ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ, ಬರುತ್ತಿರುವವರು ಯಾರು?

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದಿರುವ ಹನುಮಂತು ಚೆನ್ನಾಗಿ ಆಡುತ್ತಿದ್ದಾರೆ. ಇದೀಗ ವೈಲ್ಡ್ ಕಾರ್ಡ್ ಮೂಲಕ ಇನ್ನೂ ಇಬ್ಬರು ಆಟಗಾರರು ಬರುತ್ತಿದ್ದಾರೆ. ಯಾರದು?

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ, ಬರುತ್ತಿರುವವರು ಯಾರು?
Follow us
ಮಂಜುನಾಥ ಸಿ.
|

Updated on: Nov 17, 2024 | 8:56 AM

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದ ಹನುಮಂತು ಒಳ್ಳೆ ಆಟ ಆಡುತ್ತಿದ್ದಾರೆ. ಲಾಯರ್ ಜಗದೀಶ್ ಮತ್ತು ರಂಜಿತ್ ನಿಯಮ ಮುರಿದು ಹೊರ ಹೋದ ಕಾರಣಕ್ಕೆ ವೈಲ್ಡ್ ಕಾರ್ಡ್ ಮೂಲಕ ಹನುಮಂತು ಅನ್ನು ಒಳಗೆ ಕರೆದುಕೊಳ್ಳಲಾಗಿತ್ತು. ಆದರೆ ಈಗ ಮತ್ತೆ ಇಬ್ಬರು ಸೆಲೆಬ್ರಿಟಿಗಳು ವೈಲ್ಡ್ ಕಾರ್ಡ್ ಮೂಲಕ ಬಿಗ್​ಬಾಸ್ ಮನೆ ಒಳಗೆ ಪ್ರವೇಶ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಶೋಭಾ ಶೆಟ್ಟಿ ಮತ್ತು ರಂಜಿತ್ ಅವರುಗಳು ಈ ಬಾರಿ ವೈಲ್ಡ್ ಕಾರ್ಡ್​ ಮೂಲಕ ಬಿಗ್​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಂದಹಾಗೆ ಈ ಶೋಭಾ ಶೆಟ್ಟಿಗೆ ಬಿಗ್​ಬಾಸ್ ಹೊಸದೇನೂ ಅಲ್ಲ. ಈ ಹಿಂದೆ ತೆಲುಗು ಬಿಗ್​ಬಾಸ್ ಸೀಸನ್ 07 ರಲ್ಲಿ ಶೋಭಾ ಶೆಟ್ಟಿ ಭಾಗಿಯಾಗಿದ್ದರು. ಅಲ್ಲಿ ತಮ್ಮ ಜಗಳ, ಕಿರಿಕಿರಿಗಳಿಂದಾಗಿಯೇ ಜನಪ್ರಿಯ ಆಗಿದ್ದರು ಶೋಭಾ ಶೆಟ್ಟಿ.

ಶೋಭಾ ಶೆಟ್ಟಿ ನಟಿಯಾಗಿದ್ದು ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅದರ ಜೊತೆಗೆ ವ್ಲಾಗರ್ ಸಹ ಆಗಿರುವ ಶೋಭಾ ಶೆಟ್ಟಿ ಯೂಟ್ಯೂಬ್ ಚಾನೆಲ್ ಹೊಂದಿದ್ದು ತಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ವಿಡಿಯೋ ಮಾಡಿ ವ್ಲಾಗ್ ರೂಪದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇನ್ನು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡುತ್ತಿರುವ ರಂಜಿತ್ ಸಹ ನಟರಾಗಿದ್ದು, ಕಿರುತೆರೆ ಧಾರಾವಾಹಿಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಿಗ್​ಬಾಸ್ ವೇದಿಕೆ ಮೇಲೆ ಹಳೆ ವರ್ತೂರು ಸಂತೋಷ್ ಅನ್ನು ನೆನಪಿಸಿಕೊಂಡ ಸುದೀಪ್

ಈಗಾಗಲೇ ಈ ಸೀಸನ್​ನಲ್ಲಿ ಹನುಮಂತು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಮನೆ ಪ್ರವೇಶಿಸಿದ್ದಾರೆ. ಚೆನ್ನಾಗಿ ಆಟ ಆಡುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಅವಿನಾಶ್ ಮತ್ತು ಪವಿ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದರು. ಇಬ್ಬರೂ ಆರಂಭದಲ್ಲಿ ಭರವಸೆ ಮೂಡಿಸಿದ್ದರಾದರೂ ಅಷ್ಟೇನೂ ಚೆನ್ನಾಗಿ ಆಡಲಿಲ್ಲ. ಇಬ್ಬರೂ ಸಹ ಬಂದಷ್ಟೆ ವೇಗವಾಗಿ ಮನೆಯಿಂದ ಎಲಿಮಿನೇಟ್ ಆದರು. ಈಗ ಬರಲಿರುವ ಶೋಭಾ ಶೆಟ್ಟಿ ಹಾಗೂ ರಂಜಿತ್ ಕತೆ ಏನಾಗಲಿದೆ ಕಾದು ನೋಡಬೇಕಿದೆ.

ಶೋಭಾ ಶೆಟ್ಟಿ ಹಾಗೂ ರಂಜಿತ್ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಲಿದ್ದಾರೆ ಎಂಬುದು ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಮಾತ್ರವೇ ಹರಿದಾಡುತ್ತಿರುವ ಸುದ್ದಿ ಆಗಿದ್ದು, ಕಲರ್ಸ್ ವಾಹಿನಿ ಈ ಬಗ್ಗೆ ಯಾವುದೇ ಹೇಳಿಕೆ ಅಥವಾ ಪ್ರೋಮೋ ಬಿಡುಗಡೆ ಮಾಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ