‘ಒರಿಜಿನಲ್ ಗ್ಯಾಂಗ್​ಸ್ಟರ್​’ ಲುಕ್​ನಲ್ಲಿ ಎಂಟ್ರಿ ಕೊಟ್ಟ ಶಿವಣ್ಣ; ‘ಡಿಕೆಡಿ’ ವೇದಿಕೆಗೆ ಭರ್ಜರಿ ಎನರ್ಜಿ

ಈ ವಾರ ನಡೆಯೋದು ಕೋರಿಯೋಗ್ರಾಫರ್ಸ್ ರೌಂಡ್. ಕೋರಿಯೋಗ್ರಾಫರ್​ಗಳು ಕೂಡ ಡ್ಯಾನ್ಸ್ ಮಾಡಲಿದ್ದಾರೆ. ಈ ಎಪಿಸೋಡ್​ಗೆ ಶಿವಣ್ಣ ಸಿಗಾರ್ ಹಚ್ಚಿ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಅವರ ಎಂಟ್ರಿ ಸಾಕಷ್ಟು ಗಮನ ಸೆಳೆದಿದೆ. ಈ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಈ ವಿಡಿಯೋ ವೈರಲ್ ಆಗುತ್ತಿದೆ.

‘ಒರಿಜಿನಲ್ ಗ್ಯಾಂಗ್​ಸ್ಟರ್​’ ಲುಕ್​ನಲ್ಲಿ ಎಂಟ್ರಿ ಕೊಟ್ಟ ಶಿವಣ್ಣ; ‘ಡಿಕೆಡಿ’ ವೇದಿಕೆಗೆ ಭರ್ಜರಿ ಎನರ್ಜಿ
ಶಿವಣ್ಣ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Aug 18, 2023 | 12:39 PM

ಶಿವರಾಜ್​ಕುಮಾರ್ ಅವರು ಎಂಟ್ರಿ ಕೊಟ್ಟರೆ ಎನರ್ಜಿ ಸೃಷ್ಟಿ ಆಗುತ್ತದೆ. ಅವರು ಯಾವುದೇ ವೇದಿಕೆ ಏರಿದರೂ ಫ್ಯಾನ್ಸ್ ಶಿಳ್ಳೆ ಹೊಡೆಯುತ್ತಾರೆ. ಸದ್ಯ ಶಿವರಾಜ್​ಕುಮಾರ್ (Shivarajkumar) ಅವರು ಸಿನಿಮಾ ಜೊತೆಗೆ ಕಿರುತೆರೆಯಲ್ಲೂ ಬ್ಯುಸಿ ಆಗಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7’ರಲ್ಲಿ (DKD 7) ಜಡ್ಜ್ ಸ್ಥಾನದಲ್ಲಿ ಅವರು ಕುಳಿತಿದ್ದಾರೆ. ಸ್ಪರ್ಧಿಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಈ ಬಾರಿ ಅವರ ಎಂಟ್ರಿ ಸಾಕಷ್ಟು ಗಮನ ಸೆಳೆದಿದೆ. ಈ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಈಗಾಗಲೇ ಆರು ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ವೇದಿಕೆ ಮೂಲಕ ಅನೇಕ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಜೊತೆಗೆ ಶಿವರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ಕಲಾವಿದರ ಮಾರ್ಗದರ್ಶನ ಸಿಕ್ಕಿದೆ. ಶಿವರಾಜ್​ಕುಮಾರ್ ಅವರು ಜಡ್ಜ್​ ಸ್ಥಾನದಲ್ಲಿ ಕುಳಿತು ಸ್ಪರ್ಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ಈ ವಾರದ ಎಪಿಸೋಡ್ ಸಖತ್ ವಿಶೇಷವಾಗಿರಲಿದೆ.

ಈ ವಾರ ನಡೆಯೋದು ಕೋರಿಯೋಗ್ರಾಫರ್ಸ್ ರೌಂಡ್. ಕೋರಿಯೋಗ್ರಾಫರ್​ಗಳು ಕೂಡ ಡ್ಯಾನ್ಸ್ ಮಾಡಲಿದ್ದಾರೆ. ಈ ಎಪಿಸೋಡ್​ಗೆ ಶಿವಣ್ಣ ಸಿಗಾರ್ ಹಚ್ಚಿ ಎಂಟ್ರಿ ಕೊಟ್ಟಿದ್ದಾರೆ. ಅವರ ಆಗಮನಕ್ಕೆ ಶಿಳ್ಳೆ ಬಿದ್ದಿದೆ. ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾ ಕಡೆಯಿಂದ ಟೀಸರ್ ಒಂದನ್ನು ರಿಲೀಸ್ ಮಾಡಲಾಗಿತ್ತು. ಈ ಟೀಸರ್​ನಲ್ಲಿ ಶಿವರಾಜ್​ಕುಮಾರ್ ಅವರು ಸಿಗಾರ್ ಹಚ್ಚಿ ಗಮನ ಸೆಳೆದಿದ್ದರು. ‘ಜೈಲರ್’ ಚಿತ್ರದಲ್ಲೂ ಅವರಿಗೆ ಇದೇ ಮಾದರಿಯ ಎಂಟ್ರಿ ಇದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 7’ ವೇದಿಕೆ ಮೇಲೆ ಶಿವಣ್ಣ ಇದೇ ಅವತಾರದಲ್ಲಿ ಕಾಣಿಸಿಕೊಂಡಿದ್ದು ನೋಡಿ ವೀಕ್ಷಕರು ಖುಷಿಪಟ್ಟಿದ್ದಾರೆ.

ಈ ಬಾರಿಯ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 7’ ಎಪಿಸೋಡ್ ರಂಗು ಮತ್ತಷ್ಟು ಹೆಚ್ಚಲಿದೆ. ಇದಕ್ಕೆ ಕಾರಣ ರಾಜ್​ ಬಿ. ಶೆಟ್ಟಿ ಹಾಗೂ ಧ್ರುವ ಸರ್ಜಾ. ಇವರಿಬ್ಬರು ಅತಿಥಿಯಾಗಿ ಬಂದಿದ್ದಾರೆ. ರಾಜ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಟೋಬಿ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇದರ ಪ್ರಮೋಷನ್​ನಲ್ಲಿ ಅವರು ಭಾಗಿ ಆಗುತ್ತಿದ್ದಾರೆ. ಭರ್ಜರಿ ಡ್ಯಾನ್ಸ್ ನೋಡಿ ಎಲ್ಲರೂ ಖುಷಿಪಟ್ಟಿದ್ದಾರೆ. ಚಿನ್ನಿ ಮಾಸ್ಟರ್​, ರಕ್ಷಿತಾ ಮೊದಲಾದವರು ಕೂಡ ಜಡ್ಜ್ ಸ್ಥಾನದಲ್ಲಿ ಇದ್ದಾರೆ. ಇದರ ಫುಲ್ ಎಪಿಸೋಡ್​ ನೋಡಲು ವೀಕ್ಷಕರು ಕಾದಿದ್ದಾರೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವರಾಜ್​ಕುಮಾರ್

ರಜನಿಕಾಂತ್ ಜೊತೆ ಶಿವರಾಜ್​ಕುಮಾರ್ ಕೂಡ ನಟಿಸಿರುವ ‘ಜೈಲರ್’ ಸಿನಿಮಾ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸ್​ನಲ್ಲಿ 450 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರ ಜೊತೆಗೆ ಅವರು ‘ಘೋಸ್ಟ್’, ‘ಭೈರತಿ ರಣಗಲ್’ ಮೊದಲಾದ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ