Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್​’ಗೆ ಮಹೇಶ್ ಬಾಬು-ಸಿತಾರಾ ಗ್ರ್ಯಾಂಡ್ ಎಂಟ್ರಿ; ಇಲ್ಲಿದೆ ವಿಡಿಯೋ

ಮಹೇಶ್ ಬಾಬು ಅವರು ಟಾಲಿವುಡ್​ನ ಬೇಡಿಕೆಯ ನಟ. ಅವರಿಗೆ ಟಾಲಿವುಡ್​ನಲ್ಲಿ ಮಾತ್ರವಲ್ಲ ಇಡೀ ಭಾರತದಾದ್ಯಂತ ಫ್ಯಾನ್ಸ್ ಇದ್ದಾರೆ. ಈ ಕಾರಣಕ್ಕೆ ಜೀ ತೆಲುಗು ವಾಹಿನಿ ಮಹೇಶ್ ಬಾಬು ಅವರನ್ನು ತಮ್ಮ ಪ್ರಚಾರ ರಾಯಭಾರಿ ಆಗಿ ನೇಮಕ ಮಾಡಿಕೊಂಡಿದೆ.

‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್​’ಗೆ ಮಹೇಶ್ ಬಾಬು-ಸಿತಾರಾ ಗ್ರ್ಯಾಂಡ್ ಎಂಟ್ರಿ; ಇಲ್ಲಿದೆ ವಿಡಿಯೋ
ಸಿತಾರಾ-ಮಹೇಶ್ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 30, 2022 | 4:52 PM

ಮಹೇಶ್ ಬಾಬು (Mahesh Babu) ಅವರು ತಮ್ಮ ಮಗಳು ಸಿತಾರಾ ಅವರಿಗೆ ಈಗಿನಿಂದಲೇ ಚಿತ್ರರಂಗದ ನಂಟನ್ನು ಬೆಳೆಸುತ್ತಿದ್ದಾರೆ. ಸಿತಾರಾ (Sitara Ghattamaneni) ಕೂಡ ಬಣ್ಣದ ಲೋಕದಲ್ಲಿ ಮಿಂಚಲು ರೆಡಿ ಆಗುತ್ತಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸ್ಟಾರ್ ನಟನ ಮಗಳು ಎಂಬ ಕಾರಣಕ್ಕೆ ಲಕ್ಷಾಂತರ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದರ ಜತೆಗೆ ಸಿತಾರಾ ಕೂಡ ತಮ್ಮ ಟ್ಯಾಲೆಂಟ್ ತೋರಿಸುತ್ತಿದ್ದಾರೆ. ತಾವೇ ಯೂಟ್ಯೂಬ್ ಚಾನೆಲ್ ಆರಂಭಿಸಿ ವಿವಿಧ ಸೆಲೆಬ್ರಿಟಿಗಳನ್ನು ಅವರು ಸಂದರ್ಶನ ಮಾಡುತ್ತಿದ್ದಾರೆ. ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನಲ್​ ಹಾಡಿನಲ್ಲೂ ಸಿತಾರಾ ಹೆಜ್ಜೆ ಹಾಕಿದ್ದರು. ಈಗ ಮಹೇಶ್ ಬಾಬು ಜತೆ ಅವರು ‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ಇದರ ಪ್ರೋಮೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಇದಕ್ಕೆ ಫ್ಯಾನ್ಸ್ ಸಾಕಷ್ಟು ಪ್ರೀತಿ ತೋರುತ್ತಿದ್ದಾರೆ.

ಮಹೇಶ್ ಬಾಬು ಅವರು ಟಾಲಿವುಡ್​ನ ಬೇಡಿಕೆಯ ನಟ. ಅವರಿಗೆ ಟಾಲಿವುಡ್​ನಲ್ಲಿ ಮಾತ್ರವಲ್ಲ ಇಡೀ ಭಾರತದಾದ್ಯಂತ ಫ್ಯಾನ್ಸ್ ಇದ್ದಾರೆ. ಈ ಕಾರಣಕ್ಕೆ ಜೀ ತೆಲುಗು ವಾಹಿನಿ ಮಹೇಶ್ ಬಾಬು ಅವರನ್ನು ತಮ್ಮ ಪ್ರಚಾರ ರಾಯಭಾರಿ ಆಗಿ ನೇಮಕ ಮಾಡಿಕೊಂಡಿದೆ. ಮುಂದಿನ ಒಂದು ವರ್ಷಗಳ ಕಾಲ ಜೀ ಕನ್ನಡದಲ್ಲಿ ಪ್ರಸಾರ ಆಗುವ ರಿಯಾಲಿಟಿ ಶೋ, ಕಾರ್ಯಕ್ರಮಗಳನ್ನು ಮಹೇಶ್ ಬಾಬು ಪ್ರಮೋಟ್ ಮಾಡಲಿದ್ದಾರೆ. ಈ ಕಾರಣದಿಂದಲೇ ಅವರು ಮಗಳ ಜತೆ ‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್​’ ಶೋಗೆ ಆಗಮಿಸಿದ್ದರು.

ಮಹೇಶ್ ಹಾಗೂ ಸಿತಾರಾಗೆ ‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್​’ನಲ್ಲಿ ಅದ್ದೂರಿಯಾಗಿ ಸ್ವಾಗತ ನೀಡಲಾಗಿದೆ. ‘ಸರ್ಕಾರು ವಾರಿ ಪಾಟ’ ಚಿತ್ರದ ‘ಪೆನ್ನಿ..’ ಹಾಡಿಗೆ ಸಿತಾರಾ ಡ್ಯಾನ್ಸ್ ಮಾಡಿದ್ದಾರೆ. ಮಗಳ ಜತೆ ರಿಯಾಲಿಟಿ ಶೋಗೆ ಬಂದಿದ್ದಕ್ಕೆ ಮಹೇಶ್ ಬಾಬು ಸಂತಸ ವ್ಯಕ್ತಪಡಿಸಿದ್ದಾರೆ. ಈ ಪ್ರೋಮೋವನ್ನು ಸೋಶಿಯಲ್ ಮೀಡಿಯಾದಲ್ಲಿ ಜೀ ತೆಲುಗು ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋಗೆ ಅಭಿಮಾನಿಗಳು ಸಾಕಷ್ಟು ಪ್ರೀತಿ ತೋರುತ್ತಿದ್ದಾರೆ. ಈ ಕಾರ್ಯಕ್ರಮವನ್ನು ಅಕುಲ್ ಬಾಲಾಜಿ ಅವರು ನಡೆಸಿಕೊಡುತ್ತಿದ್ದಾರೆ ಅನ್ನೋದು ವಿಶೇಷ.

ಇದನ್ನೂ ಓದಿ
Image
ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಇದನ್ನೂ ಓದಿ: ಅಪ್ಪನಿಗಾಗಿ ಪಾಪರಾಜಿ ಕೆಲಸ ಮಾಡಿದ ಮಹೇಶ್ ಬಾಬು ಮಗ ಗೌತಮ್

ಮಹೇಶ್ ಬಾಬು ಅವರು ಚಿತ್ರರಂಗದಲ್ಲಿ ಸೂಪರ್ ಸ್ಟಾರ್. ಅವರ ಮಗಳು ಕೂಡ ಶೀಘ್ರದಲ್ಲೇ ಸಿನಿಮಾಗಳಲ್ಲಿ ಬ್ಯುಸಿ ಆಗಬಹುದು. ಅವರು ನಟಿ ಆಗಿ ಚಿತ್ರರಂಗದಲ್ಲಿ ಮಿಂಚಲಿ ಎಂಬುದು ಮಹೇಶ್ ಬಾಬು ಫ್ಯಾನ್ಸ್ ಆಸೆ.

Published On - 4:50 pm, Tue, 30 August 22

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ