಮುದ್ದಾದ ಜೋಡಿ, ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ ಅಭಿಮಾನಿಗಳಿಗೆ ಬಿಗ್ ಸರ್‌ಪ್ರೈಸ್ ನೀಡಿದ್ದಾರೆ. ಇಬ್ಬರ ಕುಟುಂಬದ ಹಿರಿಯರು ಹಾಗೂ ಆಪ್ತ ಗೆಳೆಯರ ಸಮ್ಮುಖದಲ್ಲಿ ಈ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಲಿದೆ. ಇವರಿಬ್ಬರೂ ಬೇರೆ ಆಗ್ತಾರೆ ಎಂದೆಲ್ಲ ಟ್ರೋಲ್ ಮಾಡಿದವರಿಗೂ ಹಂಚಿಕೊಮಡ ವಿಡಿಯೋದಲ್ಲಿ ಖಡಕ್ ಆಗಿ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್

ಕಿರುತೆರೆಯಲ್ಲಿ ತಮ್ಮದೇ ಆದ ಜನಪ್ರಿಯತೆ ಗಳಿಸಿರುವ ಈ ಜೋಡಿ ರಿಯಲ್ ಲೈಫ್‌ನಲ್ಲೂ ಒಂದಾಗುತ್ತಿರುವುದಕ್ಕೆ ಅಭಿಮಾನಿಗಳು ಹಾಗೂ ಕಿರುತೆರೆ ಬಳಗ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಮಳೆಯಬ್ಬರಕ್ಕೆ ಕೆರೆಯಂತಾದ ಎಲೆಕ್ಟ್ರಾನಿಕ್ ಸಿಟಿ ರಸ್ತೆಗಳು
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ನಾಲ್ವರ ಸಾವು, ಮಗು ಬಚಾವ್
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ