ನಿದ್ರಿಸುವುದಕ್ಕೂ ಮೊದಲು ಒಂದು ಔಷಧ ತೆಗೆದುಕೊಂಡಿದ್ದ ಸಿದ್ಧಾರ್ಥ್ ಶುಕ್ಲಾ; ಅನುಮಾನ ಹುಟ್ಟಿಸಿದ ನಟನ ಸಾವು
ಸಿದ್ಧಾರ್ಥ್ ಶುಕ್ಲಾ ಇಂದು (ಸೆಪ್ಟೆಂಬರ್ 2) ಮುಂಜಾನೆ 10:30ಕ್ಕೆ ಮೃತಪಟ್ಟಿದ್ದಾರೆ. ಕೂಪರ್ ಆಸ್ಪತ್ರೆಯವರು ನಟನ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ಹಿಂದಿ ಬಿಗ್ ಬಾಸ್ 13ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದಾರೆ ಎಂಬ ಸುದ್ದಿಯನ್ನು ಅಭಿಮಾನಿಗಳ ಬಳಿ ನಂಬಲು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಅವರ ಸಾವಿನ ವಿಚಾರವಾಗಿ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಸಾಕಷ್ಟು ವರದಿಗಳು ಕೂಡ ಹರಿದಾಡಿವೆ.
ಸಿದ್ಧಾರ್ಥ್ ಶುಕ್ಲಾ ಇಂದು (ಸೆಪ್ಟೆಂಬರ್ 2) ಮುಂಜಾನೆ 10:30ಕ್ಕೆ ಮೃತಪಟ್ಟಿದ್ದಾರೆ. ಕೂಪರ್ ಆಸ್ಪತ್ರೆಯವರು ನಟನ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಸಿದ್ಧಾರ್ಥ್ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ, ಸಿದ್ಧಾರ್ಥ್ ಫಿಟ್ನೆಸ್ಗೆ ಹೆಚ್ಚು ಒತ್ತು ನೀಡುತ್ತಿದ್ದರು. ನಿತ್ಯ ಜಿಮ್ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದರು. ಹೀಗಿದ್ದರೂ ಅವರು ಹೃದಯಾಘಾತದಿಂದ ಮೃತಪಟ್ಟಿರುವುದು ಅಭಿಮಾನಿಗಳ ಪಾಲಿಗೆ ಶಾಕಿಂಗ್ ಸಂಗತಿ.
ಸಿದ್ಧಾರ್ಥ್ ರಾತ್ರಿ ಮಲಗುವುದಕ್ಕೂ ಮೊದಲು ಔಷಧ ಒಂದನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ. ಆದರೆ, ಮುಂಜಾನೆ ಅವರು ಏಳಲೇ ಇಲ್ಲ. ಅವರು ನಿಜಕ್ಕೂ ಔಷಧ ತೆಗೆದುಕೊಂಡಿದ್ದರಾ? ಹೌದು ಎಂದಾದರೆ ಆ ಔಷಧ ಯಾವುದು? ಅದಕ್ಕೂ ಹೃದಯಾಘಾತಕ್ಕೂ ಏನಾದರೂ ಸಂಬಂಧವಿದೆಯಾ ಎಂಬಿತ್ಯಾದಿ ಪ್ರಶ್ನೆಗೆ ಮರಣೋತ್ತರ ಪರೀಕ್ಷೆಯ ವರದಿಯಿಂದ ಉತ್ತರ ಸಿಗಬೇಕಿದೆ.
ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಸಿದ್ಧಾರ್ಥ್ ಶುಕ್ಲಾ ಅಗಲಿದ್ದಾರೆ. ಮಾಡೆಲ್ ಆಗಿ ವೃತ್ತಿಜೀವನ ಆರಂಭಿಸಿದ್ದ ಅವರು ನಂತರ ಕಿರುತೆರೆಯಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಹಲವು ಧಾರಾವಾಹಿಗಳಲ್ಲಿ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಬಿಗ್ ಬಾಸ್ ಸೀಸನ್ 13ರಲ್ಲಿ ಅವರು ವಿನ್ನರ್ ಆಗಿ ಹೊರಹೊಮ್ಮಿದ ಬಳಿಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದರು. ಬಿಗ್ ಬಾಸ್ ಮಾತ್ರವಲ್ಲದೆ, ‘ಕತ್ರೋಂಕೆ ಕಿಲಾಡಿ ಸೀಸನ್ 7’ರಲ್ಲೂ ಅವರು ವಿನ್ನರ್ ಆಗಿದ್ದರು. ಬಿಗ್ ಬಾಸ್ 14ರಲ್ಲಿ ಅವರು ಗೆಸ್ಟ್ ಆಗಿ ದೊಡ್ಮನೆ ಪ್ರವೇಶಿಸಿದ್ದರು.
ಸೀರಿಯಲ್ನಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದು ಮಾತ್ರವಲ್ಲದೆ, ಹಲವು ಧಾರಾವಾಹಿಗಳಲ್ಲಿ ಸಿದ್ಧಾರ್ಥ್ ಶುಕ್ಲಾ ಅತಿಥಿ ಪಾತ್ರ ಮಾಡಿದ್ದರು. ಬಾಲಿವುಡ್ನ ಕೆಲವು ಸಿನಿಮಾಗಳಲ್ಲೂ ಕೂಡ ಅವರು ನಟಿಸಿದ್ದರು. ವರುಣ್ ಧವನ್ ನಾಯಕತ್ವದ ‘ಹಂಪ್ಟಿ ಶರ್ಮಾ ಕಿ ದುಲ್ಹನಿಯಾ’ ಚಿತ್ರದಲ್ಲಿ ಅವರೊಂದು ಪಾತ್ರ ಮಾಡಿದ್ದರು. ಏಕ್ತಾ ಕಪೂರ್ ನಿರ್ಮಾಣದ ‘ಬ್ರೋಕನ್ ಬಟ್ ಬ್ಯೂಟಿಫುಲ್ 3’ ವೆಬ್ ಸಿರೀಸ್ನಲ್ಲಿ ಸಿದ್ಧಾರ್ಥ್ ನಟಿಸಿದ್ದರು. ಈ ವರ್ಷ ಓಟಿಟಿ ಮೂಲಕ ಅದು ರಿಲೀಸ್ ಆಗಿತ್ತು.
ಇದನ್ನೂ ಓದಿ: Sidharth Shukla Death: ಬಿಗ್ ಬಾಸ್ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ