AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾನ್ ಇಂಡಿಯಾ ಚಿತ್ರ ಒಪ್ಪಿಕೊಂಡ ಶಿವರಾಜ್​ಕುಮಾರ್? ಧನುಷ್ ಜತೆ ಕೈ ಜೋಡಿಸ್ತಾರೆ ಹ್ಯಾಟ್ರಿಕ್ ಹೀರೋ

‘ಜೈಲರ್‌' ಚಿತ್ರದಲ್ಲಿ ಶಿವಣ್ಣ ಮಾಡುತ್ತಿರುವ ಪಾತ್ರ ಹೇಗಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಹೀಗಿರುವಾಗಲೇ ಧನುಷ್ ಚಿತ್ರದಲ್ಲಿ ಅವರು ನಟಿಸಲಿದ್ದಾರೆ ಎಂಬ ಸುದ್ದಿ ಸಾಕಷ್ಟು ಚರ್ಚೆ ಆಗುತ್ತಿದೆ.

ಪ್ಯಾನ್ ಇಂಡಿಯಾ ಚಿತ್ರ ಒಪ್ಪಿಕೊಂಡ ಶಿವರಾಜ್​ಕುಮಾರ್? ಧನುಷ್ ಜತೆ ಕೈ ಜೋಡಿಸ್ತಾರೆ ಹ್ಯಾಟ್ರಿಕ್ ಹೀರೋ
ಶಿವಣ್ಣ-ಧನುಷ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 12, 2022 | 7:54 PM

Share

ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸೋ ವಿಚಾರದಲ್ಲಿ ಶಿವರಾಜ್​ಕುಮಾರ್ (Shivarajkumar) ಅವರು ಎಲ್ಲರಿಗೂ ಮಾದರಿ. ಅವರು ವೇಗವಾಗಿ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುತ್ತಾರೆ. ಶಿವಣ್ಣ ಹಲವು ಚಿತ್ರಗಳನ್ನು ಒಪ್ಪಿಕೊಂಡು, ಆ ಸಿನಿಮಾಗಳ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ. ಈಗ ಶಿವರಾಜ್​ಕುಮಾರ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ಧನುಷ್ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದು, ಶಿವಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರು ನಟಿಸುತ್ತಿರುವ ವಿಚಾರ ಇತ್ತೀಚೆಗೆ ಘೋಷಣೆ ಆಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ‘ಜೈಲರ್‌’ ಚಿತ್ರದಲ್ಲಿ ಶಿವಣ್ಣ ಮಾಡುತ್ತಿರುವ ಪಾತ್ರ ಹೇಗಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಹೀಗಿರುವಾಗಲೇ ಧನುಷ್ ಚಿತ್ರದಲ್ಲಿ ಅವರು ನಟಿಸಲಿದ್ದಾರೆ ಎಂಬ ಸುದ್ದಿ ಸಾಕಷ್ಟು ಚರ್ಚೆ ಆಗುತ್ತಿದೆ.

ಧನುಷ್‌ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ತಿರುಚಿಟ್ರಾಂಬಲಂ’ ಹಾಗೂ ‘ನಾನೇ ವರುವೇನ್‌’ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಗೆದ್ದವು. ಈಗ ‘ಕ್ಯಾಪ್ಟನ್ ಮಿಲ್ಲರ್‌’ ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಅರುಣ್ ಮಹೇಶ್ವರನ್ ನಿರ್ದೇಶನ ಇರಲಿದ್ದು, ಶಿವಣ್ಣ ಅವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
‘ಓಂ’ ಸಿನಿಮಾ ಸ್ಟೈಲ್​ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಗೆ ಶಿವರಾಜ್​ಕುಮಾರ್ ಎಂಟ್ರಿ; ಇಲ್ಲಿದೆ ವಿಡಿಯೋ
Image
‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
Image
ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
Image
Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

ಸ್ವತಂತ್ರ ಪೂರ್ವದ ಕಥೆ ಈ ಚಿತ್ರದಲ್ಲಿ ಇರಲಿದೆ. ಶಿವರಾಜ್​ಕುಮಾರ್ ಸಿನಿಮಾಗೆ ಯಾವಾಗ ಗ್ರೀನ್ ಸಿಗ್ನಲ್ ನೀಡ್ತಾರೆ, ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ:Upendra: ಪ್ಯಾನ್​ ಇಂಡಿಯಾ ಚಿತ್ರದಲ್ಲಿ ಶಿವಣ್ಣ-ಉಪೇಂದ್ರ; ಬಿಗ್​ ನ್ಯೂ​ಸ್​ ನೀಡಿದ ‘45’ ಚಿತ್ರತಂಡ

ಶಿವರಾಜ್​ಕುಮಾರ್ ನಟನೆಯ ‘ಬೈರಾಗಿ’ ಚಿತ್ರ ಇತ್ತೀಚೆಗೆ ತೆರೆಗೆ ಬಂತು. ಸದ್ಯ, ‘ವೇದ’, ‘ಘೋಸ್ಟ್’ ಚಿತ್ರಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ಯೋಗರಾಜ್ ಭಟ್ ಜತೆ ಶಿವಣ್ಣ ಕೈ ಜೋಡಿಸಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ‘45′ ಚಿತ್ರದಲ್ಲಿ ಶಿವರಾಜ್​ಕುಮಾರ್ ಜತೆ ಉಪೇಂದ್ರ ಕೂಡ ನಟಿಸಲಿದ್ದಾರೆ. ‘ಜೈಲರ್’ ಸಿನಿಮಾ ಶೂಟಿಂಗ್ ಇನ್ನಷ್ಟೇ ಆರಂಭ ಆಗಬೇಕಿದೆ.