ಬಿಗ್​ಬಾಸ್​ನಿಂದ ಬಂದು ಕಿಚ್ಚ ಸುದೀಪ್​ ಉದ್ದೇಶಿಸಿ ಪೋಸ್ಟ್ ಹಾಕಿದ ಶೋಭಾ ಶೆಟ್ಟಿ

‘ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ’ ಎಂದು ಶೋಭಾ ಶೆಟ್ಟಿ ಪೋಸ್ಟ್ ಆರಂಭಿಸಿದ್ದಾರೆ.

ಬಿಗ್​ಬಾಸ್​ನಿಂದ ಬಂದು ಕಿಚ್ಚ ಸುದೀಪ್​ ಉದ್ದೇಶಿಸಿ ಪೋಸ್ಟ್ ಹಾಕಿದ ಶೋಭಾ ಶೆಟ್ಟಿ
ಶೋಭಾ-ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on:Dec 03, 2024 | 9:25 AM

ಶೋಭಾ ಶೆಟ್ಟಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಎಲಿಮಿನೇಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಅವರು ಕೇವಲ ಎರಡು ವಾರಕ್ಕೆ ಹೊರಕ್ಕೆ ಬಂದಿದ್ದಾರೆ. ಇದಕ್ಕಾಗಿ ಅವರು ಅನಾರೋಗ್ಯದ ಕಾರಣ ನೀಡುತ್ತಿದ್ದಾರೆ. ಆಡಬೇಕು ಎಂದುಕೊಂಡರೂ ಆರೋಗ್ಯ ಸಹಕರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಬಿಗ್ ಬಾಸ್​ನಿಂದ ಹೊರ ಬಂದ ಅವರು ಸುದೀರ್ಘ ಪೋಸ್ಟ್ ಹಾಕಿದ್ದಾರೆ. ಸುದೀಪ್​ಗೆ ಧನ್ಯವಾದ ಹಾಕಿದ್ದಾರೆ.

‘ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ. ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ. ಜೀವನದ ಜವಬ್ದಾರಿಗಳಿಗೆ ಆರೋಗ್ಯವನ್ನು ಕಾಪಾಡಿಕೊಂಡು ಮುನ್ನಡೆಯುವ ಸಲುವಾಗಿ ನಾನು ಈ ನಿರ್ಧಾರ ಮಾಡಿರುವೆ’ ಎಂದು ಪತ್ರ ಆರಂಭಿಸಿದ್ದಾರೆ ಶೋಭಾ ಶೆಟ್ಟಿ.

‘ಇದೆಲ್ಲದರ ಮಧ್ಯೆ ನೀವು ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ. ತಿಳಿದೋ ತಿಳಿಯದೆಯೋ ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಜನರಿಗೆ, ಕಲರ್ಸ್ ಕನ್ನಡ ತಂಡಕ್ಕೆ ಹಾಗು ನಿನ್ನ ಪ್ರೀತಿಯ ಕಿಚ್ಚ ಸುದೀಪ್ ಸರ್ ನಿಮಗೆ ಧನ್ಯವಾದಗಳು’ ಎಂದಿದ್ದಾರೆ ಅವರು.

‘ಹೊಸ ಹುರುಪಿನೊಂದಿಗೆ ನಿಮ್ಮನ್ನು ರಂಜಿಸಲು, ನಿಮ್ಮ ಪ್ರೀತಿಯನ್ನು ಮತ್ತೆ ಪಡೆಯಲು ಮತ್ತೊಂದು ರೂಪದಲ್ಲಿ ಮತ್ತೆ ನಿಮ್ಮ ಮುಂದೆ ಖಂಡಿತಾ ನಾನು ಬರುವೆ’ ಎಂದು ಶೋಭಾ ಅವರು ಭರವಸೆ ನೀಡಿದ್ದಾರೆ. ಈ ಪೋಸ್ಟ್​ಗೆ ‘ಪ್ರಯಾಣವು ಅನಿರೀಕ್ಷಿತ ತಿರುವು ಪಡೆಯಿತು. ಆದರೆ ಎಲ್ಲದಕ್ಕೂ ಒಂದು ಕಾರಣವಿದೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನನ್ನನ್ನು ಬಿಟ್ಟುಬಿಡಿ ಎಂದು ಕೈ ಮುಗಿದು ಕೇಳಿಕೊಂಡ ಶೋಭಾ ಶೆಟ್ಟಿ

ಈ ಪೋಸ್ಟ್​ಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ನಿಮಗೋಸ್ಕರ ಕನ್ನಡ ಬಿಗ್ ಬಾಸ್ ನೋಡುತ್ತಾ ಇದ್ದೆ ಶೋಭಾ ಅವರೇ. ಆರೋಗ್ಯದ ಬಗ್ಗೆ ಎಚ್ಚರಿಕೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಆಟಕ್ಕಿಂತ ಆರೋಗ್ಯ ಮುಖ್ಯ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Tue, 3 December 24

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ