AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿರಿಕನ್ನಡ’ದಲ್ಲಿ ಎರಡು ಧಾರಾವಾಹಿ ಒಂದು ರಿಯಾಲಿಟಿ ಶೋ: ಎಸ್. ನಾರಾಯಣ್ ಪುತ್ರ ಕಿರುತೆರೆ ಪ್ರವೇಶ

Siri Kannada Tv Channel: ಈಗಾಗಲೇ ಕೆಲವು ಉತ್ತಮ ಧಾರಾವಾಹಿಗಳಿಂದ ಗಮನ ಸೆಳೆದಿರುವ ಸಿರಿ ಕನ್ನಡ ಟಿವಿ ವಾಹಿನಿ ಇದೀಗ ಎರಡು ಹೊಸ ಧಾರಾವಾಹಿ ಹಾಗೂ ಒಂದು ರಿಯಾಲಿಟಿ ಶೋ ಪ್ರಸಾರ ಮಾಡಲು ಸಜ್ಜಾಗಿದೆ.

'ಸಿರಿಕನ್ನಡ'ದಲ್ಲಿ ಎರಡು ಧಾರಾವಾಹಿ ಒಂದು ರಿಯಾಲಿಟಿ ಶೋ: ಎಸ್. ನಾರಾಯಣ್ ಪುತ್ರ ಕಿರುತೆರೆ ಪ್ರವೇಶ
ಸಿರಿ ಕನ್ನಡ
ಮಂಜುನಾಥ ಸಿ.
| Updated By: ಮದನ್​ ಕುಮಾರ್​|

Updated on:Jun 01, 2023 | 8:16 PM

Share

ಸಿರಿಕನ್ನಡ‘ (Siri Kannada) ವಾಹಿನಿಯು ಕೆಲವು ಉತ್ತಮ ಧಾರಾವಾಹಿಗಳ (Serial) ಮೂಲಕ ಜನಮನ ಗೆದ್ದಿದೆ. ಇದೀಗ ಎರಡು ಮೆಗಾ ಧಾರಾವಾಹಿಗಳು ಒಂದು ರಿಯಾಲಿಟಿ ಶೋ (Reality Show) ಅನ್ನು ಪರಿಚಯಿಸಲು ‘ಸಿರಿಕನ್ನಡ’ ವಾಹಿನಿ ತಯಾರಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವಾಹಿನಿಯ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ ”ಸಿರಿಕನ್ನಡ ಚಾನೆಲ್​ಗೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ. ಈಗಾಗಲೇ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ಮೂಲಕ ‘ಸಿರಿಕನ್ನಡ’ ಕನ್ನಡಿಗರ ಮನ ಗೆದ್ದಿದೆ. ಜೂನ್ 5 ರಿಂದ ‘ಊರ್ಮಿಳಾ’ ಹಾಗೂ ‘ಬ್ರಾಹ್ಮಿನ್ಸ್ ಕೆಫೆ’ ಎಂಬ ಎರಡು ಮೆಗಾ ಧಾರಾವಾಹಿಗಳು ಹಾಗೂ ‘ಸಖತ್ ಜೋಡಿ’ ಎಂಬ ರಿಯಾಲಿಟಿ ಶೋ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ನಮ್ಮ ವಾಹಿನಿಯಿಂದ ಅಪಾರ ವೆಚ್ಚದಲ್ಲಿ ಈ ರಿಯಾಲಿಟಿ ಶೋ ನಿರ್ಮಾಣವಾಗುತ್ತಿದೆ. ಈ ಶೋನಲ್ಲಿ ಭಾರಿ ಮೊತ್ತದ ಉಡುಗೊರೆಗಳು ಇದೆ. ಮುಂದೆ ನಮ್ಮ ವಾಹಿನಿಯ ವೀಕ್ಷಕರಿಗೆ ಅರ್ಧಗಂಟೆಗೊಮ್ಮೆ ಪ್ರಶ್ನೆ ಕೇಳುವುದು. ಗೆದ್ದವರಿಗೆ ವಿಶೇಷ ಬಹುಮಾನ ನೀಡುವ ಯೋಜನೆ ಕೂಡ ಹಾಕಿಕೊಂಡಿದ್ದೇವೆ ಎಂದರು.

ಹಾಸ್ಯನಟ ಹಿತೇಶ್ ಮಾತನಾಡಿ, ”ನನ್ನನ್ನು ಹಾಸ್ಯ ನಟನಾಗಿ ಗುರುತಿಸಿದ್ದೀರಿ. ‘ಸಖತ್ ಜೋಡಿ’ ಎಂಬ ಸಖತ್ ಕಾರ್ಯಕ್ರಮವನ್ನು ನಾನು ಹಾಗೂ ಹೇಮಲತಾ ನಿರೂಪಣೆ ಮಾಡುತ್ತಿದ್ದೇವೆ. ಈಗಾಗಲೇ ಮೂರು ಎಪಿಸೋಡ್ ಚಿತ್ರೀಕರಣವಾಗಿದೆ. ‘ಊರ್ಮಿಳಾ’ ಧಾರಾವಾಹಿ ತಂಡದವರು, ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಟಾಪರ್ಸ್ ಹಾಗೂ ಜಾನಪದ ಕಲಾವಿದರು ಪಾಲ್ಗೊಂಡಿದ್ದರು. ಜೂನ್ 5 ರಿಂದ ಸೋಮವಾರದಿಂದ ಶುಕ್ರವಾರದವರೆಗೂ ಸಂಜೆ 6ಗಂಟೆಗೆ ‘ಸಖತ್ ಜೋಡಿ’ ಪ್ರಸಾರವಾಗಲಿದೆ. ಇದಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ ಎಂದು ತಿಳಿಸಿದರು.

ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಪುತ್ರ ಪಂಕಜ್ ಹಾಗೂ ರಶ್ಮಿತಾ ಪ್ರಧಾನಪಾತ್ರದಲ್ಲಿ ನಟಿಸುತ್ತಿರುವ ‘ಊರ್ಮಿಳಾ’ ಧಾರಾವಾಹಿ ಇದೇ ಜೂನ್ 5 ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗಲಿದೆ. ”ನಾನು ಚಿಕ್ಕ ವಯಸ್ಸಿನಲ್ಲಿ ಬಾಲ ಕಲಾವಿದನಾಗಿ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದೆ. ಈಗ ಈ ಧಾರಾವಾಹಿ ಮೂಲಕ ಕಿರುತೆರೆಗೆ ಮತ್ತೆ ಬಂದಿದ್ದೇನೆ” ಎಂದರು ಪಂಕಜ್. ರಶ್ಮಿತಾ, ಆಶಾರಾಣಿ, ಶಿವು ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು.

ರವಿ.ಆರ್.ಗರಣಿ ಕಥೆ ಬರೆದಿರುವ ‘ಬ್ರಾಹ್ಮಿನ್ಸ್ ಕೆಫೆ’ ವಿಭಿನ್ನ ಕಥಾಹಂದರ ಹೊಂದಿದೆ. ಜೂನ್ 5ರಿಂದ ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಶಿವು ಎಂಬ ಹೊಸಹುಡುಗ ಈ ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸುತ್ತಿದ್ದಾನೆ. ಗಾಯತ್ರಿ ಸೆಲ್ವಂ ಹಾಗೂ ಸೆಲ್ವಂ ಈ ಧಾರಾವಾಹಿ ನಿರ್ಮಾಣ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಸಂಜೀವ್ ತಗಡೂರು ತಿಳಿಸಿದರು. ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ಶ್ರೀನಾಥ್ ವಸಿಷ್ಠ, ಪ್ರಥಮ ಪ್ರಸಾದ್, ಶಿವು, ರಾಮಸ್ವಾಮಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸಂಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಅವರು ಉಪಸ್ಥಿತರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:36 pm, Thu, 1 June 23

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ