AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ.

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​
ಶುಭಾ ಪೂಂಜಾ
TV9 Web
| Updated By: ಮದನ್​ ಕುಮಾರ್​|

Updated on: Jul 24, 2021 | 7:25 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಸಮೀಪವಾಗಿದೆ. ಹೀಗಾಗಿ, ಮನೆಯಲ್ಲಿ ಕಠಿಣ ಸ್ಪರ್ಧೆ ಏರ್ಪಡುತ್ತಿದೆ. ಫಿನಾಲೆಗೆ ಬರಬೇಕು ಎನ್ನುವ ಕಾರಣಕ್ಕೆ ಸ್ಪರ್ಧಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ಇದರ ಜತೆಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸಾಕಷ್ಟು ಅಚ್ಚರಿಗಳು ಎದುರಾಗುತ್ತಿವೆ. ಈಗ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕಿಂಗ್​ ಸುದ್ದಿಯೊಂದು ಸಿಕ್ಕಿದೆ.

ಶುಭಾ ಪೂಂಜಾ ಬಂದ ದಿನದಿಂದಲೂ ತಮ್ಮದೇ ಸ್ಟೈಲ್​ನಲ್ಲಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಕೆಲವೊಮ್ಮೆ ಅವರು ಮಕ್ಕಳಂತೆ ವರ್ತಿಸಿದ್ದೂ ಇದೆ. ಎಲ್ಲಕ್ಕಿಂತ ಹೆಚ್ಚಾಗಿ ದೊಡ್ಮನೆಯಲ್ಲಿ ಅವರಿಗೆ ವೈರಿಗಳಿಲ್ಲ. ಎಲ್ಲರ ಜತೆಯೂ ಅವರು ಹೊಂದಿಕೊಂಡು ಹೋಗುತ್ತಿದ್ದಾರೆ. ಆದರೆ, ಫಿನಾಲೆ ಸಮೀಪವಾಗುತ್ತಿದ್ದಂತೆಯೇ ಇದು ಸಹಾಯಕ್ಕೆ ಬರುತ್ತಿಲ್ಲ. ಅವರು ಟಾಸ್ಕ್​ನಲ್ಲಿ ಡಲ್​ ಆಗಿರುವುದು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ‘ನಾನಾ ನೀನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಅಡಿಯಲ್ಲಿ ಸಾಕಷ್ಟು ಟಾಸ್ಕ್​ಗಳನ್ನು ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕಗಳಿಸಿದ ಐದು ಸದಸ್ಯರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾದರು. ದಿವ್ಯಾ ಉರುಡುಗ ಕ್ಯಾಪ್ಟನ್​ ಕೂಡ ಆದರು.

ಆದರೆ, ಶುಭಾ ಒಟ್ಟಾರೆ ಟಾಸ್ಕ್​ನಲ್ಲಿ ಕೊನೆಯಲ್ಲಿ ಉಳಿದುಕೊಂಡಿದ್ದಾರೆ. ಹೀಗಾಗಿ, ಬಿಗ್​ ಬಾಸ್​ ಈ ವಿಚಾರದಲ್ಲಿ ಶುಭಾಗೆ ಶಾಕ್​ ನೀಡಿದ್ದಾರೆ ಬಿಗ್​ ಬಾಸ್. ‘ಶುಭಾ ನೀವು ಕಡಿಮೆ ಅಂಕ ಪಡೆದು ಕೊನೆಯ ಸ್ಥಾನದಲ್ಲಿದ್ದೀರಿ. ಹೀಗಾಗಿ, ಈ ವಾರ ಎಲಿಮಿನೇಷ್​ನಿಂದ ಸೇವ್​ ಆದರೂ ನೀವು ಕಡಿಮೆ ಅಂಕ ಹೊಂದಿದ್ದರಿಂದ ಮುಂದಿನ ವಾರಕ್ಕೆ ನೇರವಾಗಿ ನಾಮಿನೇಟ್  ಆಗುತ್ತೀರಿ’ ಎಂದರು ಬಿಗ್​ ಬಾಸ್​.

ಕಳೆದ ವಾರ ದಿವ್ಯಾ ಉರುಡುಗ ಕೈಗೆ ಪೆಟ್ಟಾಗಿತ್ತು. ಹೀಗಾಗಿ, ಈ ವಾರ ಅವರಿಗೆ ಆಡೋದು ಬಹಳ ಕಷ್ಟವಾಗಿತ್ತು. ಆದರೆ, ಇದೆಲ್ಲವನ್ನೂ ಮೀರಿ ದಿವ್ಯಾ ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಸ್ಟ್ರಾಂಗ್​ ಕಂಟೆಸ್ಟೆಂಟ್​ಗಳ ಎದುರು ಅವರು ಗೆದ್ದು ಕ್ಯಾಪ್ಟನ್​ ಆಗಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ