‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ

ರತ್ನಮಾಲಾ ಜತೆ ಆದಿ (ರಕ್ಷಿತ್) ಕೂಡ ತೆರಳಿದ್ದಾನೆ ಎಂದು ಕಥೆಯಲ್ಲಿ ತೋರಿಸಲಾಗಿದೆ. ಆದರೆ, ಈಗ ರಕ್ಷಿತ್ ಅವರು ಧಾರಾವಾಹಿಯಿಂದಲೇ ಹೊರ ಬಿದ್ದಿದ್ದಾರೆ.

‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ
ರಕ್ಷಿತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 18, 2022 | 3:35 PM

ಸ್ಮೈಲ್​ ಗುರು ರಕ್ಷಿತ್ (Smileguru Rakshith) ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ (Kannadathi Serial) ಆದಿ ಆಗಿ ಮಿಂಚಿದರು. ಹರ್ಷನ ಸಹೋದರನಾಗಿ, ಸಾನಿಯಾ ಗಂಡನಾಗಿ ಆದಿ ಪಾತ್ರ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಇತ್ತೀಚೆಗೆ ಅವರು ತೆರೆಮೇಲೆ ಕಾಣಿಸಿಕೊಳ್ಳುತ್ತಿರಲಿಲ್ಲ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಈ ವಿಚಾರವನ್ನು ಈಗ ಸ್ವತಃ ರಕ್ಷಿತ್ ಖಚಿತಪಡಿಸಿದ್ದಾರೆ. ವೈಯಕ್ತಿಕ ಕಾರಣ ನೀಡಿ ಅವರು ಧಾರಾವಾಹಿಯಿಂದ ಹೊರ ಬಂದ ಬಗ್ಗೆ ಅವರು ಘೋಷಣೆ ಮಾಡಿದ್ದಾರೆ. ಶೀಘ್ರದಲ್ಲೇ ‘ಕನ್ನಡ ಬಿಗ್ ಬಾಸ್ 9’ ಆರಂಭ ಆಗುತ್ತಿದೆ. ದೊಡ್ಮನೆ ಒಳಗೆ ಹೋಗೋಕೆ ಅವರು ‘ಕನ್ನಡತಿ’ ಧಾರಾವಾಹಿ ತೊರೆದರಾ ಎಂಬ ಪ್ರಶ್ನೆ ಮೂಡಿದೆ.

‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷನ ತಾಯಿ ರತ್ನಮಾಲಾಗೆ ಅನಾರೋಗ್ಯ ಕಾಡಿದೆ. ರತ್ನಮಾಲಾಗೆ ಚಿಕಿತ್ಸೆ ನೀಡಲು ಅಮೆರಿಕಕ್ಕೆ ಕರೆದುಕೊಂಡು ಹೋಗಲಾಗಿದೆ. ರತ್ನಮಾಲಾ ಜತೆ ಆದಿ (ರಕ್ಷಿತ್) ಕೂಡ ತೆರಳಿದ್ದಾನೆ ಎಂದು ಕಥೆಯಲ್ಲಿ ತೋರಿಸಲಾಗಿದೆ. ಆದರೆ, ಈಗ ರಕ್ಷಿತ್ ಅವರು ಧಾರಾವಾಹಿಯಿಂದಲೇ ಹೊರ ಬಿದ್ದಿದ್ದಾರೆ. ಈ ಬಗ್ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​
Image
‘ಅವಕಾಶ ಇದ್ದಿದ್ರೆ ನಾನು ಒಂದು ಝೂ ಮಾಡ್ತಿದ್ದೆ’; ‘ಕನ್ನಡತಿ’ ನಟ ಕಿರಣ್​ ರಾಜ್​

‘ಕನ್ನಡತಿ ಯಾವಾಗಲೂ ಮತ್ತು ಎಂದೆಂದಿಗೂ ವಿಶೇಷ. ವೈಯಕ್ತಿಕ ಕಾರಣಗಳಿಂದ ನಾನು ಈ ಧಾರಾವಾಹಿಯಿಂದ ಹೊರ ಬಂದಿದ್ದೇನೆ. 6 ವರ್ಷಗಳ ಕಾಲ ನಿರಂತರವಾಗಿ ಕೆಲಸ ನೀಡಿದ್ದಕ್ಕೆ ಕಲರ್ಸ್​ ಕನ್ನಡಕ್ಕೆ ಧನ್ಯವಾದ. ನನ್ನನ್ನು ಸಹಿಸಿಕೊಂಡಿದ್ದಕ್ಕೆ ಪರಮೇಶ್ವರ್ ಗುಂಡ್ಕಲ್​ಗೆ ಧನ್ಯವಾದ. ಇದು ಸಣ್ಣ ಗ್ಯಾಪ್ ಅಷ್ಟೇ. ನಾನು ಮತ್ತೆ ಕಂಬ್ಯಾಕ್ ಮಾಡುತ್ತೇನೆ. ಮಿಸ್ ಮಾಡಿಕೊಳ್ಳಿ ಮತ್ತು ಹಾರೈಸಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ಹರ್ಷ-ಭುವಿ ಮದುವೆಯಿಂದ ಅರ್ಧಕ್ಕೆ ನಿರ್ಗಮಿಸಿದ ‘ಕನ್ನಡತಿ’ಯ ರತ್ನಮಾಲಾ ನಿಜಕ್ಕೂ ಇರೋದೆಲ್ಲಿ? ಇಲ್ಲಿದೆ ಉತ್ತರ

‘ಕನ್ನಡ ಬಿಗ್ ಬಾಸ್ ಸೀಸನ್ 9’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತೀಚೆಗೆ ಸುದೀಪ್ ಅವರು ಈ ಶೋನ ಪ್ರೋಮೋ ಶೂಟ್ ಮಾಡಿಸಿದ್ದಾರೆ. ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ. ದೊಡ್ಮನೆ ಸೇರುವ ಸ್ಪರ್ಧಿಗಳಲ್ಲಿ ರಕ್ಷಿತ್ ಕೂಡ ಒಬ್ಬರಾಗಿರುತ್ತಾರೆ ಎಂದು ಕೆಲವರು ಊಹಿಸಿದ್ದಾರೆ. ಆದರೆ ಸದ್ಯಕ್ಕಂತೂ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಇಲ್ಲ ಎಂಬ ಬೇಸರ ವೀಕ್ಷಕರನ್ನು ಅತಿಯಾಗಿ ಕಾಡುತ್ತಿದೆ. ರಕ್ಷಿತ್ ಅವರು ‘ಸ್ಮೈಲ್ ಗುರು’ ಹೆಸರಿನ ಡ್ಯಾನ್ಸ್ ಕ್ಲಾಸ್ ನಡೆಸುತ್ತಿದ್ದಾರೆ. ಇದರ ಕೆಲಸದ ಕಾರಣದಿಂದಲೂ ಅವರು ಬ್ರೇಕ್ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ